AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sullia News: ಸುಳ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲಿನ ಪರಾಮರ್ಶೆ ಸಭೆಯಲ್ಲಿ ​ಹೊಡೆದಾಟ

ಮಾತಿಗೆ ಮಾತು ಬೆಳೆದು ಜಿ ಕೃಷ್ಣಪ್ಪ, ನಂದಕುಮಾರ್​ ಬಣದ ನಡುವೆ ತಳ್ಳಾಟ, ನೂಕಾಟ, ಗಲಾಟೆ ನಡೆಯಿತು. ನಂದಕುಮಾರ್ ಬಣದ ಮುಖಂಡನನ್ನು ಎಳೆದಾಡಿ ಹಲ್ಲೆ ನಡೆಸಿದ ಆರೋಪ ಕೂಡ ಕೇಳಿಬಂದಿದೆ.

ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Jul 14, 2023 | 10:45 PM

Share

ಮಂಗಳೂರು, ಜುಲೈ 14: ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ (Congress) ಸೋಲಿಗೆ ಸಂಬಂಧಿಸಿ ಶುಕ್ರವಾರ ನಡೆದ ಪರಾಮರ್ಶೆ ಸಭೆ ಎರಡು ಬಣಗಳ ನಡುವಣ ಸಂಘರ್ಷಕ್ಕೆ ಸಾಕ್ಷಿಯಾಯಿತು. ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಕಡಬ ಪಟ್ಟಣದ ಡಾ.ಅಂಬೇಡ್ಕರ್​ ಭವನದಲ್ಲಿ ಪರಾಮರ್ಶೆ ಸಭೆ ನಡೆದಿದ್ದು, ಸಭೆಯಲ್ಲಿ ಗಲಾಟೆ ನಡೆದಿದೆ. ಎರಡು ಬಣಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ನಂತರ ಪರಸ್ಪರ ಹೊಡೆದಾಟಕ್ಕೆ ತಿರುಗಿದೆ. ಪರಾಜಿತ ಅಭ್ಯರ್ಥಿ ಜಿ ಕೃಷ್ಣಪ್ಪ, ನಂದಕುಮಾರ್​ ಬಣದ ನಡುವೆ ಘರ್ಷಣೆ ಸಂಭವಿಸಿದೆ.

ಸುಳ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲಿನ ಬಗ್ಗೆ ಅಭಿಪ್ರಾಯ ಸಂಗ್ರಹಿಸಲು ಸಮಿತಿ ರಚಿಸಲಾಗಿತ್ತು. ಈ ಸಮಿತಿಯ ಸಭೆ ಕರೆಯಲಾಗಿದ್ದು, ಮುಖಂಡರು ಭಾಗವಹಿಸಿದ್ದರು. ಈ ಸಭೆಗೆ ಉಚ್ಚಾಟಿತ ಮುಖಂಡರು ಬಂದಿದ್ದಕ್ಕೆ ಜಿ. ಕೃಷ್ಣಪ್ಪ ಬಣ ಆಕ್ರೋಶ ವ್ಯಕ್ತಪಡಿಸಿದೆ. ಉಚ್ಚಾಟಿಸಿದ್ದರೂ ಸಭೆಗೆ ಬಂದಿದ್ದೀರಿ ಮಾನ ಮರ್ಯಾದೆ ಇಲ್ಲವೇ ಎಂದು ಪ್ರಶ್ನಿಸಿದೆ.

ಪರಾಜಿತ ಕಾಂಗ್ರೆಸ್​ ಅಭ್ಯರ್ಥಿ ಜಿ. ಕೃಷ್ಣಪ್ಪ ಕೂಡ ಅದೇ ಪ್ರಶ್ನೆ ಎತ್ತಿದಾಗ ಸಭೆಯಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಯಿತು.

ಕಡಬ ತಾಲೂಕಿನಲ್ಲಿ ಪಕ್ಷ ಸಂಘಟಿಸಿದ ನಮ್ಮನ್ನು ಪ್ರಶ್ನಿಸುವ ಹಕ್ಕು ನಿಮಗೆ ನೀಡಿದವರು ಯಾರು? ಎಲ್ಲಿಂದಲೋ ಬಂದ ನಿಮಗೆ ಪ್ರಶ್ನಿಸುವ ಹಕ್ಕು ಕೊಟ್ಟವರು ಯಾರು ಎಂದು ಮತ್ತೊಂದು ಬಣ ಮರು ಪ್ರಶ್ನೆ ಹಾಕಿತು.

ಇದನ್ನೂ ಓದಿ: ಕುಮಾರಸ್ವಾಮಿಯನ್ನು ಪ್ರತಿಪಕ್ಷ ನಾಯಕನಾಗಿ ನೇಮಿಸಲು ಹೊರಟ ಬಿಜೆಪಿ; ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಮಾತಿಗೆ ಮಾತು ಬೆಳೆದು ಜಿ ಕೃಷ್ಣಪ್ಪ, ನಂದಕುಮಾರ್​ ಬಣದ ನಡುವೆ ತಳ್ಳಾಟ, ನೂಕಾಟ, ಗಲಾಟೆ ನಡೆಯಿತು. ನಂದಕುಮಾರ್ ಬಣದ ಮುಖಂಡನನ್ನು ಎಳೆದಾಡಿ ಹಲ್ಲೆ ನಡೆಸಿದ ಆರೋಪ ಕೂಡ ಕೇಳಿಬಂದಿದೆ.

ಬಳಿಕ ಪೊಲೀಸರ ಮಧ್ಯಪ್ರವೇಶದಿಂದ ವಾಗ್ವಾದ, ಹೊಡೆದಾಟ ತಣ್ಣಗಾಗಿದೆ. ಸದ್ಯ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:05 pm, Fri, 14 July 23

Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ