ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರಿನ ಬಳಿ ಇರುವ ಪುರ್ಲುಮಕ್ಕಿಯಲ್ಲಿ ಅಡಿಕೆ ಕದ್ದ ಆರೋಪದಲ್ಲಿ ಬಾಲಕನೊಬ್ಬನನ್ನು ಮನಬಂದಂತೆ ಥಳಿಸಲಾಗಿತ್ತು. ಬಾಲಕನ ಮೇಲೆ ಸ್ಥಳೀಯರು ಮಾರಣಾಂತಿಕ ಹಲ್ಲೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಲ್ಲೆಗೊಳಗಾದ ಬಾಲಕ ಮಕ್ಕಳ ಕಲ್ಯಾಣ ಇಲಾಖೆಗೆ ದೂರು ನೀಡಿದ್ದಾನೆ. ಆತನ ಮೇಲೆ ಹಲ್ಲೆ ನಡೆಸಿದ 10 ಜನರ ವಿರುದ್ಧ ಕೇಸ್ ದಾಖಲಿಸಲಾಗಿದೆ.
ಗುತ್ತಿಗಾರ್‌ನ 16 ವರ್ಷದ ಬಾಲಕನ ಮೇಲೆ 10 ಜನರು ಮನಬಂದಂತೆ ಥಳಿಸಿದ್ದಾರೆ. ಬಾಲಕನಿಗೆ ಥಳಿಸಿರುವ ಹಲ್ಲೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಲಾಗಿದೆ. ಈ ವೀಡಿಯೋವನ್ನು ಆಧರಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಅಡಿಕೆ ಕದ್ದಿರುವ ಆರೋಪದಲ್ಲಿ ಬಾಲಕನಿಗೆ ಥಳಿಸಲಾಗಿದೆ.
ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ಅನ್ವಯ ಗುತ್ತಿಗಾರ್ ಸುತ್ತಮುತ್ತಲಿನ ಮನೆಗಳಲ್ಲಿ ವಾಸಿಸುವ ಜೀವನ್, ವರ್ಷಿತ್, ಸಚಿನ್, ಮೋಕ್ಷಿತ್, ಸನತ್, ಮುರಳಿ, ದಿನೇಶ್, ಈಶ್ವರ್ಚಂದ್ರ ಮತ್ತು ಚೇತನ್ ಗುತ್ತಿಗಾರ್ ಅವರ ವಿರುದ್ಧ ಕೇಸ್ ದಾಖಲಿಸಲಾಗಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಅವರೆಲ್ಲರೂ ನಾಪತ್ತೆಯಾಗಿದ್ದಾರೆ.
ಗುತ್ತಿಗಾರು ಗ್ರಾಮದ ವಳಲಂಬೆಯ ಪುರ್ಲುಮಕ್ಕಿ ಎಂಬಲ್ಲಿ ಕಳೆದ ವಾರ ಹಣ್ಣು ಅಡಿಕೆ ಕದ್ದಿದ್ದಾನೆ ಎಂಬ ಆರೋಪದಲ್ಲಿ 16 ವರ್ಷದ ಬಾಲಕನ ಮೇಲೆ ಹಲ್ಲೆ ನಡೆಸಲಾಗಿದೆ. ಈ ವಿಡಿಯೋ ತಡವಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಲಾರಂಭಿಸಿದೆ.
ಇದನ್ನೂ ಓದಿ: 17 ವರ್ಷದಿಂದ ಕಾಡಲ್ಲೇ ವಾಸ, ಕಾರೇ ಮನೆ! ನಾಗರಿಕ ಸಮಾಜವನ್ನು ಧಿಕ್ಕರಿಸಿ ಬದುಕುತ್ತಿರುವ ಸುಳ್ಯದ ವ್ಯಕ್ತಿಯ ಕಥೆಯಿದು
ಸುಳ್ಯ: ಪ್ರಧಾನಿ ಮೋದಿಯೇ ಸೂಚಿಸಿದರೂ ಊರಿನ ಬೇಡಿಕೆ ಈಡೇರಲಿಲ್ಲ! ಆಗ ಗ್ರಾಮಸ್ಥರು ಏನು ಮಾಡಿದರು ಗೊತ್ತಾ?