ಹಿಂದೂ ಯುವಕನೊಂದಿಗೆ ಮುಸ್ಲಿಂ ಯುವತಿ ಲವ್​: ಪೋಷಕರಿಂದಲೇ ವಿದ್ಯಾರ್ಥಿನಿ ಅಪಹರಣ

ಮಂಗಳೂರಿನ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಪೋಷಕರೇ ಅಪಹರಿಸಿದ ಆರೋಪ ಕೇಳಿಬಂದಿದೆ. ಕಾಲೇಜು ಕ್ಯಾಂಪಸ್‌ನಿಂದಲೇ ಬಲವಂತವಾಗಿ ಕರೆದೊಯ್ಯುವ ವಿಡಿಯೋ ವೈರಲ್ ಆಗಿದೆ. ಮಂಗಳೂರು ಪೊಲೀಸ್ ಆಯುಕ್ತರು ಇದು ಅಪರಾಧವಾಗಿದ್ದು, ಯುವತಿ ವಯಸ್ಕಳಾಗಿರುವುದರಿಂದ ಎಲ್ಲಿ ವಾಸಿಸಬೇಕು ಎಂದು ನಿರ್ಧರಿಸುವ ಹಕ್ಕು ಅವಳಿಗಿದೆ ಎಂದಿದ್ದಾರೆ. ಪ್ರಕರಣ ದಾಖಲಿಸಿ, ಯುವತಿಯನ್ನು ಪತ್ತೆಹಚ್ಚಲು ಸೂಚಿಸಲಾಗಿದೆ.

ಹಿಂದೂ ಯುವಕನೊಂದಿಗೆ ಮುಸ್ಲಿಂ ಯುವತಿ ಲವ್​: ಪೋಷಕರಿಂದಲೇ ವಿದ್ಯಾರ್ಥಿನಿ ಅಪಹರಣ
ವಿದ್ಯಾರ್ಥಿನಿ ಅಪಹರಣ ಆರೋಪ
Edited By:

Updated on: Nov 20, 2026 | 5:23 PM

ಮುಖ್ಯಾಂಶಗಳು

  • ಪೋಷಕರಿಂದಲೇ ವಿದ್ಯಾರ್ಥಿನಿ ಅಪಹರಿಸಿ ಹೊತ್ತೊಯ್ದ
  • ಮಂಗಳೂರಿನ ಖಾಸಗಿ ಮೆಡಿಕಲ್ ಕಾಲೇಜಿ ನಡೆದಿರುವ ಘಟನೆ
  • ಹಿಂದೂ ಯುವಕನನ್ನು ಮುಸ್ಲಿಂ ಯುವತಿ ಪ್ರೀತಿ

ಮಂಗಳೂರು, ನವೆಂಬರ್​ 20: ಕಾಲೇಜು ಕ್ಯಾಂಪಸ್​ನಿಂದಲೇ ವಿದ್ಯಾರ್ಥಿನಿಯನ್ನು ಪೋಷಕರು ಬಲವಂತವಾಗಿ ಅಪಹರಿಸಿ ಹೊತ್ತೊಯ್ದ ಘಟನೆ ಮಂಗಳೂರಿನ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ. ಹಿಂದೂ ಯುವಕನನ್ನು ಮುಸ್ಲಿಂ ಯುವತಿ ಪ್ರೀತಿ ಮಾಡುತ್ತಿದ್ದ ಹಿನ್ನೆಲೆ ವಿದ್ಯಾರ್ಥಿನಿಯನ್ನ ಅಪಹರಣ ಮಾಡಿರುವ ಆರೋಪ ಕೇಳಿಬಂದಿದೆ. ಥಾರ್ ವಾಹನದಲ್ಲಿ ವಿದ್ಯಾರ್ಥಿನಿಯನ್ನ ಹೊತ್ತೊಯ್ಯುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಹೇಳಿದ್ದಿಷ್ಟು 

ವಿಡಿಯೋ ವೈರಲ್ ಬೆನ್ನಲ್ಲೇ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಪ್ರತಿಕ್ರಿಯಿಸಿದ್ದು, ‘ಯುವತಿಯನ್ನು ಆಕೆಯ ಇಚ್ಛೆಗೆ ವಿರುದ್ಧವಾಗಿ ಕುಟುಂಬದ ಸದಸ್ಯರು ಬಲವಂತವಾಗಿ ಕರೆದೊಯ್ದಿದ್ದಾರೆ ಎಂಬ ಆರೋಪವಿದೆ. ಈ ರೀತಿಯ ಕೃತ್ಯವೂ ಕಾನೂನಿನ ಪ್ರಕಾರ ಅಪರಾಧವಾಗುತ್ತದೆ’ ಎಂದು ಅವರು ತಿಳಿಸಿದ್ದಾರೆ.

Loading...

ವಯಸ್ಕಳಾದ ಯುವತಿಗೆ ತನ್ನ ವಾಸಸ್ಥಳ ನಿರ್ಧರಿಸುವ ಹಕ್ಕಿದೆ

‘ಯುವತಿ ಪ್ರಾಪ್ತವಯಸ್ಕಳಾಗಿದ್ದು, ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ’ ಎಂದು ಪೊಲೀಸ್ ಆಯುಕ್ತರು ಸ್ಪಷ್ಟಪಡಿಸಿದ್ದಾರೆ. ‘ಘಟನೆ ನಡೆದ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರೆ, ವಾಹನ ಹೆಚ್ಚು ದೂರ ಸಾಗುವ ಮುನ್ನವೇ ತಡೆದು ಯುವತಿಯನ್ನು ಪತ್ತೆಹಚ್ಚಲು ಸಾಧ್ಯವಾಗುತ್ತಿತ್ತು’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹಾವೇರಿಯಲ್ಲಿ ಮೀಟರ್ ಬಡ್ಡಿಕೋರರ ಅಟ್ಟಹಾಸ: ವ್ಯಕ್ತಿಯನ್ನು ಅಪಹರಿಸಿ 4 ದಿನ ಚಿತ್ರಹಿಂಸೆ, ಬಾಯಿಗೆ ಮೂತ್ರ ಸುರಿದು ವಿಕೃತಿ!

‘ಇನ್ನು ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಹಾಗೂ ಯುವತಿಯನ್ನು ಪತ್ತೆಹಚ್ಚುವಂತೆ ಸೂಚನೆ ನೀಡಲಾಗಿದೆ’ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ‘ಟ್ವೀಟ್‌ನಲ್ಲಿ ಉಲ್ಲೇಖಿಸಿರುವಂತೆ, ಯುವತಿಗೆ ಹಿಂದೂ ಯುವಕನೊಂದಿಗೆ ಪ್ರೀತಿಯ ಸಂಬಂಧ ಇರುವ ಮಾಹಿತಿ ಲಭ್ಯವಾಗಿದೆ’ ಎಂದು ಸುಧೀರ್ ಕುಮಾರ್ ರೆಡ್ಡಿ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Loading...
Unable to load recommendations.
Follow Us