AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suratkal Murder: ಸುರತ್ಕಲ್ ಹತ್ಯೆ; ಶಾಲಾ ಕಾಲೇಜುಗಳಿಗೆ ರಜೆ, ಮಸೀದಿಗಳಲ್ಲಿ ಪ್ರಾರ್ಥನೆ ಬೇಡವೆಂದು ಪೊಲೀಸರ ಮನವಿ

Fazil Mangalpet: ಸುರತ್ಕಲ್, ಪಣಂಬೂರು, ಬಜ್ಪೆ, ಮುಲ್ಕಿ ಸುತ್ತಮುತ್ತಲ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Suratkal Murder: ಸುರತ್ಕಲ್ ಹತ್ಯೆ; ಶಾಲಾ ಕಾಲೇಜುಗಳಿಗೆ ರಜೆ, ಮಸೀದಿಗಳಲ್ಲಿ ಪ್ರಾರ್ಥನೆ ಬೇಡವೆಂದು ಪೊಲೀಸರ ಮನವಿ
ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್
TV9 Web
| Edited By: |

Updated on:Jul 29, 2022 | 6:55 AM

Share

ಮಂಗಳೂರು: ದೇಶವ್ಯಾಪಿ ಗಮನ ಸೆಳೆದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ (Praveen Nettar) ಕೊಲೆ ಪ್ರಕರಣಗಳ ಬೆನ್ನಿಗೇ ನಗರ ಹೊರವಲಯದ ಸುರತ್ಕಲ್​​ನಲ್ಲಿ ಮತ್ತೊಬ್ಬ ಯುವಕನ ಕೊಲೆಯಾಗಿದೆ. ಫಾಜಿಲ್​ ಮಂಗಲಪೇಟೆ (Fazil Murder) (23) ಹತ್ಯೆ ಹಿನ್ನೆಲೆಯಲ್ಲಿ ಮಂಗಳೂರು ನಗರದ ಸುರತ್ಕಲ್​, ಮುಲ್ಕಿ ಪೊಲೀಸ್ ಠಾಣೆ, ಬಜ್ಪೆ, ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ವ್ಯಾಪಕ ಪೊಲೀಸ್ ಬಂದೋಬಸ್ತ್​ ಹಾಕಲಾಗಿದ್ದು, ಸುರತ್ಕಲ್​ನ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ನಿರಂತರ ಗಸ್ತು ತಿರುಗುತ್ತಿದ್ದಾರೆ. ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಹತ್ಯೆಯ ಹಿನ್ನೆಲೆಯಲ್ಲಿ ಸಾಮಾಜಿಕ ವಾತಾವರಣ ಕಾವೇರಿರುವುದರಿಂದ ಸುರತ್ಕಲ್, ಪಣಂಬೂರು, ಬಜ್ಪೆ, ಮುಲ್ಕಿ ಸುತ್ತಮುತ್ತಲ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ರಜೆ ಕೊಡುವಂತೆ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಅವರಿಗೆ ಪೊಲೀಸ್ ಕಮಿಷನರ್ ಎನ್​.ಶಶಿಕುಮಾರ್ ವಿನಂತಿಸಿದ್ದರು.

ನಿಷೇಧಾಜ್ಞೆ ಇರುವ ಸೂಕ್ಷ್ಮ ಪ್ರದೇಶಗಳ ಮಸೀದಿಗಳಲ್ಲಿ ಇಂದು ಪ್ರಾರ್ಥನೆ ಬೇಡ ಎಂದು ಮುಸ್ಲಿಮರಿಗೆ ಪೊಲೀಸರು ಮನವಿ ಮಾಡುತ್ತಿದ್ದಾರೆ. ಮನೆಗಳಲ್ಲಿ ಅಥವಾ ನಿಷೇಧಾಜ್ಞೆ ಇಲ್ಲದ ಮಸೀದಿಗಳಲ್ಲಿ ಪ್ರಾರ್ಥನೆ ಮಾಡಿ ಪ್ರಾರ್ಥನೆ ಮಾಡುವಂತೆ ಪೊಲೀಸರು ವಿನಂತಿಸಿದ್ದಾರೆ.

ವದಂತಿಗಳಿಗೆ ಕಿವಿಗೊಡಬೇಡಿ

ಮಂಗಳೂರು ಹೊರವಲಯದ ಸುರತ್ಕಲ್‌ನಲ್ಲಿ ಫಾಜಿಲ್ ಹತ್ಯೆ ಹಿನ್ನೆಲೆ ಘಟನಾ ಸ್ಥಳದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಫಾಜಿಲ್ ಹತ್ಯೆಗೆ ನಿಖರ ಕಾರಣ ಗೊತ್ತಿಲ್ಲ. ಕೊಲೆ ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಂಡಿದ್ದೇವೆ. ಕೊಲೆ ಸಂಬಂಧ ಯಾರೂ ವದಂತಿಗಳಿಗೆ ಕಿವಿಗೊಡಬಾರದು. ಶಾಂತಿ ಕದಡುವ ಪ್ರಯತ್ನ ನಡೆಸಬಾರದು ಎಂದು ಸಾರ್ವಜನಿಕರಿಗೆ ತಿಳಿಹೇಳಿದರು.

Published On - 6:51 am, Fri, 29 July 22

Follow Us
TV9 Web
TV9 Web

TV9 Kannada

Read More
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ