AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DK Shivakumar: ಡಿ.ಕೆ. ಶಿವಕುಮಾರ್​ಗೆ ನಿಂದಿಸಿದ್ದ ವ್ಯಕ್ತಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

DK Shivakumar: ಕೆಪಿಸಿಸಿ ಹಾಲಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ನಿಂದಿಸಿದ್ದ ಪ್ರಕರಣದಲ್ಲಿ ಆರೋಪಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ನ್ಯಾಯಾಲಯದ ಜಡ್ಜ್​ ಸೋಮಶೇಖರ್ ಅವರು ಮಹತ್ವದ ತೀರ್ಪು ನೀಡಿದ್ದಾರೆ.

DK Shivakumar: ಡಿ.ಕೆ. ಶಿವಕುಮಾರ್​ಗೆ ನಿಂದಿಸಿದ್ದ ವ್ಯಕ್ತಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ
ಡಿ.ಕೆ. ಶಿವಕುಮಾರ್​
TV9 Web
| Edited By: |

Updated on:Apr 18, 2022 | 8:14 PM

Share

ಮಂಗಳೂರು: ಕೆಪಿಸಿಸಿ ಹಾಲಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ನಿಂದಿಸಿದ್ದ ಪ್ರಕರಣದಲ್ಲಿ ಆರೋಪಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ನ್ಯಾಯಾಲಯದ ಜಡ್ಜ್​ ಸೋಮಶೇಖರ್ ಅವರು ಮಹತ್ವದ ತೀರ್ಪು ನೀಡಿದ್ದಾರೆ. ಕಾಂಗ್ರೆಸ್​ ನಾಯಕ ಡಿಕೆ ಶಿವಕುಮಾರ್​​ಗೆ ನಿಂದಿಸಿದ್ದ ಆರೋಪ ಹೊತ್ತಿದ್ದ ಸುಳ್ಯ ತಾಲೂಕಿನ ಬೆಳ್ಳಾರೆಯ ಗಿರಿಧರ್ ರೈಗೆ ಜೈಲು ಶಿಕ್ಷೆ ವಿಧಿಸಲಾಗಿದೆ.

ಏನಿದು ಪ್ರಕರಣ?: 2016ರಲ್ಲಿ ಡಿಕೆ ಶಿವಕುಮಾರ್ ಇಂಧನ ಸಚಿವರಾಗಿದ್ದ ವೇಳೆ ನಡೆದಿದ್ದ ಪ್ರಕರಣ ಇದಾಗಿದೆ. ಸುಳ್ಯ ತಾಲೂಕಿನ ಬೆಳ್ಳಾರೆಯ ಗಿರಿಧರ್ ರೈ ಎಂಬಾತ 2016ರ ಫೆಬ್ರವರಿ 28ರಂದು ಅಂದಿನ ಇಂಧನ ಸಚಿವ ಡಿಕೆ ಶಿವಕುಮಾರ್​​ಗೆ ಕರೆ ಮಾಡಿದ್ದರು. ವಿದ್ಯುತ್ ಸಮಸ್ಯೆ ಹೇಳಿಕೊಳ್ಳಲು ಕರೆ ಮಾಡಿದ್ದ ವೇಳೆ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಈ ಹಿನ್ನೆಲೆಯಲ್ಲಿ ಅಂದಿನ ಮೆಸ್ಕಾಂ ಎಂಡಿ ಮೂಲಕ ಗಿರಿಧರ್ ವಿರುದ್ದ ಡಿಕೆ ಶಿವಕುಮಾರ್ ಪೊಲೀಸ್ ದೂರು ದಾಖಲಿಸಿದ್ದರು. ಕೇಸು ದಾಖಲಿಸಿಕೊಂಡಡಿದ್ದ ಪೊಲೀಸರು ರಾತ್ರೋರಾತ್ರಿ ಗಿರಿಧರ್ ರೈನನ್ನು ಬಂಧಿಸಿದ್ದರು.

ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ಸೆಲ್ಫಿ ತೆಗೆಯಲು ಹೋಗಿ GKVK ಇಬ್ಬರು ವಿದ್ಯಾರ್ಥಿಗಳು ನೀರುಪಾಲು ಉಡುಪಿ: ಸೈಂಟ್ ಮೇರಿಸ್ ದ್ವೀಪದಲ್ಲಿ ಸೆಲ್ಫಿ ತೆಗೆಯಲು ಹೋಗಿ ಯುವಕರಿಬ್ಬರು ನೀರುಪಾಲಾಗಿದ್ದಾರೆ. ಮಲ್ಪೆ ಬೀಚ್ ಸಮೀಪದ ಸೈಂಟ್ ಮೇರಿಸ್ ದ್ವೀಪದತ್ತ ಪ್ರವಾಸ ಬಂದಿದ್ದ ಬೆಂಗಳೂರಿನ GKVK ಕೃಷಿ ಕಾಲೇಜು ವಿದ್ಯಾರ್ಥಿಗಳು ಮೃತರು. ಒಟ್ಟು 68 ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದರು. ಲೈಫ್ ಗಾರ್ಡ್ ಸಿಬ್ಬಂದಿಗಳ ಸೂಚನೆ ಮೀರಿ ಸೆಲ್ಫಿ ತೆಗೆಯಲು ಹೋದಾಗ ಯುವಕರು ದುರಂತಕ್ಕೆ ಈಡಾಗಿದ್ದಾರೆ. ಲೈಫ್ ಗಾರ್ಡ್ ಸಿಬ್ಬಂದಿ ಓರ್ವನ ಶವ ಮೇಲಕ್ಕೆತ್ತಿದ್ದು, ಸತೀಶ್ (21) ನೀರುಪಾಲಾದ ಒಬ್ಬ ಯುವಕ ಎಂದು ಗುರುತಿಸಲಾಗಿದೆ. ನೀರು ಪಾಲದ ಮತ್ತೊಬ್ಬ ಯುವಕನ ಹೆಸರೂ ಸತೀಶ್ (21) ಎಂದಿದ್ದು, ಆತನಿಗಾಗಿ ಶೋಧ ನಡೆದಿದೆ.

ಇದೂ ಓದಿ: ಭ್ರಷ್ಟಾಚಾರ ಆರೋಪ: ದಾಖಲೆ ನೀಡಿದರೆ ತನಿಖೆ ಎಂದ ಸಿಎಂ ಬೊಮ್ಮಾಯಿ, ಸಾಕ್ಷ್ಯ ರೂಪದಲ್ಲಿ ಮತ್ತೆ ದಿಂಗಾಲೇಶ್ವರ ಶ್ರೀ ಆರೋಪ

ಇದೂ ಓದಿ: ಹಂಪಿ ಸ್ಮಾರಕಗಳ ಸೌಂದರ್ಯಕ್ಕೆ ಮನಸೋತ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ವಿರೂಪಾಕ್ಷೇಶ್ವರ ದೇಗುಲದಲ್ಲಿ ವಿಶೇಷ ಪೂಜೆ

Published On - 8:06 pm, Mon, 18 April 22

ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ರಾಶಿಕಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ತಾಯಿ
ರಾಶಿಕಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ತಾಯಿ
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಮದ್ವೆಯಾದ ಹತ್ತೇ ದಿನದಲ್ಲಿ ನವವಿವಾಹಿತ ಜೈಲು ಪಾಲು!
ಮದ್ವೆಯಾದ ಹತ್ತೇ ದಿನದಲ್ಲಿ ನವವಿವಾಹಿತ ಜೈಲು ಪಾಲು!
ಅಲೋಕ್ ಕುಮಾರ್ ವಿಶೇಷ ಕಾರ್ಯಾಚರಣೆ:ಮಂಗಳೂರು ಜೈಲು ಪರಿಶೀಲನೆ
ಅಲೋಕ್ ಕುಮಾರ್ ವಿಶೇಷ ಕಾರ್ಯಾಚರಣೆ:ಮಂಗಳೂರು ಜೈಲು ಪರಿಶೀಲನೆ
ವಾಹನ ಸವಾರರೇ ಎಚ್ಚರ ಎಚ್ಚರ: ಬೆಂಗಳೂರಲ್ಲಿ ಪಂಕ್ಚರ್ ಮಾಫಿಯಾ ಮತ್ತೆ ಸಕ್ರಿಯ
ವಾಹನ ಸವಾರರೇ ಎಚ್ಚರ ಎಚ್ಚರ: ಬೆಂಗಳೂರಲ್ಲಿ ಪಂಕ್ಚರ್ ಮಾಫಿಯಾ ಮತ್ತೆ ಸಕ್ರಿಯ
ದಂಪತಿ ರೈಲಿನಿಂದ ಹಾರುವ ಮುನ್ನ ಇಬ್ಬರ ನಡುವೆ ರೈಲಿನಲ್ಲಿ ಏನಾಗಿತ್ತು ನೋಡಿ
ದಂಪತಿ ರೈಲಿನಿಂದ ಹಾರುವ ಮುನ್ನ ಇಬ್ಬರ ನಡುವೆ ರೈಲಿನಲ್ಲಿ ಏನಾಗಿತ್ತು ನೋಡಿ
ಚಾಮರಾಜನಗರ: ಚಿರತೆ ಸೆರೆಗೆ ಇಟ್ಟಿದ್ದ ಬೋನಿನಲ್ಲಿ ಸಿಕ್ಕಿಬಿದ್ದ ವ್ಯಕ್ತಿ!
ಚಾಮರಾಜನಗರ: ಚಿರತೆ ಸೆರೆಗೆ ಇಟ್ಟಿದ್ದ ಬೋನಿನಲ್ಲಿ ಸಿಕ್ಕಿಬಿದ್ದ ವ್ಯಕ್ತಿ!