ಸುಹಾಸ್ ಶೆಟ್ಟಿ ಕೊಲೆ ಆರೋಪಿ ಮೇಲೆ ಜೈಲಲ್ಲೇ ಸಹ ಕೈದಿಗಳಿಂದ ಅಟ್ಯಾಕ್‌

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿ ಚೊಟ್ಟೆ ನೌಷಾದ್ ಮೇಲೆ ಮಂಗಳೂರು ಕೇಂದ್ರ ಕಾರಾಗೃಹದಲ್ಲಿ ಇತರ ಕೈದಿಗಳಿಂದ ದಾಳಿ ಮಾಡಿರುವಂತಹ ಘಟನೆ ನಡೆದಿದೆ. ಅದೃಷ್ಟವಶಾತ್ ನೌಷಾದ್ ಪಾಣಾಪಾಯದಿಂದ ಪಾರಾಗಿದ್ದಾರೆ. ಮೈಸೂರು ಕಾರಾಗೃಹಕ್ಕೆ ಸ್ಥಳಾಂತರಿಸುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಸುಹಾಸ್ ಶೆಟ್ಟಿ ಕೊಲೆ ಆರೋಪಿ ಮೇಲೆ ಜೈಲಲ್ಲೇ ಸಹ ಕೈದಿಗಳಿಂದ ಅಟ್ಯಾಕ್‌
ಆರೋಪಿ ಚೊಟ್ಟೆ ನೌಷಾದ್ ಮೇಲೆ ಅಟ್ಯಾಕ್‌
Updated By: ಗಂಗಾಧರ​ ಬ. ಸಾಬೋಜಿ

Updated on: May 19, 2025 | 8:43 PM

ಮಂಗಳೂರು, ಮೇ 19: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಹತ್ಯೆಯ ಆರೋಪಿ ಚೊಟ್ಟೆ ನೌಷಾದ್ ಮೇಲೆ ಬಿ ಬ್ಯಾರಕ್‌ನ ಹಲವು ಸಹ ಕೈದಿಗಳಿಂದ ಕಲ್ಲು ಮತ್ತು ಸಿಕ್ಕ ಸಿಕ್ಕ ವಸ್ತುಗಳಿಂದ ಅಟ್ಯಾಕ್ (Attack)​​ ಮಾಡಿರುವಂತಹ ಘಟನೆ ಮಂಗಳೂರು ಸೆಂಟ್ರಲ್‌ ಜೈಲಿನಲ್ಲಿ ನಡೆದಿದೆ. ಅದೃಷ್ಟವಶಾತ್ ನೌಷಾದ್ ಪಾರಾಗಿದ್ದಾನೆ.

ಆರೋಪಿ ಚೊಟ್ಟೆ ನೌಷಾದ್ ಪೊಲೀಸ್ ಕಸ್ಟಡಿ ಅವಧಿ ಇಂದು ಅಂತ್ಯವಾಗಿತ್ತು. ಹಾಗಾಗಿ ಪೊಲೀಸರು ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಬಳಿಕ ಮೈಸೂರು ಕಾರಾಗೃಹಕ್ಕೆ ಶಿಫ್ಟ್‌ ಮಾಡಲು ಸಿದ್ಧತೆ ನಡೆಸಿದ್ದರು. ಈ ಮಧ್ಯೆ ನೌಷಾದ್, ಮಂಗಳೂರು ಜೈಲಿನಲ್ಲಿ ಯಾರನ್ನೋ ನೋಡಬೇಕು ಎಂದಿದ್ದ. ಹಾಗಾಗಿ  ಜೈಲಿನಲ್ಲಿ ಮತ್ತೋರ್ವ ಕೈದಿ ಭೇಟಿಗಾಗಿ ಪೊಲೀಸರು ಕರೆದುಕೊಂಡು ಬಂದಿದ್ದರು. ಈ ವೇಳೆ ಇದ್ದಕಿದ್ದಂತೆ ನೌಷಾದ್ ಮೇಲೆ ಸಹ ಕೈದಿಗಳು ಅಟ್ಯಾಕ್‌ ಮಾಡಿದ್ದಾರೆ.

ಚೊಟ್ಟೆ ನೌಷಾದ್ ಹಿನ್ನಲೆ

ಆರೋಪಿ ನೌಷದ್ ಅಲಿಯಾಸ್​ ವಾಮಂಜೂರು ನೌಷದ್ ಅಲಿಯಾಸ್​ ಚೊಟ್ಟೆ ನೌಷದ್, ಸುಹಾಸ್ ಶೆಟ್ಟಿಯ ಕೊಲೆಗೆ ಉಳಿದ ಆರೋಪಿಗಳ ಜೊತೆ ಸಂಚು ರೂಪಿಸಿ ಕೊಲೆ ಕೃತ್ಯದಲ್ಲಿ ಭಾಗಿಯಾಗಿದ್ದ. ಇತನ ವಿರುದ್ಧ ಸುರತ್ಕಲ್, ಬಜ್ಪೆ, ಮೂಡಬಿದ್ರಿ, ಮಂಗಳೂರು ಉತ್ತರ ಮತ್ತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ, ದರೋಡೆಗೆ ಸಂಚು ಸೇರಿದಂತೆ ಒಟ್ಟು 6 ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳ ಬಂಧನ
ಸುಹಾಸ್​ ಶೆಟ್ಟಿ ಹತ್ಯೆ ಪ್ರಕರಣ NIAಗೆ ವಹಿಸುವಂತೆ ರಾಜ್ಯಪಾಲರಿಗೆ BJP ಮನವಿ
ಸುಹಾಸ್​ ಕೊಲೆ: ಹಿಂದೂ ಕಾರ್ಯಕರ್ತರ ವಿರುದ್ಧ ಪೇದೆ ರಶೀದ್ ದೂರು
ಸುಹಾಸ್ ಹತ್ಯೆಗೆ 50 ಲಕ್ಷ ಫಂಡ್, ಹೆಡ್ ಕಾನ್ಸ್‌ಟೇಬಲ್ ಕುತಂತ್ರ: ಆರೋಪ

ಇದನ್ನೂ ಓದಿ: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳ ಬಂಧನ

ಮಂಗಳೂರಿನ ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳ ಪೈಕಿ ಇವನು ಒಬ್ಬನಾಗಿದ್ದು, ಇತ್ತೀಚೆಗೆ ಪೊಲೀಸರು ಅರೆಸ್ಟ್ ಮಾಡಿದ್ದರು. ಆರೋಪಿ ನೌಷದ್ ಉಳಿದ ಆರೋಪಿಗಳೊಂದಿಗೆ ಸೇರಿ ಸುಹಾಸ್‌ ಶೆಟ್ಟಿ ಕೊಲೆಗೆ ಸಂಚು ರೂಪಿಸಿದ್ದ ಎಂದು ಪೊಲೀಸರ ತನಿಖೆಯಲ್ಲಿ ತಿಳಿದುಬಂದಿತ್ತು.

ಇದನ್ನೂ ಓದಿ: ಸುಹಾಸ್ ಹತ್ಯೆಗೆ 50 ಲಕ್ಷಕ್ಕೂ ಹೆಚ್ಚು ಫಂಡ್, ಬಜ್ಪೆ ಹೆಡ್ ಕಾನ್ಸ್‌ಟೇಬಲ್ ಕುತಂತ್ರ: ಹಿಂದೂ ಜಾಗರಣ ವೇದಿಕೆ ಗಂಭೀರ ಆರೋಪ

ಸುಹಾಸ್‌ ಶೆಟ್ಟಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದ 8 ಆರೋಪಿಗಳನ್ನ ಬಂಧಿಸಲಾಗಿತ್ತು. ಒಟ್ಟು 10 ಆರೋಪಿಗಳು ಭಾಗಿಯಾಗಿದ್ದು, ಇಬ್ಬರು ತಪ್ಪಿಸಿಕೊಂಡಿದ್ದಾರೆ ಅಂತಾ ಪೊಲೀಸರು ಹೇಳಿದ್ದರು. ಆದರೆ ಹತ್ತಲ್ಲ 20ಕ್ಕೂ ಹೆಚ್ಚು ಆರೋಪಿಗಳು ಕೃತ್ಯದಲ್ಲಿ ಭಾಗಿ ಆಗಿರೋ ಶಂಕೆ ಇದೆ. ಬಂಧಿತ 8 ಆರೋಪಿಗಳನ್ನ ಮೇ 9 ರವರೆಗೂ ಪೊಲೀಸ್‌ ಕಸ್ಟಡಿಗೆ ನೀಡಿ ಮಂಗಳೂರಿನ 6ನೇ JMFC ಕೋರ್ಟ್ ಇತ್ತೀಚೆಗೆ ಆದೇಶ ನೀಡಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:27 pm, Mon, 19 May 25