ಮಂಗಳೂರು: ರಾಜ್ಯದಲ್ಲಿ ಪ್ರಸಕ್ತ ಸಾಲಿನ SSLC ಪರೀಕ್ಷೆ ನಡೆಯುತ್ತಿದ್ದು, ಬಹುತೇಕ ಎಲ್ಲಾ ಪರೀಕ್ಷೆಗಳೂ ಯಶಸ್ವಿಯಾಗಿ ನಡೆದಿವೆ. ಈ ಮಧ್ಯೆ ಇಂದು ಎಸ್.ಎಸ್.ಎಲ್.ಸಿ ವಿಜ್ಞಾನ ಪರೀಕ್ಷೆ ಕೊನೆಯದ್ದಾಗಿ ನಡೆಯುತ್ತಿದೆ. ಆದರೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ (belthangady) ತಾಲೂಕಿನಲ್ಲಿ ಅಚಾತುರ್ಯವೊಂದು ನಡೆದಿದ್ದು, ಬೆಳ್ತಂಗಡಿ ತಾಲೂಕಿನ ಲೈಲಾ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪರೀಕ್ಷೆ ಬರೆಯಲು ತಾಯಿ ಜೊತೆ ಹೋಗುತ್ತಿದ್ದಾಗ ರಸ್ತೆ ಅಪಘಾತ ನಡೆದಿದ್ದು (road accident), ಗಾಯಗೊಂಡಿದ್ದಾಳೆ. ಆದರೆ ಸಮಯ ಪ್ರಜ್ಞೆ ತೋರಿದ ಶಾಲಾ ಆಡಳಿತ ಮಂಡಳಿಯು ಸದರಿ ವಿದ್ಯಾರ್ಥಿನಿಯ ಭವಿಷ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಆ ವಿದ್ಯಾರ್ಥಿನಿಯನ್ನು ಆಂಬುಲೆನ್ಸ್ ನಲ್ಲಿ (ambulance) ಪರೀಕ್ಷಾ ಕೇಂದ್ರಕ್ಕೆ ಕರೆತಂದು ಪರೀಕ್ಷೆ ಬರೆಯಿಸಿದ್ದಾರೆ! (SSLC exam 2022)
ನಾವೂರು ಗ್ರಾಮದ ಸಂಪಿಂಜಾ ನಿವಾಸಿ ಲಕ್ಷ್ಮಣ -ಮಮತಾ ದಂಪತಿಯ ಪುತ್ರಿ ತನ್ವಿ(15) ಅಪಘಾತದಲ್ಲಿ ಸಿಲುಕಿದ ವಿದ್ಯಾರ್ಥಿನಿ. ಬೆಳ್ತಂಗಡಿ ತಾಲೂಕಿನ ಲೈಲಾ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ (Laila saint mary’s school) ಎಸ್.ಎಸ್.ಎಲ್.ಸಿ ವ್ಯಾಸಂಗ ಮಾಡುತ್ತಿದ್ದಾರೆ. ತಾಯಿ ಮಮತಾ ಜೊತೆ ಸ್ಕೂಟರ್ ನಲ್ಲಿ ಪರೀಕ್ಷಾ ಕೇಂದ್ರಕ್ಕೆ ಬರುವಾಗ ಅಪಘಾತ ಸಂಭವಿಸಿದೆ, ಸ್ಕೂಟರ್ ಸ್ಕಿಡ್ ಅಗಿ ಪಲ್ಟಿ ಆಗಿ ಗಾಯಗೊಂಡಿದ್ದಾರೆ. ಅವರಿಗೆ ತಕ್ಷಣ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ವಿಷಯ ತಿಳಿದ ಲೊಯಿಲಾ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿಯು 11:45 ರಿಂದ 2:45 ವರೆಗೆ ಪರೀಕ್ಷೆ ಬರೆಯಲು ತನ್ವಿಗೆ ವಿಶೇಷ ಅವಕಾಶ ಕಲ್ಪಿಸಿದ್ದಾರೆ. ಒಬ್ಬ ನರ್ಸ್ ಮತ್ತು ಆಂಬುಲೆನ್ಸ್ ನಿಯೋಜನೆ ಮಾಡಿದ್ದಾರೆ. ಗಮನಾರ್ಹವೆಂದರೆ ಪರೀಕ್ಷೆ ಮುಗಿದ ಬಳಿಕ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆತಂದು ತ್ರೀವ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.
ಮಾಸ್ಕ್ ಧರಿಸಿ ಬೇರೆಯವರಿಗಾಗಿ SSLC ಪರೀಕ್ಷೆ ಬರೆಯಲು ಬಂದ ನಕಲಿ ವಿದ್ಯಾರ್ಥಿ ಸಿಕ್ಕಿಬಿದ್ದ:
ತುಮಕೂರು: ತಿಪಟೂರಿನ ಟ್ಯಾಗೂರ್ ಶಾಲೆಯಲ್ಲಿ ಮಾಸ್ಕ್ ಧರಿಸಿ ಬೇರೆಯವರಿಗಾಗಿ SSLC ಪರೀಕ್ಷೆ ಬರೆಯಲು ಬಂದು ನಕಲಿ ವಿದ್ಯಾರ್ಥಿಯೊಬ್ಬ ಸಿಕ್ಕಿಬಿದ್ದಿದ್ದಾನೆ. ಮಂಜುನಾಥ್. ಎ ಎಂಬುವನ ಬದಲಿಗೆ ಮುರಳೀಧರ್ ಎಂಬಾತ ಪರೀಕ್ಷೆಗೆ ಹಾಜರಾಗಿದ್ದ. ಪರೀಕ್ಷಾ ಕೊಠಡಿ ವೀಕ್ಷಕರಿಂದ ಪರಿಶೀಲನೆ ವೇಳೆ ನಕಲಿ ವಿದ್ಯಾರ್ಥಿ ಪರೀಕ್ಷೆ ಬರೆಯುತ್ತಿರುವ ವಿಷಯ ಬೆಳಕಿಗೆ ಬಂದಿದೆ. ಮಾಸ್ಕ್ ತೆಗೆಸಿ ಪರಿಶೀಲನೆ ನಡೆಸಿದಾಗ ಅಕ್ರಮ ಬಯಲಾಗಿದೆ! ಬಳಿಕ ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಮುರಳೀಧರ್ನಿಂದ ಅಪಾಲಜಿ ಬರೆಸಿಕೊಂಡು ಬಿಟ್ಟುಕಳುಹಿಸಿದ್ದಾರೆ.
Also Read:
KV Ushashri Charan: ಕೂಡ್ಲಿಗಿ ತಾಲೂಕಿನ ಮೊಮ್ಮಗಳು ನೆರೆಯ ವೈಎಸ್ಆರ್ ಜಗನ್ ಸಂಪುಟದಲ್ಲಿ ಇಂದಿನಿಂದ ಸಚಿವೆ!
Also Read:
ಚಿತ್ರರಂಗದಲ್ಲಿ 25 ವರ್ಷ ಪೂರೈಸಿದ ಜ್ಯೂ. ಎನ್ಟಿಆರ್; ‘ಬಾಲ ರಾಮಾಯಣಂ’ ನೆನಪಿಸಿದ ಫೋಟೋಗಳು
Published On - 4:28 pm, Mon, 11 April 22