AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂಗಳ ತೆರಿಗೆ ಹಿಂದೂಗಳ ಹಕ್ಕು: ಧ್ವನಿ ಎತ್ತಿದ ಬಿಜೆಪಿ ಶಾಸಕ ಹರೀಶ್ ಪೂಂಜಾ

ತೆರಿಗೆ ಹಂಚಿಕೆಯಲ್ಲಿ ತಾರತಮ್ಯವೆಂಬ ಕಾಂಗ್ರೆಸ್​ ಆರೋಪ ವಿಚಾರವಾಗಿ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಕಿಡಿಕಾರಿದ್ದಾರೆ. ಈ ಕುರಿತಾಗಿ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿರುವ ಅವರು, ಹಿಂದೂಗಳ ತೆರಿಗೆ ಹಿಂದೂಗಳ ಹಕ್ಕು ಎಂದು ಹೇಳಿದ್ದಾರೆ. ದೇಶದಲ್ಲಿರುವ ತೆರಿಗೆ ಸಂಗ್ರಹದಲ್ಲಿ ಹಿಂದೂಗಳ ಪಾಲು ಎಷ್ಟೆಂದು ಪ್ರಶ್ನೆ ಮಾಡಿದ್ದಾರೆ.

ಹಿಂದೂಗಳ ತೆರಿಗೆ ಹಿಂದೂಗಳ ಹಕ್ಕು: ಧ್ವನಿ ಎತ್ತಿದ ಬಿಜೆಪಿ ಶಾಸಕ ಹರೀಶ್ ಪೂಂಜಾ
ಬಿಜೆಪಿ ಶಾಸಕ ಹರೀಶ್ ಪೂಂಜಾ
ಅಶೋಕ್​ ಪೂಜಾರಿ, ಮಂಗಳೂರು
| Updated By: ಗಂಗಾಧರ​ ಬ. ಸಾಬೋಜಿ|

Updated on: Feb 08, 2024 | 9:15 PM

Share

ಮಂಗಳೂರು, ಫೆಬ್ರವರಿ 8: ಕೇಂದ್ರ ಸರ್ಕಾರ ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳಿಗೆ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಮಾಡಿತ್ತಿದೆ ಅಂತಾ ಕಾಂಗ್ರೆಸ್ ಆರೋಪಿಸಿದೆ. ಇದು ಕಾಂಗ್ರೆಸ್​ ಮತ್ತು ಬಿಜೆಪಿ ಮಧ್ಯೆ ತಿಕ್ಕಾಟಕ್ಕೂ ಕಾರಣವಾಗಿದೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ (Harish Poonja) ಹಿಂದೂಗಳ ತೆರಿಗೆ ಹಿಂದೂಗಳ ಹಕ್ಕು ಎಂದು ತನ್ನ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್ ಹಾಕಿದ್ದಾರೆ. “ಈ ಆರ್ಥಿಕ ವರ್ಷದಿಂದ ಹಿಂದೂಗಳು ಕಟ್ಟಿರುವ ತೆರಿಗೆ ಹಣ ಹಿಂದೂಗಳ ಅಭಿವೃದ್ಧಿಗೆ ಮಾತ್ರ ಉಪಯೋಗ ಆಗಬೇಕು”. “ಹಿಂದೂಗಳು ಕಟ್ಟಿದ ತೆರಿಗೆ ಹಣ ಬೇರೆ ಧರ್ಮಗಳ ಜನರಿಗೆ ಸೇರುವುದು ಹಿಂದುಗಳಿಗೆ ಆಗುವ ಅನ್ಯಾಯ”. ದೇಶದಲ್ಲಿರುವ ತೆರಿಗೆ ಸಂಗ್ರಹದಲ್ಲಿ ಹಿಂದೂಗಳ ಪಾಲು ಎಷ್ಟು. ಇದರಲ್ಲಿ ಹಿಂದೂಗಳ ಅಭಿವೃದ್ಧಿಗೆ ಉಪಯೋಗವಾಗುತ್ತಿರುವುದು ಎಷ್ಟು ಎಂದು ಪ್ರಶ್ನಿಸಿದ್ದಾರೆ.

ಹಿಂದೂಗಳ ತೆರಿಗೆ ಹಿಂದೂಗಳಿಗೆ ಸಲ್ಲಬೇಕೆಂದು ಶಾಸಕ ಹರೀಶ್ ಪೂಂಜಾ ಒತ್ತಾಯಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧದ ಚರ್ಚೆ ಶುರುವಾಗಿದೆ.

ರಾಜ್ಯಕ್ಕೆ ಬರುವ ತೆರಿಗೆ ಹಣ ಕಡಿಮೆ ಆಗಿದೆ: ಸಿಎಂ ಸಿದ್ದರಾಮಯ್ಯ 

ತೆರಿಗೆ ಸಂಗ್ರಹದಲ್ಲಿ ಮಹಾರಾಷ್ಟ್ರ ಬಿಟ್ಟರೆ ಕರ್ನಾಟಕವೇ ಎರಡನೇ ಸ್ಥಾನದಲ್ಲಿದೆ. ತೆರಿಗೆ ರೂಪದಲ್ಲಿ ಕೇಂದ್ರಕ್ಕೆ ಹಣ ಹೋಗುತ್ತೆ. ಆದರೆ ರಾಜ್ಯಕ್ಕೆ ಬರುವ ತೆರಿಗೆಯಲ್ಲಿ ಶೇಕಡಾ 1.07ರಷ್ಟು ಕಡಿಮೆ ಆಗಿದೆ. ಅಂದರೆ ರಾಜ್ಯಕ್ಕೆ ಬರುವ ತೆರಿಗೆ ಹಣದಲ್ಲಿ ಸುಮಾರು 62 ಸಾವಿರದ 98 ಕೋಟಿ ರೂ. ಹಣ ಕಡಿಮೆ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ಇತ್ತೀಚೆಗೆ ಆರೋಪಿಸಿದ್ದರು.

ಶಾಸಕ ಹರೀಶ್ ಪೂಂಜಾ ಪೋಸ್ಟ್ 

14 ನೇ ಹಣಕಾಸು ಆಯೋಗದಿಂದ 15 ನೇ ಹಣಕಾಸು ಆಯೋಗಕ್ಕೆ ಬರುವಾಗ ತೆರಿಗೆ ಕಡಿಮೆ ಆಗಿದ್ದನ್ನ ಗಮನಿಸಿ, ಹಣಕಾಸು ಆಯೋಗವೇ 5,495 ಕೋಟಿ ರೂ. ವಿಶೇಷ ಅನುದಾನಕ್ಕೆ ಶಿಫಾರಸ್ಸು ಮಾಡಿತ್ತು. ಆದರೆ ನಮ್ಮ ರಾಜ್ಯದಿಂದಲೇ ಆಯ್ಕೆ ಆಗಿ ಹೋಗಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಈ ಅನುದಾನಕ್ಕೆ ತಡೆ ಹಾಕಿದ್ದರು ಎಂದು ಕಿಡಿಕಾರಿದ್ದರು.

ಇದನ್ನೂ ಓದಿ: ನಮ್ಮ ತೆರಿಗೆ ನಮ್ಮ ಹಕ್ಕು: ಕೇಂದ್ರ ಸರ್ಕಾರ ವಿರುದ್ಧ ಹೋರಾಟಕ್ಕೆ ಸಜ್ಜಾದ ಕರ್ನಾಟಕ ರಕ್ಷಣಾ ವೇದಿಕೆ

ಇನ್ನು ಜಿಎಸ್​ಟಿ ಜಾರಿಗೆ ತರುವುದನ್ನು ನಾವು ವಿರೋಧಿಸಿದ್ದೇವು. ಆದರೂ ಜಾರಿಗೆ ತಂದರು. ಜಿಎಸ್​ಟಿಗಿಂತ ಮುಂಚೆ ನಮ್ಮ ತೆರಿಗೆ ಸಂಗ್ರಹ ಶೇಕಡಾ 15 ರಷ್ಟಿತ್ತು. ತೆರಿಗೆ ನಷ್ಟವಾದರೆ ಕೇಂದ್ರ ಸರ್ಕಾರ ಪರಿಹಾರ ಕೊಡೋದಾಗಿ ಹೇಳಿತ್ತು. ಆದರೆ ಪರಿಹಾರ ಕೊಡೋದನ್ನೆ ನಿಲ್ಲಿಸಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯ ಬಿಜೆಪಿ ಕಚೇರಿ ಎದುರು ಯುವ ಕಾಂಗ್ರೆಸ್ ಪ್ರತಿಭಟನೆ: ಧರಣಿನಿರತ ಕಾರ್ಯಕರ್ತರನ್ನ ವಶಕ್ಕೆ ಪಡೆದ ಪೊಲೀಸ್​​​

ಡಿಸಿಎಂ ಡಿಕೆ ಶಿವಕುಮಾರ್​ ಪ್ರತಿಕ್ರಿಯಿಸಿದ್ದು, ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ. ಇಡೀ ಸರ್ಕಾರ ದೆಹಲಿಗೆ ಬರುವಂತೆ ಆಹ್ವಾನ ಕೊಡುತ್ತೇವೆ ಅಂತ ಗುಡುಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.