ಮಂಗಳೂರು: ವಿದ್ಯಾರ್ಥಿಯನ್ನು ಕಿಡ್ನಾಪ್ ಮಾಡಿ ಮಾರಣಾಂತಿಕ ಹಲ್ಲೆ; ಏಳು ಜನ ಆರೋಪಿಗಳ ಬಂಧನ

ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಉಪ್ಪಳದ ಇಬ್ರಾಹಿಂ ಫಾಹಿಂ (18) ಎಂಬಾತನನ್ನು ಮಂಗಳೂರಿನ ಬಲ್ಮಠ ಬಳಿಯ ಮತ್ತೊಂದು ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಮಂಗಳೂರು ಹೊರವಲಯದ ಅಡ್ಯಾರ್ ಬಳಿಯ ಫ್ಲಾಟ್​ಗೆ ಅಪಹರಿಸಿಕೊಂಡು ಹೋಗಿ, ಹುಡುಗಿ ವಿಚಾರಕ್ಕೆ ಕಿಡ್ನಾಪ್ ಮಾಡಿ ಹಲ್ಲೆ ಮಾಡಿದ್ದರು. ಇದೀಗ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು: ವಿದ್ಯಾರ್ಥಿಯನ್ನು ಕಿಡ್ನಾಪ್ ಮಾಡಿ ಮಾರಣಾಂತಿಕ ಹಲ್ಲೆ; ಏಳು ಜನ ಆರೋಪಿಗಳ ಬಂಧನ
ಪ್ರಾತಿನಿಧಿಕ ಚಿತ್ರ
Edited By: ಕಿರಣ್ ಹನುಮಂತ್​ ಮಾದಾರ್

Updated on: Aug 26, 2023 | 6:03 PM

ದಕ್ಷಿಣ ಕನ್ನಡ, ಆ.26: ಖಾಸಗಿ ಕಾಲೇಜಿನ ವಿದ್ಯಾರ್ಥಿಯ ಮೇಲೆ ಇನ್ನೊಂದು ಕಾಲೇಜಿನ ವಿದ್ಯಾರ್ಥಿಗಳಿಂದ (College Students) ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಸ್ಡಿಪಿಐ ಮುಖಂಡನ ಪುತ್ರ ಸೇರಿ ಏಳು ಜನ ಆರೋಪಿಗಳನ್ನು ಬಂಧಿಸಲಾಗಿದೆ. ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಉಪ್ಪಳದ ಇಬ್ರಾಹಿಂ ಫಾಹಿಂ (18) ಹಲ್ಲೆಗೊಳಗಾಗಿದ್ದ ಯುವಕ. ಇವರು ನಗರದ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿ ಇಬ್ರಾಹಿಂ ಫಾಹಿಂನನ್ನು ಮಂಗಳೂರಿನ (Mangalore) ಬಲ್ಮಠ ಬಳಿಯ ಮತ್ತೊಂದು ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಾಗಿರುವ ಆರೋಪಿಗಳು, ಮಂಗಳೂರು ಹೊರವಲಯದ ಅಡ್ಯಾರ್ ಬಳಿಯ ಫ್ಲಾಟ್​ಗೆ ಅಪಹರಿಸಿಕೊಂಡು ಹೋಗಿ, ಹುಡುಗಿ ವಿಚಾರಕ್ಕೆ ಕಿಡ್ನಾಪ್ ಮಾಡಿ ಹಲ್ಲೆ ಮಾಡಿದ್ದರು.

ಆರೋಪಿಗಳನ್ನು ಬಂಧಿಸಿದ ಪೊಲೀಸರು

ಗಾಂಜಾ ನಶೆಯಲ್ಲಿ ವಿದ್ಯಾರ್ಥಿ ಮೇಲೆ ರಕ್ತ ಹೆಪ್ಪುಗಟ್ಟುವಂತೆ ಬೆಲ್ಟ್ ಹಾಗೂ ಕೋಲಿನಿಂದ ಹೊಡೆದು ಮನ ಬಂದಂತೆ ದಾಳಿ ಮಾಡಿದ್ದಾರೆ. ಅಗಸ್ಟ್ 23ರ ಮಧ್ಯಾಹ್ನ ಕಿಡ್ನಾಪ್ ಮಾಡಿಕೊಂಡು ತೆರಳಿ ಗಂಭೀರ ಹಲ್ಲೆ ಮಾಡಲಾಗಿತ್ತು. ಸದ್ಯ ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ಫಾಹಿಂಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ಬಂದರು ಠಾಣೆ ಪೊಲೀಸರಿಂದ ಆರೋಪಿಗಳಾದ ಅಬ್ದುಲ್ಲಾ ಹನ್ನಾನ್(19), ಇಬ್ರಾಹಿಂ ತಾಬೀಶ್ (19), ಮಹಮ್ಮದ್ ಶಾಕೀಫ್(19), ಮಹಮ್ಮದ್ ಶಾಯಿಕ್(19), ಯು‌.ಪಿ‌.ತನ್ವೀರ್(19), ಅಬ್ದುಲ್ ರಶೀದ್(20) ಮತ್ತು ಮನ್ಸೂರ್(19) ಸೇರಿ ಒಟ್ಟು ಏಳು ಜನ ಆರೋಪಿಗಳನ್ನು ಬಂಧಿಸಲಾಗಿದೆ.

ಇದನ್ನೂ ಓದಿ:ಹಾಸನ: ಮೆದುಳು ನಿಷ್ಕ್ರಿಯಗೊಂಡು ಸಾವಿನ ಸನಿಹಕ್ಕೆ ಹೋದವನ ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ

ಆಗಸ್ಟ್ 22ರಂದು ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಜೊತೆ ಮಾತನಾಡಿದಕ್ಕೆ ಆಗಸ್ಟ್​ 24 ರಂದು ಇದೇ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ರಾಜೀವ ಗಾಂಧಿ ಸಂಕೀರ್ಣದ ಎದುರು ಯುವಕನ ಮೇಲೆ ಅನ್ಯಧರ್ಮಿಯ ಗುಂಪೊಂದು ಹಲ್ಲೆ ಮಾಡಿತ್ತು. ಈ ಸಂಬಂಧ ಮೂಡಬಿದ್ರೆ ಪೊಲೀಸರು ಮೂವರು ಆರೋಪಿಗಳಾದ ಅಭಿಲಾಷ್, ಪ್ರೇಮ್ ಭಂಡಾರಿ ಮತ್ತು ಸಂಜಯ್ ಎನ್ನುವವರನ್ನು ಬಂಧಿಸಿದ್ದರು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
Loading...
Unable to load recommendations.
Follow Us