ಮಂಗಳೂರು: ವಿದ್ಯಾರ್ಥಿಯನ್ನು ಕಿಡ್ನಾಪ್ ಮಾಡಿ ಮಾರಣಾಂತಿಕ ಹಲ್ಲೆ; ಏಳು ಜನ ಆರೋಪಿಗಳ ಬಂಧನ
ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಉಪ್ಪಳದ ಇಬ್ರಾಹಿಂ ಫಾಹಿಂ (18) ಎಂಬಾತನನ್ನು ಮಂಗಳೂರಿನ ಬಲ್ಮಠ ಬಳಿಯ ಮತ್ತೊಂದು ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಮಂಗಳೂರು ಹೊರವಲಯದ ಅಡ್ಯಾರ್ ಬಳಿಯ ಫ್ಲಾಟ್ಗೆ ಅಪಹರಿಸಿಕೊಂಡು ಹೋಗಿ, ಹುಡುಗಿ ವಿಚಾರಕ್ಕೆ ಕಿಡ್ನಾಪ್ ಮಾಡಿ ಹಲ್ಲೆ ಮಾಡಿದ್ದರು. ಇದೀಗ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ದಕ್ಷಿಣ ಕನ್ನಡ, ಆ.26: ಖಾಸಗಿ ಕಾಲೇಜಿನ ವಿದ್ಯಾರ್ಥಿಯ ಮೇಲೆ ಇನ್ನೊಂದು ಕಾಲೇಜಿನ ವಿದ್ಯಾರ್ಥಿಗಳಿಂದ (College Students) ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಸ್ಡಿಪಿಐ ಮುಖಂಡನ ಪುತ್ರ ಸೇರಿ ಏಳು ಜನ ಆರೋಪಿಗಳನ್ನು ಬಂಧಿಸಲಾಗಿದೆ. ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಉಪ್ಪಳದ ಇಬ್ರಾಹಿಂ ಫಾಹಿಂ (18) ಹಲ್ಲೆಗೊಳಗಾಗಿದ್ದ ಯುವಕ. ಇವರು ನಗರದ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿ ಇಬ್ರಾಹಿಂ ಫಾಹಿಂನನ್ನು ಮಂಗಳೂರಿನ (Mangalore) ಬಲ್ಮಠ ಬಳಿಯ ಮತ್ತೊಂದು ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಾಗಿರುವ ಆರೋಪಿಗಳು, ಮಂಗಳೂರು ಹೊರವಲಯದ ಅಡ್ಯಾರ್ ಬಳಿಯ ಫ್ಲಾಟ್ಗೆ ಅಪಹರಿಸಿಕೊಂಡು ಹೋಗಿ, ಹುಡುಗಿ ವಿಚಾರಕ್ಕೆ ಕಿಡ್ನಾಪ್ ಮಾಡಿ ಹಲ್ಲೆ ಮಾಡಿದ್ದರು.
ಆರೋಪಿಗಳನ್ನು ಬಂಧಿಸಿದ ಪೊಲೀಸರು
ಗಾಂಜಾ ನಶೆಯಲ್ಲಿ ವಿದ್ಯಾರ್ಥಿ ಮೇಲೆ ರಕ್ತ ಹೆಪ್ಪುಗಟ್ಟುವಂತೆ ಬೆಲ್ಟ್ ಹಾಗೂ ಕೋಲಿನಿಂದ ಹೊಡೆದು ಮನ ಬಂದಂತೆ ದಾಳಿ ಮಾಡಿದ್ದಾರೆ. ಅಗಸ್ಟ್ 23ರ ಮಧ್ಯಾಹ್ನ ಕಿಡ್ನಾಪ್ ಮಾಡಿಕೊಂಡು ತೆರಳಿ ಗಂಭೀರ ಹಲ್ಲೆ ಮಾಡಲಾಗಿತ್ತು. ಸದ್ಯ ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ಫಾಹಿಂಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ಬಂದರು ಠಾಣೆ ಪೊಲೀಸರಿಂದ ಆರೋಪಿಗಳಾದ ಅಬ್ದುಲ್ಲಾ ಹನ್ನಾನ್(19), ಇಬ್ರಾಹಿಂ ತಾಬೀಶ್ (19), ಮಹಮ್ಮದ್ ಶಾಕೀಫ್(19), ಮಹಮ್ಮದ್ ಶಾಯಿಕ್(19), ಯು.ಪಿ.ತನ್ವೀರ್(19), ಅಬ್ದುಲ್ ರಶೀದ್(20) ಮತ್ತು ಮನ್ಸೂರ್(19) ಸೇರಿ ಒಟ್ಟು ಏಳು ಜನ ಆರೋಪಿಗಳನ್ನು ಬಂಧಿಸಲಾಗಿದೆ.
ಇದನ್ನೂ ಓದಿ:ಹಾಸನ: ಮೆದುಳು ನಿಷ್ಕ್ರಿಯಗೊಂಡು ಸಾವಿನ ಸನಿಹಕ್ಕೆ ಹೋದವನ ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ
ಆಗಸ್ಟ್ 22ರಂದು ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಜೊತೆ ಮಾತನಾಡಿದಕ್ಕೆ ಆಗಸ್ಟ್ 24 ರಂದು ಇದೇ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ರಾಜೀವ ಗಾಂಧಿ ಸಂಕೀರ್ಣದ ಎದುರು ಯುವಕನ ಮೇಲೆ ಅನ್ಯಧರ್ಮಿಯ ಗುಂಪೊಂದು ಹಲ್ಲೆ ಮಾಡಿತ್ತು. ಈ ಸಂಬಂಧ ಮೂಡಬಿದ್ರೆ ಪೊಲೀಸರು ಮೂವರು ಆರೋಪಿಗಳಾದ ಅಭಿಲಾಷ್, ಪ್ರೇಮ್ ಭಂಡಾರಿ ಮತ್ತು ಸಂಜಯ್ ಎನ್ನುವವರನ್ನು ಬಂಧಿಸಿದ್ದರು.
ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ