AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ದಸರಾ ರಜೆ ವೇಳೆಯೇ ಪದವಿ ಸೆಮಿಸ್ಟರ್ ಪರೀಕ್ಷೆ; ಸೈಂಟ್ ಆಗ್ನೆಸ್ ಕಾಲೇಜು ಗೇಟ್ ಎದುರು ವಿದ್ಯಾರ್ಥಿಗಳ ಪ್ರತಿಭಟನೆ!

ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ದಸರಾ ರಜೆ ವೇಳೆಯೂ ಪದವಿ ಸೆಮಿಸ್ಟರ್ ಪರೀಕ್ಷೆ ಆಯೋಜಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಮತ್ತು ಎಬಿವಿಪಿ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದರು. ಪರೀಕ್ಷೆ ಬಹಿಷ್ಕರಿಸಿ ಗೇಟ್ ಎದುರು ಆಭಿಮಾನಿಗಳು ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ನಾಯಕರ ಬಂಧನಕ್ಕೆ ಮುಂದಾದ ಪೊಲೀಸರ ಜೀಪ್ ಅನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು.

ಮಂಗಳೂರು: ದಸರಾ ರಜೆ ವೇಳೆಯೇ ಪದವಿ ಸೆಮಿಸ್ಟರ್ ಪರೀಕ್ಷೆ; ಸೈಂಟ್ ಆಗ್ನೆಸ್ ಕಾಲೇಜು ಗೇಟ್ ಎದುರು ವಿದ್ಯಾರ್ಥಿಗಳ ಪ್ರತಿಭಟನೆ!
ಪ್ರತಿಭಟನೆ ಮಾಡುತ್ತಿರುವ ವಿದ್ಯಾರ್ಥಿಗಳು
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Oct 12, 2026 | 10:16 AM

Share

ಮುಖ್ಯಾಂಶಗಳು

  • ದಸರಾ ರಜೆ ವೇಳೆಯೂ ಪರೀಕ್ಷೆ ಆಯೋಜಿಸಿರುವ ಕಾಲೇಜು ವಿರುದ್ಧ ಆಕ್ರೋಶ.
  • ಸೈಂಟ್ ಆಗ್ನೆಸ್ ಕಾಲೇಜು ಗೇಟ್ ಎದುರು ವಿದ್ಯಾರ್ಥಿಗಳ ತೀವ್ರ ಪ್ರತಿಭಟನೆ.
  • ಎಬಿವಿಪಿ ನಾಯಕರ ಬಂಧನ ಯತ್ನ ವಿರೋಧಿಸಿ ಜೀಪ್ ತಡೆದ ವಿದ್ಯಾರ್ಥಿನಿಯರು.

ಮಂಗಳೂರು, ಅಕ್ಟೋಬರ್ 12: ದಸರಾ ಹಬ್ಬದ ಸಂಭ್ರಮ ಹಾಗೂ ರಜೆಯ ಅವಧಿಯಲ್ಲೇ ಪದವಿ ಸೆಮಿಸ್ಟರ್ ಪರೀಕ್ಷೆಗಳನ್ನು ಆಯೋಜಿಸಿರುವ ಮಂಗಳೂರಿನ ಪ್ರತಿಷ್ಠಿತ ಸೈಂಟ್ ಆಗ್ನೆಸ್ ಕಾಲೇಜು ಆಡಳಿತ ಮಂಡಳಿಯ ವಿರುದ್ಧ ವಿದ್ಯಾರ್ಥಿಗಳು ಮತ್ತು ಎಬಿವಿಪಿ ಸಂಘಟನೆಯು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಮಂಗಳೂರಿನ ಬೆಂದೂರ್‌ವೆಲ್ ಬಳಿ ಇರುವ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ಇಂದಿನಿಂದ ಅಕ್ಟೋಬರ್ 28ರವರೆಗೆ ಪದವಿ ವಿದ್ಯಾರ್ಥಿಗಳಿಗೆ ಸೆಮಿಸ್ಟರ್ ಪರೀಕ್ಷೆಗಳನ್ನು ನಿಗದಿಪಡಿಸಲಾಗಿದೆ. ನಾಡಹಬ್ಬ ದಸರಾ ಆಚರಣೆ ಹಾಗೂ ಮಂಗಳೂರು ದಸರಾದಲ್ಲಿ ಭಾಗವಹಿಸಬೇಕಿದ್ದ ವಿದ್ಯಾರ್ಥಿಗಳು ಪ್ರತಿಭಟನೆಗಿಳಿದಿದ್ದರೂ ರಜೆ ನೀಡದೆ ಪರೀಕ್ಷೆ ನಡೆಸಲು ಮುಂದಾದ ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಡಳಿತ ಮಂಡಳಿಯಿಂದಿಲ್ಲ ಸ್ಪಂದನೆ

ಪರೀಕ್ಷೆಯನ್ನು ಮುಂದೂಡುವಂತೆ ಕಾಲೇಜು ಆಡಳಿತಕ್ಕೆ ಮುಂಚಿತವಾಗಿ ಮನವಿ ಸಲ್ಲಿಸಿದ್ದರೂ, ಆಡಳಿತ ಮಂಡಳಿಯು ಸ್ಪಂದಿಸದೆ ಕಠಿಣ ನಿರ್ಧಾರ ಕೈಗೊಂಡಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಇದಕ್ಕೆ ಆಕ್ರೋಶಗೊಂಡು ನೂರಾರು ವಿದ್ಯಾರ್ಥಿಗಳು ಪರೀಕ್ಷೆಯನ್ನು ಬಹಿಷ್ಕರಿಸಿ ಕಾಲೇಜಿನ ಗೇಟ್ ಎದುರು ಕುಳಿತು ಪ್ರತಿಭಟನೆ ನಡೆಸಿದರು. ಎಬಿವಿಪಿ ವಿದ್ಯಾರ್ಥಿ ಸಂಘಟನೆಯೂ ಈ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ಸೂಚಿಸಿದ್ದು, ಈಗಾಗಲೇ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೂ ಅಧಿಕೃತ ದೂರು ನೀಡಲಾಗಿದೆ.

ರಸ್ತೆ ಬಂದ್ ಮಾಡಿ ತೀವ್ರ ವಿರೋಧ

ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಸ್ಥಳಕ್ಕಾಗಮಿಸಿದ ಪೊಲೀಸರು, ಎಬಿವಿಪಿ ವಿದ್ಯಾರ್ಥಿ ನಾಯಕರನ್ನು ವಶಕ್ಕೆ ಪಡೆದು ಪೊಲೀಸ್ ಜೀಪಿನಲ್ಲಿ ಕರೆದೊಯ್ಯಲು ಮುಂದಾದರು. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿನಿಯರು ಮತ್ತು ಕಾರ್ಯಕರ್ತರು ಪೊಲೀಸ್ ಜೀಪ್‌ಗೆ ಅಡ್ಡಲಾಗಿ ನಿಂತು, ರಸ್ತೆ ಬಂದ್ ಮಾಡಿ ತೀವ್ರ ವಿರೋಧ ವ್ಯಕ್ತಪಡಿಸಿದರು. ಡಿಸಿಪಿ ಸೇರಿದಂತೆ ಉನ್ನತ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿದ್ದರೂ, ವಿದ್ಯಾರ್ಥಿಗಳು ಜೀಪ್ ಎದುರೇ ಮಲಗಿ ನಾಯಕರ ಬಿಡುಗಡೆಗೆ ಪಟ್ಟು ಹಿಡಿದರು.

ವಿದ್ಯಾರ್ಥಿಗಳ ಆಕ್ರೋಶ ಹಾಗೂ ಪ್ರತಿರೋಧಕ್ಕೆ ಮಣಿದ ಪೊಲೀಸರು ಅಂತಿಮವಾಗಿ ಜೀಪನ್ನು ಬದಿಗೆ ಹಾಕಬೇಕಾಯಿತು. ಎಬಿವಿಪಿ ನಾಯಕರನ್ನು ಬಿಡುಗಡೆ ಮಾಡುವವರೆಗೆ ಇಲ್ಲಿಂದ ಕದಲುವುದಿಲ್ಲ ಎಂದು ವಿದ್ಯಾರ್ಥಿಗಳು ಕಾಲೇಜು ಗೇಟ್ ಎದುರು ಪೊಲೀಸರಿಗೆ ಸವಾಲು ಹಾಕಿ ಪ್ರತಿಭಟನೆ ಮುಂದುವರಿಸಿದ್ದಾರೆ. ದಸರಾ ರಜೆ ಹೊತ್ತಿನಲ್ಲಿ ಹಬ್ಬದ ಉತ್ಸಾಹಕ್ಕೆ ತಣ್ಣೀರು ಎರಚಿರುವ ಕಾಲೇಜು ಆಡಳಿತದ ಈ ಧೋರಣೆ ವಿರುದ್ಧ ಶೈಕ್ಷಣಿಕ ವಲಯದಲ್ಲಿಯೂ ಚರ್ಚೆ ಹುಟ್ಟುಹಾಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:42 am, Mon, 12 October 26

Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
ಇಂಡಿ ಮೈತ್ರಿಕೂಟದಿಂದ ಸುಪ್ರೀಂ ಚಲೋ ಮೆರವಣಿಗೆ
ಇಂಡಿ ಮೈತ್ರಿಕೂಟದಿಂದ ಸುಪ್ರೀಂ ಚಲೋ ಮೆರವಣಿಗೆ
ಅಜ್ಜಿಯ ಅಂತ್ಯಕ್ರಿಯೆಗೂ ಬಿಡಲಿಲ್ಲ ಎಂದ ಸಿಜೆಪಿ ನಾಯಕರಿಗೆ ವಿಡಿಯೋ ತಿರುಗೇಟು
ಅಜ್ಜಿಯ ಅಂತ್ಯಕ್ರಿಯೆಗೂ ಬಿಡಲಿಲ್ಲ ಎಂದ ಸಿಜೆಪಿ ನಾಯಕರಿಗೆ ವಿಡಿಯೋ ತಿರುಗೇಟು
ಇಂಡಿಗೋ ವಿಮಾನದಲ್ಲಿ ಪವರ್ ಬ್ಯಾಂಕ್ ಸ್ಪೋಟ
ಇಂಡಿಗೋ ವಿಮಾನದಲ್ಲಿ ಪವರ್ ಬ್ಯಾಂಕ್ ಸ್ಪೋಟ
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ