AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಹಾಸ್​ ಶೆಟ್ಟಿ ಕೊಲೆ ಬೆನ್ನಲ್ಲೇ ಮಂಗಳೂರಿನ ಸುತ್ತಮುತ್ತ 3 ಮಂದಿಗೆ ಚಾಕು ಇರಿತ

ಸುಹಾಸ್ ಶೆಟ್ಟಿ ಕೊಲೆಯಿಂದ ಮಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ನಿಷೇಧಾಜ್ಞೆ ಜಾರಿಯಾಗಿದೆ. ಈ ಬೆನ್ನಲ್ಲೇ ಕಣ್ಣೂರು, ಕೊಂಚಾಡಿ ಮತ್ತು ಉಳ್ಳಾಲದಲ್ಲಿ ಚಾಕು ಇರಿತ ಪ್ರಕರಣಗಳು ವರದಿಯಾಗಿವೆ. ಉಡುಪಿ ಜಿಲ್ಲೆಯಲ್ಲಿ ಕೊಲೆ ಯತ್ನವೂ ನಡೆದಿದೆ. ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು NIAಗೆ ವಹಿಸುವಂತೆ ಮನವಿ ಮಾಡಲಾಗಿದೆ.

ಸುಹಾಸ್​ ಶೆಟ್ಟಿ ಕೊಲೆ ಬೆನ್ನಲ್ಲೇ  ಮಂಗಳೂರಿನ ಸುತ್ತಮುತ್ತ 3 ಮಂದಿಗೆ ಚಾಕು ಇರಿತ
ಸಾಂದರ್ಭಿಕ ಚಿತ್ರ, ಸುಹಾಸ್​ ಶೆಟ್ಟಿ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ವಿವೇಕ ಬಿರಾದಾರ|

Updated on: May 02, 2025 | 3:05 PM

Share

ಮಂಗಳೂರು, ಮೇ 02: ಹಿಂದೂ ಕಾರ್ಯಕರ್ತ (Hindu Activist) ಸುಹಾಸ್​ ಶೆಟ್ಟಿ (Suhas Shetty) ಕೊಲೆ ಬಳಿಕ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಮುಂಜಾಗ್ರತಾ ಕ್ರಮವಾಗಿ ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಸುಹಾಸ್​ ಶೆಟ್ಟಿ ಕೊಲೆ ಪ್ರಕರಣ ಬೆನ್ನಲ್ಲೇ ಮಂಗಳೂರಿನ ಸುತ್ತಮುತ್ತ ಕಣ್ಣೂರು, ಕೊಂಚಾಡಿ ಮತ್ತು ಉಳ್ಳಾಲದಲ್ಲಿ ಚಾಕು ಇರಿತ ಪ್ರಕರಣಗಳು ವರದಿಯಾಗಿವೆ.

ಉಳ್ಳಾಲದ ಫೈಝಲ್​, ಕೊಂಚಾಡಿಯ ಮೊಹ್ಮದ್​ ಲುಕ್ಮಾನ್,​​ ಕಣ್ಣೂರಿನ ಇರ್ಶಾದ್​ಗೆ ಎಂಬುವರಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಹಲ್ಲೆಗೊಳಗಾದ ಮೂವರಿಗೂ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಮಂಗಳೂರು ವ್ಯಾಪ್ತಿಯಲ್ಲಿ ತಡರಾತ್ರಿ ಮತ್ತು ಮುಂಜಾನೆ ಈ ಪ್ರಕರಣಗಳು ನಡೆದಿವೆ.

ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರವಾಗಿ ಕೊಲೆ ಯತ್ನ

ಉಡುಪಿ ತಾಲೂಕಿನ ಆತ್ರಾಡಿಯಲ್ಲಿ ಗುರುವಾರ ರಾತ್ರಿ ಓರ್ವ ಮುಸ್ಲಿಂ ಯುವಕನನ್ನು ಕೊಲೆ ಮಾಡಲು ಯತ್ನಿಸಲಾಗಿದೆ. ಚಾಲಕ ಅಬೂಬಕ್ಕರ್ ಆಟೋ ಅಡ್ಡಗಟ್ಟಿದ ದುಷ್ಕರ್ಮಿಗಳು ತಲ್ವಾರ್ ಮತ್ತು ಬಾಟಲ್​ನಿಂದ ಹಲ್ಲೆ ಮಾಡಲು ಮುಂದಾಗಿದ್ದಾರೆ. ಅಬೂಬಕ್ಕರ್ ತಪ್ಪಿಸಿಕೊಂಡು ಹೋಗಿ ಹಿರಿಯಡಕ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ತಕ್ಷಣ ಕಾರ್ಯ ಪ್ರವೃತ್ತರಾದ ಹಿರಿಯಡಕ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಆರೋಪಿಗಳಾದ ಸುಶಾಂತ್, ಸಂದೇಶ್ ಪೂಜಾರಿ ಬಂಧಿತರು.

ಇದನ್ನೂ ಓದಿ
Image
ಮಂಗಳೂರು: ಸುಹಾಸ್ ಹತ್ಯೆ ಬೆನ್ನಲ್ಲೇ 'ಫಿನೀಶ್' ಎಂಬ ಪೋಸ್ಟ್ ಬಹಿರಂಗ!
Image
ಸುಹಾಸ್ ಶೆಟ್ಟಿ ಹತ್ಯೆ: ಇಂದು ದ.ಕ ಬಂದ್, ಮಂಗಳೂರಿನಲ್ಲಿ ನಿಷೇಧಾಜ್ಞೆ
Image
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
Image
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್

ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದಾಗ, ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರವಾಗಿ ಕೊಲೆ ಯತ್ನ ಎಂದು ಆರೋಪಿಗಳು ಹೇಳಿದ್ದಾರೆ. ಈ ಸಂಬಂಧ ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ಹೇಳಿದ್ದಾರೆ.

ಸುಹಾಸ್ ಶೆಟ್ಟಿ ಹತ್ಯೆ NIAಗೆ ವಹಿಸುವಂತೆ ಮನವಿ: ಬ್ರಿಜೇಶ್​ ಚೌಟ

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಎನ್‌ಐ‌ಎಗೆ ವಹಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮನವಿ ಮಾಡಿದ್ದಾರೆ.

ಮಂಗಳೂರಿನಲ್ಲಿ ದಿನೇಶ್ ಗುಂಡೂರಾವ್ ಸಭೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ವಿಚಾರವಾಗಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶನಿವಾರ ಮಂಗಳೂರಿನಲ್ಲಿ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ, ಪಶ್ಚಿಮ ವಲಯದ ಐಜಿಪಿ, ದಕ್ಷಿಣ ಕನ್ನಡ ಡಿಸಿ, ಎಸ್​​ಪಿ, ಮಂಗಳೂರು ನಗರ ಪೊಲೀಸ್ ಆಯುಕ್ತ, ಡಿಸಿಪಿ, ಎಸಿಪಿ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಾಗುವಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ನೆಟ್ಟಾರು ಕೊಲೆ ಪ್ರತಿಕಾರಕ್ಕೆ ಫಾಜಿಲ್​ ಹತ್ಯೆ: ಇದೇ ಸೇಡಿಗೆ ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ

ಸುಹಾಸ್​ ಶೆಟ್ಟಿ ಕೊಲೆ

ಮಂಗಳೂರು ನಗರದ ಬಜ್ಪೆ ಕಿನ್ನಿಪದವು ಬಳಿ ಗುರುವಾರ ರಾತ್ರಿ ಹಿಂದೂ ಕಾರ್ಯಕರ್ತ ಸುಹಾಸ್​ ಶೆಟ್ಟಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. 2022ರಲ್ಲಿ ಹಿಂದೂ ಕಾರ್ಯಕರ್ತ ಪ್ರವೀಣ ನೆಟ್ಟಾರು ಕೊಲೆಯಾಗಿತ್ತು. ಈ ಕೊಲೆಯ ಪ್ರತಿಕಾರವಾಗಿ 2022ರ ಜೂನ್​ 28 ರಂದು ಫಾಜಲ್​ ಎಂಬ ವ್ಯಕ್ತಿಯ ಹತ್ಯೆಯಾಗಿತ್ತು. ಇದೇ ಸೇಡಿಗೆ ಸುಹಾಸ್​ ಶೆಟ್ಟಿಯ ಕೊಲೆಯಾಗಿದೆ ಎನ್ನಲಾಗುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್