
ಸುಳ್ಯ, ಸೆ.9: ಜಿಲ್ಲೆಯ ಸರ್ಕಾರಿ ವಿದ್ಯಾರ್ಥಿನಿಲಯಕ್ಕೆ ಅಕ್ರಮವಾಗಿ ನುಗ್ಗಿ, ವಿದ್ಯಾರ್ಥಿನಿಯರು ಒಣಗಿಸಲು ಹಾಕಿದ್ದ ಉಡುಪುಗಳನ್ನು ಕದಿಯುತ್ತಿದ್ದ ಕಿಡಿಗೇಡಿಯೊಬ್ಬನನ್ನು ಬೆಳ್ಳಾರೆ ಠಾಣೆ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿರುವ ಸರ್ಕಾರಿ ವಿದ್ಯಾರ್ಥಿನಿಲಯದಲ್ಲಿ (ಲೇಡೀಸ್ ಹಾಸ್ಟೆಲ್) ಕಳೆದ ಕೆಲವು ದಿನಗಳಿಂದ ವಿದ್ಯಾರ್ಥಿನಿಯರು ಒಣಗಿಸಲು ಹಾಕುತ್ತಿದ್ದ ನಿರ್ದಿಷ್ಟ ಉಡುಪುಗಳು ಸತತವಾಗಿ ಗಾಯಬಾಗುತ್ತಿದ್ದವು. ಇದರಿಂದ ಸಂಶಯಗೊಂಡ ಹಾಸ್ಟೆಲ್ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಸಿಸಿಟಿವಿ (CCTV) ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಕಳ್ಳನ ವಿಕೃತ ಕೃತ್ಯ ಬಯಲಿಗೆ ಬಂದಿದೆ.
ಹಾಸ್ಟೆಲ್ ಆವರಣದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ವ್ಯಕ್ತಿಯೊಬ್ಬ ರಾತ್ರಿ ವೇಳೆ ಗುಟ್ಟಾಗಿ ನುಗ್ಗಿ ಉಡುಪುಗಳನ್ನು ಕದೊಯ್ಯುತ್ತಿರುವ ದೃಶ್ಯ ಸ್ಪಷ್ಟವಾಗಿ ಸೆರೆಯಾಗಿತ್ತು. ತಕ್ಷಣವೇ ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸಿಸಿಟಿವಿ ಚಲನವಲನಗಳ ಆಧಾರದ ಮೇಲೆ ಜಾಲ ಬೀಸಿದ ಪೊಲೀಸರು ಆರೋಪಿಯನ್ನು ಹೆಡೆಮುರಿ ಕಟ್ಟಿದ್ದಾರೆ.
ಇನ್ನು ಬಂಧಿತ ಆರೋಪಿಯನ್ನು ಪುತ್ತೂರು ತಾಲೂಕಿನ ಕೊಳ್ತಿಗೆ ನಿವಾಸಿ ಕೆ. ರಾಮಚಂದ್ರ (35) ಎಂದು ಹೇಳಲಾಗಿದೆ. ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಕೃತ್ಯದ ಹಿಂದಿರುವ ಉದ್ದೇಶ ಹಾಗೂ ಈತ ಇತರ ಕಡೆಗಳಲ್ಲೂ ಇಂತಹ ಕೃತ್ಯ ಎಸಗಿದ್ದಾನೆಯೇ ಎಂಬುದರ ಕುರಿತು ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ: ‘ಆನ್ಲೈನ್ನಲ್ಲಿಯೇ ಕಥೆ-ಕಾದಂಬರಿ ಓದಿ ಹಣ ಸಂಪಾದಿಸಿ’: ಬಣ್ಣದ ಮಾತು ನಂಬಿ ಹಣ ಕಳೆದುಕೊಂಡ ಸಾವಿರಾರು ಮಂದಿ
ಅಪ್ರಾಪ್ತ ಮಗನೊಂದಿಗೆ ಸೇರಿ ಮನೆಗಳ್ಳತನ ಮಾಡುತ್ತಿದ್ದ ವೃತ್ತಿಪರ ಕಳ್ಳನೊಬ್ಬನನ್ನು ಕೋಣನಕುಂಟೆ ಠಾಣೆ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂದಿತನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಒಳ್ಳಗಾನಹಳ್ಳಿ ಹಾಗೂ ಕೃಷ್ಣಪ್ಪ ಲೇಔಟ್‌ನಲ್ಲಿ ಇತ್ತೀಚೆಗೆ ಎರಡು ಪ್ರತ್ಯೇಕ ಮನೆಗಳ್ಳತನ ಪ್ರಕರಣಗಳು ವರದಿಯಾಗಿದ್ದವು. ಮನೆಗಳ ಕಿಟಕಿ ಮತ್ತು ಹಿಂಬಾಗಿಲುಗಳನ್ನು ಮುರಿದು ಒಳನುಗ್ಗುತ್ತಿದ್ದ ಕಳ್ಳರು, ಲಾಕರ್‌ನಲ್ಲಿದ್ದ ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳನ್ನು ದೋಚಿ ಪರಾರಿಯಾಗುತ್ತಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಕೋಣನಕುಂಟೆ ಪೊಲೀಸರು ತನಿಖೆ ಚುರುಕುಗೊಳಿಸಿ, ಲಭಿಸಿದ ಖಚಿತ ಮಾಹಿತಿ ಆಧರಿಸಿ ಹರಿನಗರದಲ್ಲಿರುವ ನಿವಾಸದಲ್ಲೇ ಪ್ರಮುಖ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಬಾಬಜಾನ್ ಆರೋಪಿ ಬಾಬಜಾನ್ ತನ್ನ ಸ್ವಂತ ಅಪ್ರಾಪ್ತ ಮಗನನ್ನೇ ಜೊತೆಗೂಡಿಸಿಕೊಂಡು ರಾತ್ರಿ ವೇಳೆ ಮನೆಗಳ ಕನ್ನಗಳ್ಳತನ ನಡೆಸುತ್ತಿದ್ದ ವಿಚಾರ ತನಿಖೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ. 161 ಗ್ರಾಂನ ಚಿನ್ನಾಭರಣ, 150 ಗ್ರಾಂನ ಬೆಳ್ಳಿ ವಸ್ತುಗಳು, ಒಟ್ಟು 18 ಲಕ್ಷ ರೂ ಮೌಲ್ಯದ ವಸ್ತುಗಳನ್ನು ಕಳ್ಳತನ ಮಾಡಲಾಗಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ