ಮಂಗಳೂರು: ಸಿದ್ದರಾಮಯ್ಯ ಅತಿಥಿಯಾಗಿದ್ದ ಕಾರ್ಯಕ್ರಮದಲ್ಲೇ ಅನ್ಯಕೋಮಿನ ವಿದ್ಯಾರ್ಥಿಗಳ ರೋಮ್ಯಾನ್ಸ್, ಇಬ್ಬರೂ ಸಸ್ಪೆಂಡ್

ಕಾಲೇಜು ಅವರಣದಲ್ಲಿ ಮುಸ್ಲಿಂ ವಿದ್ಯಾರ್ಥಿ ಹಾಗೂ ಹಿಂದೂ ವಿದ್ಯಾರ್ಥಿನಿ ಹಗ್ ಮಾಡಿ ಕಿಸ್ ಮಾಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ‌ಯಾಗುತ್ತಿದೆ.

ಮಂಗಳೂರು: ಸಿದ್ದರಾಮಯ್ಯ ಅತಿಥಿಯಾಗಿದ್ದ ಕಾರ್ಯಕ್ರಮದಲ್ಲೇ ಅನ್ಯಕೋಮಿನ ವಿದ್ಯಾರ್ಥಿಗಳ ರೋಮ್ಯಾನ್ಸ್, ಇಬ್ಬರೂ ಸಸ್ಪೆಂಡ್
Follow us
TV9 Web
| Updated By: ಆಯೇಷಾ ಬಾನು

Updated on:Dec 22, 2022 | 9:50 AM

ಮಂಗಳೂರು: ಕರಾವಳಿ ಭಾಗದಲ್ಲಿ ಒಂದು ಕೋಮಿನ ಯುವಕ ಅಥವಾ ಯುವತಿ ಮತ್ತೊಂದು ಕೋಮಿನ ಯುವಕ ಅಥವಾ ಯುವತಿಯೊಂದಿಗೆ ಕಾಣಿಸಿಕೊಂಡು ಜಗಳವಾಗುವುದು ಸೇರಿದಂತೆ ಅನ್ಯಕೋಮಿಗಳ ವಿರುದ್ಧ ಅನೈತಿಕ ಪೊಲೀಸ್​ ಗಿರಿ ತೋರಿಸುವ ಘಟನೆಗಳು ನಡೆಯುತ್ತಲೇ ಇರುತ್ತವೆ. ಆಗಾಗ ಕೆಲ ಜಗಳಗಲೂ ನಡೆಯುತ್ತಿದ್ದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಎಂಬಂತಾಗಿದೆ. ಆದ್ರೆ ಇಲ್ಲಿ ನಡೆದಿರುವುದು ಬೇರೆಯದೇ ರೀತಿಯದ್ದು ಕಾಲೇಜಿನ ಅನ್ಯಕೋಮಿ ವಿದ್ಯಾರ್ಥಿಗಳು ಸಿದ್ದರಾಮಯ್ಯ ಅತಿಥಿಯಾಗಿದ್ದ ಕಾರ್ಯಕ್ರಮದಲ್ಲೇ ರೋಮ್ಯಾನ್ಸ್​ನಲ್ಲಿ ಮುಳುಗಿದ ಘಟನೆ ನಡೆದಿದೆ.

ಮಾಜಿ ಸಿಎಂ ಸಿದ್ದರಾಮಯ್ಯ ಅನ್ಯಕೋಮಿನ ಪ್ರೀತಿ, ಸ್ನೇಹಕ್ಕೆ ಬೆಂಬಲಿಸುವ ವ್ಯಕ್ತಿ. ಇವರ ಕಾರ್ಯಕ್ರಮದಲ್ಲೇ ಮುಜುಗರಕ್ಕೆ ಈಡಾಗುವಂತಹ ಘಟನೆ ನಡೆದಿದೆ. ಬೆಳ್ತಂಗಡಿ ಗುರುದೇವ ಕಾಲೇಜಿನಲ್ಲಿ ಮಾಜಿ ಶಾಸಕ ವಸಂತ್ ಬಂಗೇರಾ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅತಿಥಿಯಾಗಿದ್ದರು. ಕಾರ್ಯಕ್ರಮದ ವೇಳೆ ಕಾಲೇಜು ಅವರಣದಲ್ಲಿ ಮುಸ್ಲಿಂ ವಿದ್ಯಾರ್ಥಿ ಹಾಗೂ ಹಿಂದೂ ವಿದ್ಯಾರ್ಥಿನಿ ಹಗ್ ಮಾಡಿ ಕಿಸ್ ಮಾಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ‌ಯಾಗುತ್ತಿದೆ. ಮುಸ್ಲಿಂ ವಿದ್ಯಾರ್ಥಿಗೆ ಹಿಂದೂ ಕಾರ್ಯಕರ್ತರು ಧಮ್ಕಿ ಹಾಕಿ ಜೀವ ಬೆದರಿಕೆ ಹಾಕಿದ್ದಾರೆ. ಲವ್ ಜಿಹಾದ್ ಮಾಡುತ್ತೀಯಾ ಅಂತಾ ತರಾಟೆಗೆ ತೆಗೆದುಕೊಂಡಿದ್ದಾರೆ. ಇನ್ನು ಕಾಲೇಜಿನಿಂದ ಮುಸ್ಲಿಂ ವಿದ್ಯಾರ್ಥಿ, ಹಿಂದೂ ವಿದ್ಯಾರ್ಥಿನಿಯನ್ನು ಸಸ್ಪೆಂಡ್ ಮಾಡಲಾಗಿದೆ.

ಇದನ್ನೂ ಓದಿ: ಭೈರಿದೇವರಕೊಪ್ಪದ ದರ್ಗಾ ತೆರವು ಕಾರ್ಯಾಚರಣೆ ಅಂತ್ಯ; ಧರ್ಮ ಗುರುಗಳ ಸಮ್ಮುಖದಲ್ಲಿ 3 ಗೋರಿಗಳ ಸ್ಥಳಾಂತರ

ಆದ್ರೆ ಮತ್ತೊಂದೆಡೆ ಹಿಂದೂ ವಿದ್ಯಾರ್ಥಿನಿ ಸಸ್ಪೆಂಡ್ ಮಾಡಿ, ಮುಸ್ಲಿಂ ವಿದ್ಯಾರ್ಥಿಯನ್ನು ಸಸ್ಪೆಂಡ್ ಮಾಡಿಲ್ಲ ಎಂಬ ಚರ್ಚೆ ನಡೆಯುತ್ತಿದೆ. ಕೋಮುದ್ವೇಷದ ಹಿನ್ನಲೆಯಲ್ಲಿ ಚರ್ಚೆ ಹುಟ್ಟಿಕೊಂಡಿದೆ. ಸದ್ಯ ಕಾಲೇಜು ಆಡಳಿತ ಮಂಡಳಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು ಚರ್ಚೆ ಮಾಡುತ್ತಿರುವವರ ಬಗ್ಗೆ ತನಿಖೆ ನಡೆಸುವಂತೆ ಮನವಿ ಮಾಡಿದೆ. ಇಬ್ಬರನ್ನೂ ಸಸ್ಪೆಂಡ್ ಮಾಡಿದ್ದಾಗಿ ಆಡಳಿತ ಮಂಡಳಿ ದೂರಿನಲ್ಲಿ ಉಲ್ಲೇಖಿಸಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:41 am, Thu, 22 December 22