ಸುರತ್ಕಲ್ ಟೋಲ್ ಗೇಟ್ ಕಿತ್ತೆಸೆಯುವ ಕಾರ್ಯಾಚರಣೆ ಬೇಡ: ನಳಿನ್ ಕುಮಾರ್ ಕಟೀಲ್ ರೆಡ್ ಸಿಗ್ನಲ್​​

| Updated By: ಸಾಧು ಶ್ರೀನಾಥ್​

Updated on: Oct 17, 2022 | 12:06 PM

ಹೋರಾಟಗಾರರಿಗೆ ‌ನೋಟಿಸ್ ಕೊಟ್ಟ ಬಗ್ಗೆ ಮಾಹಿತಿ ಇರಲಿಲ್ಲ. ನಾನು ‌ಕಮಿಷನರ್ ಗೆ ಹೇಳಿದ್ದೇನೆ, ಹೋರಾಟ ಸಹಜ, ಯಾವುದೇ ನೋಟಿಸ್ ‌ಮಾಡಬೇಡಿ ಎಂದಿದ್ದೇನೆ. ಈ ಮಧ್ಯೆ, 20 ದಿನಗಳ ಕಾಲಾವಕಾಶ ಕೊಡಿ ಎಂದು ಹೋರಾಟಗಾರರಲ್ಲಿ ಮನವಿ ಮಾಡಿದ್ದೇನೆ -ಲೋಕಸಭಾ ಸಂಸದ ‌ನಳಿನ್ ಕುಮಾರ್ ಕಟೀಲ್

ಸುರತ್ಕಲ್ ಟೋಲ್ ಗೇಟ್ ಕಿತ್ತೆಸೆಯುವ ಕಾರ್ಯಾಚರಣೆ ಬೇಡ: ನಳಿನ್ ಕುಮಾರ್ ಕಟೀಲ್ ರೆಡ್ ಸಿಗ್ನಲ್​​
ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್​ ಕಟೀಲ್
Follow us on

ಮಂಗಳೂರು: ಮಂಗಳೂರಿನ ಸುರತ್ಕಲ್ ಟೋಲ್ ಗೇಟ್ (Surathkal Gate) ಕಿತ್ತೆಸೆಯಲು ನಾಳೆ ‘ನೇರ ಕಾರ್ಯಾಚರಣೆ’ಗೆ ಕರೆ ನೀಡಲಾಗಿದೆ. ಈ ಮಧ್ಯೆ ಹೋರಾಟ ಕೈ ಬಿಡಿ ಅಂತ ಈಗಾಗಲೇ ವಿನಂತಿ ಮಾಡಿರುವುದಾಗಿ ದಕ್ಷಿಣ ಕನ್ನಡ (Dakshina Kannada) ಲೋಕಸಭಾ ಸಂಸದ ‌ನಳಿನ್ ಕುಮಾರ್ ಕಟೀಲ್ (nalinkumar kateel) ಹೇಳಿದ್ದಾರೆ. ಹೋರಾಟವನ್ನ (Protest) ಶಾಂತಿಯುತವಾಗಿ ‌ಮಾಡಲು ನನ್ನ ಅಭ್ಯಂತರ ಇಲ್ಲ. ಕಾನೂನು ಕೈಗೆತ್ತಿಕೊಂಡರೆ ಮುಂದಕ್ಕೆ ಆಗುವ ಅನಾಹುತಕ್ಕೆ ‌ಅವರೇ ಹೊಣೆಯಾಗುತ್ತಾರೆ. ನಾನು ಟೋಲ್ ಗೇಟ್ ತೆಗೆಯಲು ಕಠಿಬದ್ದನಾಗಿದ್ದೇನೆ, ತೆಗೆದೇ ತೆಗೆಸ್ತೀನಿ. ಆದರೆ ಕಾನೂನು ಸಮಸ್ಯೆ ಕಾರಣ ಟೋಲ್ ಗೇಟ್ ತೆರವು ಕಷ್ಟವಾಗಿದೆ. ಹೀಗಾಗಿ 20 ದಿನಗಳ ಕಾಲ ಹೋರಾಟ ಮುಂದೂಡಿ ಅಂತ ವಿನಂತಿ ಮಾಡ್ತೇನೆ ಎಂದು ಹೋರಾಟಗಾರರಲ್ಲಿ ಮನವಿ ಮಾಡಿದ್ದಾರೆ.

ಹೋರಾಟ ಕೈ ಬಿಡಿ ಅಂತ ಈಗಾಗಲೇ ವಿನಂತಿ ಮಾಡಿದ್ದೇನೆ:

ಹೋರಾಟಗಾರರಿಗೆ ‌ನೋಟಿಸ್ ಕೊಟ್ಟ ಬಗ್ಗೆ ಮಾಹಿತಿ ಇರಲಿಲ್ಲ. ನಾನು ‌ಕಮಿಷನರ್ ಗೆ ಹೇಳಿದ್ದೇನೆ, ಹೋರಾಟ ಸಹಜ, ಯಾವುದೇ ನೋಟಿಸ್ ‌ಮಾಡಬೇಡಿ. ಶಾಂತಿಯುತ ಹೋರಾಟಕ್ಕೆ ‌ನನ್ನ ವಿರೋಧ ‌ಇಲ್ಲ. ಆದರೆ ಕಾನೂನು ಕೈಗೆತ್ತಿಕೊಂಡರೆ ಸರ್ಕಾರ ತನ್ನದೇ ಆದ ನಿಯಮದಡಿ‌ ಕ್ರಮ ಕೈಗೊಳ್ಳುತ್ತದೆ. ಹೆದ್ದಾರಿ ಪ್ರಾಧಿಕಾರ 20 ದಿನ ಸಮಯ ಕೇಳಿದೆ, ನಾವು ಸಮಯ ಕೊಡುವ. ನಾನು ಹೋರಾಟಗಾರರ ಜೊತೆ ಮಾತನಾಡಿದ್ರೆ ರಾಜಕೀಯ ಬರುತ್ತೆ. ಹಾಗಾಗಿ ಡಿಸಿ ಸೇರಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿ ಅವರ ಜೊತೆ ಮಾತನಾಡಿಸಿದ್ದೇನೆ. ಈಗ ಮತ್ತೆ ವಿನಂತಿ ‌ಮಾಡ್ತೇನೆ, 20 ದಿನಗಳ ಕಾಲಾವಕಾಶ ಕೊಡಿ ಎಂದು ಹೋರಾಟಗಾರರಲ್ಲಿ ಮನವಿ ಮಾಡಿದ್ದಾರೆ.

Also Read:
KSHDCL: ಬೇಳೂರು ರಾಘವೇಂದ್ರ ಶೆಟ್ಟಿ ವಿರುದ್ಧ ಎಫ್ಐಆರ್​ -ಡಿಐಎನ್ ಅನರ್ಹತೆ ದೂರು, 1 ವರ್ಷ 8 ತಿಂಗಳು ಅಧಿಕಾರ ಅನುಭವಿಸಿದ ಆರೋಪ

Published On - 12:03 pm, Mon, 17 October 22