Suratkal Murder: ಫಾಜಿಲ್ ಅಂತ್ಯಸಂಸ್ಕಾರಕ್ಕೆ ಕುಟುಂಬ ಸದಸ್ಯರ ಸಿದ್ಧತೆ, 12 ಮಂದಿ ಪೊಲೀಸರ ವಶಕ್ಕೆ

ಮಂಗಳೂರಿನ ಸುರತ್ಕಲ್​​ನಲ್ಲಿ ಫಾಜಿಲ್​ ಹತ್ಯೆ ಪ್ರಕರಣ ಸಂಬಂಧ 12 ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದರು.

Suratkal Murder: ಫಾಜಿಲ್ ಅಂತ್ಯಸಂಸ್ಕಾರಕ್ಕೆ ಕುಟುಂಬ ಸದಸ್ಯರ ಸಿದ್ಧತೆ, 12 ಮಂದಿ ಪೊಲೀಸರ ವಶಕ್ಕೆ
ಫಾಜಿಲ್​, ಸುರತ್ಕಲ್​​ನಲ್ಲಿ ಫಾಜಿಲ್​ ಹತ್ಯೆಯಾದ ಸ್ಥಳ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Jul 29, 2022 | 10:52 AM

ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ (Praveen Nettar) ಕೊಲೆ ಪ್ರಕರಣ ಮಾಸುವ ಮುನ್ನವೆ ನಗರ ಹೊರವಲಯದ ಸುರತ್ಕಲ್​​ನಲ್ಲಿ ಫಾಜಿಲ್​ ಮಂಗಲಪೇಟೆ (Fazil Murder) (23) ಹತ್ಯೆ ಎಂಬ ಯುವಕನ ಹತ್ಯೆಯಾಗಿದೆ. ಫಾಜಿಲ್​ ಹತ್ಯೆಯ ನಂತರ ಅನುಮಾನಾಸ್ಪದವಾಗಿ ಕಂಡುಬಂದ 12 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಲಾಗುತ್ತಿ ಎಂದು ಮಂಗಳೂರು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದರು. ಮಂಗಳೂರು ಪೊಲೀಸ್ ಆಯುಕ್ತ ಎನ್​.ಶಶಿಕುಮಾರ್ ಹೇಳಿಕೆ ನೀಡಿದ್ದು, ನಿಷೇಧಾಜ್ಞೆ ಉಲ್ಲಂಘಿಸಿದ 14 ಜನರನ್ನು ವಶಕ್ಕೆ ಪಡೆದಿದ್ದೇವೆ. ಫಾಜಿಲ್ ಹತ್ಯೆ ಪ್ರಕರಣ ಸಂಬಂಧ ಸಿಸಿಟಿವಿ ದೃಶ್ಯಗಳನ್ನಾಧರಿಸಿ ಕೆಲವರನ್ನ ವಶಕ್ಕೆ ಪಡೆದಿದ್ದೇವೆ. ಎಲ್ಲವೂ ಶಾಂತಿಯುತವಾಗಿ ನಡೆಯುತ್ತಿದೆ ಎಂದು ಹೇಳಿದರು. ಸುರತ್ಕಲ್​​ನ ಗಣೇಶಪುರದಲ್ಲಿ ಬಿಗಿ ಪೊಲೀಸ್ ಭದ್ರತೆ ನೀಡಲಾಗಿದೆ.

ಇದನ್ನೂ ಓದಿ: Suratkal Murder: ಸುರತ್ಕಲ್ ಹತ್ಯೆ; ಶಾಲಾ ಕಾಲೇಜುಗಳಿಗೆ ರಜೆ, ಮಸೀದಿಗಳಲ್ಲಿ ಪ್ರಾರ್ಥನೆ ಬೇಡವೆಂದು ಪೊಲೀಸರ ಮನವಿ

ಅಂತ್ಯಕ್ರಿಯೆಗೆ ಸಕಲ ಸಿದ್ಧತೆ

ಮೃತ ಫಾಜಿಲ್ ಮೃತ ದೇಹ ಮನೆಗೆ ತಲುಪಿದ್ದು, ಸಾರ್ವಜನಿಕ ಅಂತಿ ದರ್ಶನಕ್ಕೆ ಅವಕಾಶ ನೀಡಲಾಗಿದೆ. ನಗರದ ಖಾಸಗಿ ಆಸ್ಪತ್ರೆಯಿಂದ ಸುರತ್ಕಲ್ ಮಂಗಳಪೇಟೆವರೆಗೆ ಮೆರವಣಿಗೆ ಮೂಲಕ ಫಾಝಿಲ್ ಮೃತ ದೇಹ ತರಲಾಗಿದ್ದು, ಫಾಝಿಲ್ ಸ್ವಗೃಹದಲ್ಲಿ ಅಂತಿ ದರ್ಶನಕ್ಕೆ ಸಾರ್ವಜನಿಕರು ಜಮಾಯಿಸಿದ್ದಾರೆ. ಪುರುಷರಿಗೆ ಅಂತಿಮ ದರ್ಶನಕ್ಕೆ ಮಂಗಳಪೇಟೆ ಮೊಹಿದ್ದೀನ್ ಜುಮಾ ಮಸೀದಿಯಲ್ಲಿ ಅವಕಾಶ ಮಾಡಲಾಗಿದೆ. ಮಸೀದಿಯಲ್ಲಿ ಫಾಜಿಲ್​ ಪಾರ್ಥಿವ ಶರೀರಕ್ಕೆ ಪ್ರಾರ್ಥನೆ ಸಲ್ಲಿಕೆ ಬಳಿಕ ಮಸೀದಿಯ ಕಬರ್ ಸ್ಥಾನದಲ್ಲಿ ದಫನ್​ ಕಾರ್ಯ ನಡೆಯಲಿದೆ. ಫಾಝೀಲ್ ಅಂತೀಮ‌ ದರ್ಶನದಲ್ಲಿ ಐವನ್ ಡಿಸೋಜ, ಮೋಹಿದ್ದೀನ್ ಮಾಜಿ ಶಾಸಕರು ಭಾಗಿಯಾಗಿದ್ದರು.

ನಿಷೇಧಾಜ್ಞೆ ಜಾರಿ

ನಿಷೇಧಾಜ್ಞೆ ಇರುವ ಸೂಕ್ಷ್ಮ ಪ್ರದೇಶಗಳ ಮಸೀದಿಗಳಲ್ಲಿ ಇಂದು ಪ್ರಾರ್ಥನೆ ಬೇಡ ಎಂದು ಮುಸ್ಲಿಮರಿಗೆ ಪೊಲೀಸರು ಮನವಿ ಮಾಡುತ್ತಿದ್ದಾರೆ. ಮನೆಗಳಲ್ಲಿ ಅಥವಾ ನಿಷೇಧಾಜ್ಞೆ ಇಲ್ಲದ ಮಸೀದಿಗಳಲ್ಲಿ ಪ್ರಾರ್ಥನೆ ಮಾಡಿ ಪ್ರಾರ್ಥನೆ ಮಾಡುವಂತೆ ಪೊಲೀಸರು ವಿನಂತಿಸಿದ್ದಾರೆ.

ಇದನ್ನೂ ಓದಿ: ಮಂಗಳೂರಿನ ಸುರತ್ಕಲ್​​ನಲ್ಲಿ ಫಾಜಿಲ್​ ಹತ್ಯೆ ಪ್ರಕರಣ: ಸರ್ಕಾರದ ಮೇಲೆ ನಮಗೆ ನಂಬಿಕೆ ಇಲ್ಲ ಎಂದ ಮಾಜಿ ಸಚಿವ ಯು.ಟಿ.ಖಾದರ್

ವದಂತಿಗಳಿಗೆ ಕಿವಿಗೊಡಬೇಡಿ

ಮಂಗಳೂರು ಹೊರವಲಯದ ಸುರತ್ಕಲ್‌ನಲ್ಲಿ ಫಾಜಿಲ್ ಹತ್ಯೆ ಹಿನ್ನೆಲೆ ಘಟನಾ ಸ್ಥಳದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಫಾಜಿಲ್ ಹತ್ಯೆಗೆ ನಿಖರ ಕಾರಣ ಗೊತ್ತಿಲ್ಲ. ಕೊಲೆ ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಂಡಿದ್ದೇವೆ. ಕೊಲೆ ಸಂಬಂಧ ಯಾರೂ ವದಂತಿಗಳಿಗೆ ಕಿವಿಗೊಡಬಾರದು. ಶಾಂತಿ ಕದಡುವ ಪ್ರಯತ್ನ ನಡೆಸಬಾರದು ಎಂದು ಸಾರ್ವಜನಿಕರಿಗೆ ತಿಳಿಹೇಳಿದರು.

Published On - 10:16 am, Fri, 29 July 22

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ