AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಹಾಸ್ ಶೆಟ್ಟಿ ಕೊಲೆ ಕೇಸ್‌: 8 ಜನ ಶಂಕಿತರು ವಶಕ್ಕೆ, ಮಂಗಳೂರು ಪೊಲೀಸರಿಂದ ತೀವ್ರ ವಿಚಾರಣೆ

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ ಕೇಸ್​ನ ತನಿಖೆ ಚುರುಕುಗೊಂಡಿದೆ. ಘಟನೆ ನಡೆದ 24 ಗಂಟೆಯಲ್ಲಿ 8 ಮಂದಿ ಆರೋಪಿಗಳನ್ನು ಪೊಲೀಸರು ಲಾಕ್ ಮಾಡಿದ್ದು, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ರಾಜಕೀಯ ಕೋಲಾಹಲಕ್ಕೂ ಕಾರಣವಾಗಿದ್ದು, ಹತ್ಯೆ ಹಿಂದೆ 20 ಜನರ ಕೈವಾಡವಿದೆ ಎಂದು ಆರ್. ಅಶೋಕ್ ಆರೋಪಿಸಿದ್ದಾರೆ.

ಸುಹಾಸ್ ಶೆಟ್ಟಿ ಕೊಲೆ ಕೇಸ್‌: 8 ಜನ ಶಂಕಿತರು ವಶಕ್ಕೆ, ಮಂಗಳೂರು ಪೊಲೀಸರಿಂದ ತೀವ್ರ ವಿಚಾರಣೆ
ಸುಹಾಸ್ ಶೆಟ್ಟಿ ಕೊಲೆ ಕೇಸ್​
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: May 03, 2025 | 7:44 AM

Share

ಮಂಗಳೂರು, ಮೇ 03: ನಗರದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಕೊಲೆ ರಾಜಕೀಯ ಕೋಲಾಹಲ ಎಬ್ಬಿಸಿದೆ. ಸುಹಾಶ್ ಶೆಟ್ಟಿ ಇದ್ದ ಕಾರ್‌ಗೆ ಗೂಡ್ಸ್‌ವಾಹನ ಗುದ್ದಿಸಿ ನಂತರ ಐದಾರು ಮಂದಿ ನಡುರಸ್ತೆಯಲ್ಲೇ ತಲ್ವಾರ್‌ಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ನಂತರ ಸ್ವಲ್ಪದೂರದಲ್ಲೇ ಕೃತ್ಯಕ್ಕೆ ಬಳಸಿದ ಸ್ವಿಫ್ಟ್ ಕಾರು ಬಿಟ್ಟು ಪರಾರಿಯಾಗಿದ್ದರು. ಆರೋಪಿಗಳ ಬೇಟೆಗಾಗಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್‌ ವಾಲ್ ಪೊಲೀಸರ 5 ತಂಡ ರಚನೆ ಮಾಡಿದ್ದರು. ಇದೀಗ ಮಹತ್ವದ ಬೆಳವಣಿಗೆಯಲ್ಲಿ ಘಟನೆ ನಡೆದ 24 ಗಂಟೆಯೊಳಗೆ ಪೊಲೀಸರು (police) ಶಂಕಿತ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ.

8 ಆರೋಪಿಗಳು ಬಲೆಗೆ

ಸುಹಾಸ್ ಶೆಟ್ಟಿ ಕೊಲೆ ಕೇಸ್‌ ಸಂಬಂಧ ಒಟ್ಟು 8 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಎಲ್ಲಾ ಶಂಕಿತ ಆರೋಪಿಗಳ ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಗಳು ಮಂಗಳೂರಿನಲ್ಲೇ ಅವಿತ್ತಿದ್ದರು ಎಂದು ತಿಳಿದುಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆಪಡೆಯಲಾಗಿದೆ.

ಇದನ್ನೂ ಓದಿ: ಸುಹಾಸ್ ಹತ್ಯೆಕೋರರನ್ನು ಸುಮ್ಮನೆ ಬಿಡುವ ಮಾನಸಿಕತೆ ಯಾರಲ್ಲೂ ಇಲ್ಲ: ಸಿಟಿ ರವಿ ಎಚ್ಚರಿಕೆ

ಇದನ್ನೂ ಓದಿ
Image
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
Image
ಸುಹಾಸ್​ ಶೆಟ್ಟಿ ಕೊಲೆ: ಮಂಗಳೂರು ಸುತ್ತಮುತ್ತ 3 ಮಂದಿಗೆ ಚಾಕು ಇರಿತ
Image
ಸುಹಾಸ್ ಹತ್ಯೆ ಬೆನ್ನಲ್ಲೇ ಉಡುಪಿಯಲ್ಲಿ ಮುಸ್ಲಿಂ ಯುವಕನ ಕೊಲೆಗೆ ಯತ್ನ
Image
ಮಂಗಳೂರು: ಸುಹಾಸ್ ಹತ್ಯೆ ಬೆನ್ನಲ್ಲೇ 'ಫಿನೀಶ್' ಎಂಬ ಪೋಸ್ಟ್ ಬಹಿರಂಗ!

ಇನ್ನು ಬರ್ಬರ ಹತ್ಯೆ ನಡೆಸಿದ್ದ ದುಷ್ಕರ್ಮಿಗಳನ್ನು ಪತ್ತೆಹಚ್ಚಿದ್ದು, ಪ್ರಮುಖ ಆರೋಪಿ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕಿದ್ದಾರೆ. ಇವತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಸುದ್ದಿಗೋಷ್ಠಿ ನಡೆಸಿ ಆರೋಪಿಗಳ ವಿವರ ನೀಡುವ ಸಾಧ್ಯತೆಯಿದೆ.

ಇಂದು ಮಂಗಳೂರಿಗೆ ಗೃಹ ಸಚಿವ ಪರಮೇಶ್ವರ್ ಭೇಟಿ

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆಯಿಂದಾಗಿ ಮಂಗಳೂರು ಬೂದಿಮುಚ್ಚಿದ ಕೆಂಡವಾಗಿದೆ. ಇದರ ನಡುವೆ ಗೃಹಸಚಿವ ಡಾ.ಜಿ.ಪರಮೇಶ್ವರ್ ಇಂದು ಮಂಗಳೂರಿಗೆ ಭೇಟಿ ನೀಡುತ್ತಿದ್ದಾರೆ. ಕಾನೂನು ಸುವ್ಯವಸ್ಥೆ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಸಭೆ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್ ಕೂಡ ಭಾಗಿಯಾಗಲಿದ್ದಾರೆ.

ಹತ್ಯೆ ಹಿಂದೆ 20 ಜನರ ಕೈವಾಡ ಎಂದ ಆರ್​​. ಅಶೋಕ್

ಸುಹಾಸ್ ಶೆಟ್ಟಿ ಕೊಲೆ ನಡೆದ ಸ್ಥಳಕ್ಕೆ ನಿನ್ನೆ ವಿಪಕ್ಷ ನಾಯಕ ಆರ್.ಅಶೋಕ್, ಶಾಸಕರಾದ ಭರತ್ ಶೆಟ್ಟಿ, ಯಶ್ ಪಾಲ್ ಸುವರ್ಣ, ವೇದವ್ಯಾಸ ಕಾಮತ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ವೇಳೆ ಮಾತನಾಡಿದ ಆರ್.ಅಶೋಕ್, ಈ ಕೊಲೆ ಹಿಂದೆ 20 ಜನರ ಕೈವಾಡವಿದೆ. ಇದೇ ಮೊದಲ ಬಾರಿಗೆ ಲೇಡಿ ಡಾನ್‌ಗಳು ಭಾಗಿಯಾಗಿದ್ದಾರೆ ಅಂತಾ ಸ್ಫೋಟಕ ಆರೋಪ ಮಾಡಿದ್ದಾರೆ.

ಸುಹಾಸ್‌ಶೆಟ್ಟಿ ಕೊಲೆ ಮಾಡಿದ ಯಾರೊಬ್ಬರೂ ಮಾಸ್ಕ್ ಹಾಕಿಲ್ಲ. ಕಾಶ್ಮೀರದಲ್ಲಿ ಈ ರೀತಿ ಆಗ್ತಿತ್ತು, ಆದರೆ ಇದೀಗ ಮಂಗಳೂರಿನಲ್ಲಿ ಆಗಿದೆ ಅಂತಾ ಆರ್. ಅಶೋಕ್ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಸುಹಾಸ್​ ಶೆಟ್ಟಿ ಕೊಲೆ ಬೆನ್ನಲ್ಲೇ ಮಂಗಳೂರಿನ ಸುತ್ತಮುತ್ತ 3 ಮಂದಿಗೆ ಚಾಕು ಇರಿತ

ಅದೇನೆ ಇರಲಿ ಸುಹಾಸ್ ಶೆಟ್ಟಿ ಕೊಲೆ ಹಿಂದೆ ಯಾರಿದ್ದಾರೆ? ಇದೀಗ ಪೊಲೀಸರು ವಶಕ್ಕೆ ಪಡೆದಿರುವ 8 ಶಂಕಿತ ಆರೋಪಿಗಳು ವಿಚಾರಣೆಯಲ್ಲಿ ಯಾವ ವಿಚಾರ ಬಾಯ್ಬಿಡುತ್ತಾರೆ, 2022ರಲ್ಲಿ ನಡೆದಿದ್ದ ಫಾಜಿಲ್ ಕೊಲೆಗೆ ಪ್ರತೀಕಾರವಾಗಿ ಈ ಮರ್ಡರ್ ನಡೀತಾ? ಬೇರೆ ಕಾರಣ ಏನಾದ್ರೂ ಇದೆಯಾ, ಇದೆಲ್ಲವೂ ತನಿಖೆಯಿಂದಷ್ಟೇ ಬಯಲಾಗಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More