ಗುರುತಿನ ಚೀಟಿಗಾಗಿ ಮಂಗಳೂರು ಪಾಲಿಕೆ ಆಯುಕ್ತರ ಕಚೇರಿಗೆ ಬೀದಿ ವ್ಯಾಪಾರಿಗಳಿಂದ ಮುತ್ತಿಗೆ

ಗುರುತಿನ ಚೀಟಿ ಹಾಗೂ ಪ್ರಮಾಣ ಪತ್ರ ವಿತರಣೆ ಮಾಡದ ಹಿನ್ನೆಲೆ ಮಂಗಳೂರು ಪಾಲಿಕೆ ಆಯುಕ್ತರ ಕಚೇರಿಗೆ ಇಂದು ಬೀದಿ ಬದಿ ವ್ಯಾಪಾರಿಗಳು ಮುತ್ತಿಗೆ ಹಾಕಿದ ಘಟನೆ ನಡೆಯಿತು. ವರ್ಷ ಕಳೆದರೂ ಗುರುತಿನ ಚೀಟಿ ನೀಡದ ಪಾಲಿಕೆ ವಿರುದ್ಧ ವ್ಯಾಪಾರಸ್ಥರು ಆಕ್ರೋಶ ಹೊರಹಾಕಿದ್ದು, ಈ ತಿಂಗಳ ಒಳಗಾಗಿ ವಿತರಣೆ ಮಾಡಲಾಗುವುದು ಎಂದು ಆಯುಕ್ತರು ಭರವಸೆ ನೀಡಿದ್ದಾರೆ.

ಗುರುತಿನ ಚೀಟಿಗಾಗಿ ಮಂಗಳೂರು ಪಾಲಿಕೆ ಆಯುಕ್ತರ ಕಚೇರಿಗೆ ಬೀದಿ ವ್ಯಾಪಾರಿಗಳಿಂದ ಮುತ್ತಿಗೆ
ಮಂಗಳೂರು ಮಹಾನಗರ ಪಾಲಿಕೆ
Image Credit source: mangalurusmartcity
Edited By: Rakesh Nayak Manchi

Updated on: Oct 05, 2023 | 12:39 PM

ಮಂಗಳೂರು, ಅ.5: ಗುರುತಿನ ಚೀಟಿ ಹಾಗೂ ಪ್ರಮಾಣ ಪತ್ರ ವಿತರಣೆ ಮಾಡದ ಹಿನ್ನೆಲೆ ಮಂಗಳೂರು (Mangaluru) ಪಾಲಿಕೆ ಆಯುಕ್ತರ ಕಚೇರಿಗೆ ಇಂದು ಬೀದಿ ಬದಿ ವ್ಯಾಪಾರಿಗಳು ಮುತ್ತಿಗೆ ಹಾಕಿದ ಘಟನೆ ನಡೆಯಿತು. ವರ್ಷ ಕಳೆದರೂ ಗುರುತಿನ ಚೀಟಿ ನೀಡದ ಪಾಲಿಕೆ ವಿರುದ್ಧ ವ್ಯಾಪಾರಸ್ಥರು ಆಕ್ರೋಶ ಹೊರಹಾಕಿದರು.

ಗುರುತಿನ ಚೀಟಿ ಮುದ್ರಣಗೊಂಡಿದ್ದು, ಪಟ್ಟಣ ವ್ಯಾಪಾರ ಸಮಿತಿ ಅನುಮೋದನೆ ನೀಡಿದೆ. ಆದರೂ ಚೀಟಿಗಳನ್ನು ಪಾಲಿಕೆ ವಿತರಣೆ ಮಾಡಿಲ್ಲ. ಹಲವು ಬಾರಿ ಪಾಲಿಕೆ ಮುಂದೆ ಪ್ರತಿಭಟಿಸಿದರೂ ಪ್ರಯೋಜನವಾಗಿಲ್ಲ. ಹೀಗಾಗಿ ಡಿವೈಎಫ್ಐ ನೇತೃತ್ವದಲ್ಲಿ ಬೀದಿಬದಿ ವ್ಯಾಪಾರಸ್ಥರು ದಿಢೀರ್​ ಮುತ್ತಿಗೆ ಹಾಕಿ ಗುರುತಿನ ಚೀಟಿ ಹಾಗೂ ಪ್ರಮಾಣಪತ್ರ ನೀಡುವಂತೆ ಒತ್ತಾಯಿಸಿದರು.

ಇದನ್ನೂ ಓದಿ: ಮಂಗಳೂರು: ಬಜರಂಗದಳ ಮುಖಂಡ ಮತ್ತು ತಂಡದಿಂದ ಗೂಂಡಾಗಿರಿ

ವ್ಯಾಪಾರಿಗಳ ಹೋರಾಟಕ್ಕೆ ಕೊನೆಗೂ ಸಿಕ್ಕ ಜಯ

ಸ್ಥಳಕ್ಕೆ ಆಗಮಿಸಿದ ಪಾಲಿಕೆ ಆಯುಕ್ತ ಆನಂದ್, ಈ ತಿಂಗಳ ಒಳಗೆ ಗುರುತಿನ ಚೀಟಿ, ಪ್ರಮಾಣ ಪತ್ರ ನೀಡುವ ಭರವಸೆ ನೀಡಿದರು. 667 ಜನರಿಗೆ ಗುರುತಿನ ಚೀಟಿ, ಪ್ರಮಾಣಪತ್ರ ನೀಡಬೇಕಾಗಿದೆ. ಮೇಯರ್, ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ನೀಡುತ್ತೇವೆ. 30 ರ ಒಳಗಡೆ ಕಾರ್ಯಕ್ರಮ ಆಯೋಜಿಸಿ ಐಡೆಂಟಿಟಿ ಕಾರ್ಡ್, ಪ್ರಮಾಣಪತ್ರ ವಿತರಣೆ ಮಾಡುತ್ತೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
Loading...
Unable to load recommendations.
Follow Us