ಸುಹಾಸ್​ ಕೊಲೆ: ಹಿಂದೂ ಕಾರ್ಯಕರ್ತರ ವಿರುದ್ಧ ಹೆಡ್​ ಕಾನ್ಸ್ಟೇಬಲ್ ರಶೀದ್ ದೂರು

ಮಂಗಳೂರಿನ ಬಜ್ಪೆಯಲ್ಲಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಹೆಡ್ ಕಾನ್ಸ್ಟೇಬಲ್ ರಶೀದ್ ಅವರ ಪಾತ್ರದ ಬಗ್ಗೆ ಹಿಂದೂ ಜಾಗರಣ ವೇದಿಕೆ ಆರೋಪ ಮಾಡಿದೆ. ಈ ಆರೋಪದ ನಂತರ ಸಾಮಾಜಿಕ ಜಾಲತಾಣದಲ್ಲಿ ಹೆಡ್ ಕಾನ್ಸ್ಟೇಬಲ್ ರಶೀದ್ ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್​ಗಳು ಹರಿದಾಡಿದವು.ಈ ಸಂಬಂಧ ಹೆಡ್ ಕಾನ್ಸ್ಟೇಬಲ್ ರಶೀದ್ ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಹಿಂದೂ ಮುಖಂಡರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಸುಹಾಸ್​ ಕೊಲೆ: ಹಿಂದೂ ಕಾರ್ಯಕರ್ತರ ವಿರುದ್ಧ ಹೆಡ್​ ಕಾನ್ಸ್ಟೇಬಲ್ ರಶೀದ್ ದೂರು
ಹೆಡ್​ ಕಾನ್ಸ್​ಟೇಬಲ್ ರಶೀದ್, ಸುಹಾಸ್​ ಶೆಟ್ಟಿ
Edited By:

Updated on: May 06, 2025 | 7:41 PM

ಮಂಗಳೂರು, ಮೇ 06: ಮಂಗಳೂರು ನಗರದ ಬಜ್ಪೆ ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಕೊಲೆ ಪ್ರಕರಣದಲ್ಲಿ ಬಜ್ಪೆ ಹೆಡ್​ ಕಾನ್ಸ್​ಟೇಬಲ್ ರಶೀದ್ ಕೂಡ ಪರೋಕ್ಷವಾಗಿ ಕೈಜೋಡಿಸಿದ್ದಾರೆ ಎಂದು ಹಿಂದೂ ಜಾಗರಣ ವೇದಿಕೆ (Hindu Jagaran Vedike) ಆರೋಪ ಮಾಡಿತ್ತು. ಈ ಆರೋಪ ಬೆನ್ನಲ್ಲೆ ಸಾಮಾಜಿಕ ಜಾಲತಾಣದಲ್ಲಿ ಹೆಡ್​ ಕಾನ್ಸ್​ಟೇಬಲ್ ರಶೀದ್ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್​ ಹಾಕಲಾಗಿದೆ. ಈ ಸಂಬಂಧ ಹೆಡ್​ ಕಾನ್ಸ್​ಟೇಬಲ್ ರಶೀದ್ ಅವರು ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಎಫ್​ಐಆರ್​ ದಾಖಲಾಗಿದೆ.

ಹಿಂದೂ ಮುಖಂಡ ಮೂಡಬಿದ್ರೆಯ ಸಮಿತ್ ರಾಜ್ ದರೆಗುಡ್ಡೆ, ಹಿಂದೂ ಜಾಗರಣ ವೇದಿಕೆ ಮುಖಂಡ ಕೆ.ಟಿ.ಉಲ್ಲಾಸ್ ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ವಿನಾಕಾರಣ ನನ್ನ ಹೆಸರು ತಂದಿದ್ದಾರೆ. ಯಾವುದೇ ಆಧಾರ ಇಲ್ಲದೆ ನನ್ನ ಹೆಸರು ಹಾಕಿ ಅವಹೇಳನ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ ಮಾಡಲಾಗುತ್ತಿದೆ ಎಂದು ಹೆಡ್​ ಕಾನ್ಸ್​ಟೇಬಲ್ ರಶೀದ್ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ಹೆಡ್​ ಕಾನ್ಸ್ಟೇಬಲ್ ರಶೀದ್ ವಿರುದ್ಧ ಗಂಭೀರ ಆರೋಪ

ಮಂಗಳೂರಿನ ಬಜ್ಪೆ ಠಾಣೆಯ ಹೆಡ್ ಕಾನ್ಸ್‌ಟೇಬಲ್ ರಶೀದ್ ಈ ಕೃತ್ಯದ ಹಿಂದೆ ಇರುವ ಅನುಮಾನವಿದೆ. ಸುಹಾಸ್ ಶೆಟ್ಟಿ ಸ್ನೇಹಿತರು ಆ ಬಗ್ಗೆ ಆರೋಪ ಮಾಡುತ್ತಿದ್ದಾರೆ ಎಂದು ಕೆಟಿ ಉಲ್ಲಾಸ್ ಹೇಳಿದ್ದಾರೆ. ಸುಹಾಸ್ ಶೆಟ್ಟಿಗೆ ರಶೀದ್ ಬಹಳಷ್ಟು ಟಾರ್ಚರ್ ಕೊಡುತ್ತಿದ್ದರು. ಮೂರು ದಿನದ ಹಿಂದಷ್ಟೇ ಶಸ್ತ್ರಾಸ್ತ್ರ ತೆಗೆಸಿದ್ದರು. ಆ ಸುದ್ದಿ ಆರೋಪಿಗಳಿಗೆ ಹೇಗೆ ಗೊತ್ತಾಯಿತು? ಬಲವಾದ ಮಾಹಿತಿಯನ್ನು ರಶೀದ್ ಆರೋಪಿಗಳಿಗೆ ನೀಡಿರಬೇಕು. ರಶೀದ್ ಅವರನ್ನು ತನಿಖೆಗೆ ಒಳಪಡಿಸಬೇಕು ಎಂದು ಹಿಂದೂ ಜಾಗರಣ ವೇದಿಕೆಯ ಮುಖಂಡ ಕೆಟಿ ಉಲ್ಲಾಸ್ ಆಗ್ರಹಿಸಿದ್ದರು.

ಇದನ್ನೂ ಓದಿ
ಸುಹಾಸ್ ಶೆಟ್ಟಿ ಕೊಲೆಗೆ ವಿದೇಶದಿಂದ ಹಣ ಸಂದಾಯವಾಗಿರುವ ಶಂಕೆ
ಸುಹಾಸ್ ಶೆಟ್ಟಿ ಕೊಲೆ: ಇಲ್ಲಿದೆ ಆರೋಪಿಗಳ ಪ್ಲ್ಯಾನ್​​ನ ಇನ್​ಸೈಡ್ ಡಿಟೇಲ್ಸ್
ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಮಂಗಳೂರಿನ 3 ಕಡೆ ಚಾಕು ಇರಿತ: 7 ಜನರ ಬಂಧನ
ಸುಹಾಸ್ ಕೊಲೆ ಕೇಸ್​ನಲ್ಲಿ ಅರೆಸ್ಟ್ ಆಗಿರುವ ಇಬ್ಬರು ಹಿಂದೂಗಳು ಯಾರು?

ಇದನ್ನೂ ಓದಿ: ಸುಹಾಸ್ ಶೆಟ್ಟಿ ಕೊಲೆಗೆ ವಿದೇಶದಿಂದ ಹಣ ಸಂದಾಯವಾಗಿರುವ ಶಂಕೆ: ಬ್ಯಾಂಕ್ ಖಾತೆಗಳ ಪರಿಶೀಲನೆಗೆ ಮುಂದಾದ ಮಂಗಳೂರು ಪೊಲೀಸರು

PFI ಕೈವಾಡ ಶಂಕೆ

ಸುಹಾಸ್ ಶೆಟ್ಟಿ ಹತ್ಯೆ ಹಿಂದೆ ಪಿಎಫ್​ಐ ನೇರ ಕೈವಾಡವಿದೆ ಎಂದ ವಿ‌ಎಚ್​ಪಿ ಮುಖಂಡ ಶರಣ್ ಪಂಪ್ವೆಲ್ ಕೂಡ ಆರೋಪಿಸಿದ್ದರು. ಮಂಗಳೂರಿನಲ್ಲಿ ‘ಟಿವಿ9’ ಜತೆ ಮಾತನಾಡಿದ ಅವರು, ಈ ಹಿಂದೆ ನಡೆದ ಹಿಂದೂ ನಾಯಕರ ಹತ್ಯೆಗೂ ಇದಕ್ಕೂ ಸಾಮ್ಯತೆ ಇದೆ. ತರಬೇತಿ ಪಡೆದುಕೊಂಡು ಈ ಹತ್ಯೆ ಮಾಡಿದ್ದಾರೆ. ಆರೋಪಿ ಸಫ್ವಾನ್ ಪಿಎಎಫ್​​​ಐ ಕಾರ್ಯಕರ್ತನ ಮನೆಯಲ್ಲಿದ್ದ ಎಂದಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ