ಕೇರಳ ಕರಾವಳಿಯಲ್ಲಿ ತಳ್ಳುಗಾಡಿ, ಗೂಡಂಗಡಿಗಳಿಗೆ ಉಗ್ರರ ಲಿಂಕ್; ಮಂಗಳೂರು ಗಡಿಯಲ್ಲೂ ಹದ್ದಿನಕಣ್ಣಿಡಲು ಕೇರಳ ಪೊಲೀಸರಿಗೆ ಗುಪ್ತಚರ ಇಲಾಖೆ ಸೂಚನೆ
ಕೇರಳದ ಕೋವಲಂ-ಮಂಗಳೂರು ನಡುವೆ ದೊಡ್ಡ ದೊಡ್ಡ ಐಷಾರಾಮಿ ವಾಹನಗಳು ಓಡಾಡುತ್ತಿವೆ. ಕೇರಳದ ವಿವಿಧ ಜಿಲ್ಲೆಗಳಿಗೆ ಶಸ್ತ್ರಾಸ್ತ್ರ, ಹಣ ಸಾಗಿಸಲು ವಾಹನ ಬಳಕೆಯಾಗುತ್ತಿದೆಯಾ ಎಂಬ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಕೇರಳ ಕರಾವಳಿ-ಮಂಗಳೂರು ಗಡಿ ಭಾಗದಲ್ಲಿ ಎಚ್ಚರವಿರಲು ಗುಪ್ತಚರ ಇಲಾಖೆ ಪೊಲೀಸರಿಗೆ ಸೂಚಿಸಿದೆ.
ಮಂಗಳೂರು: ಬೆಂಗಳೂರಿನಲ್ಲಿ ಮೋಸ್ಟ್ ಡೇಂಜರಸ್ ಉಗ್ರ ತಾಲಿಬಾನ್ ಹುಸೇನ್ನನ್ನು ಪೊಲೀಸರು ಬಂಧಿಸಿದ್ದಾರೆ. ಈಗ ಇದೇ ಬೆನ್ನಲ್ಲೆ ಮತ್ತೊಂದು ಲಿಂಕ್ ಬಯಲಾಗಿದೆ. ಕೇರಳ ಕರಾವಳಿಯಲ್ಲಿ ತಳ್ಳುಗಾಡಿ, ಗೂಡಂಗಡಿಗಳಿಗೆ ಉಗ್ರರ ಲಿಂಕ್ ಇದೆ ಎಂದು ಕೇರಳ ಪೊಲೀಸರಿಗೆ ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ಸಂದೇಶ ಕೊಟ್ಟಿದೆ. ಮಂಗಳೂರು ಗಡಿಯಲ್ಲೂ ಹದ್ದಿನಕಣ್ಣಿಡಲು ಗುಪ್ತಚರ ಇಲಾಖೆ ಸೂಚಿಸಿದೆ.
ಕೇರಳದ ಕೋವಲಂ-ಮಂಗಳೂರು ನಡುವೆ ದೊಡ್ಡ ದೊಡ್ಡ ಐಷಾರಾಮಿ ವಾಹನಗಳು ಓಡಾಡುತ್ತಿವೆ. ಕೇರಳದ ವಿವಿಧ ಜಿಲ್ಲೆಗಳಿಗೆ ಶಸ್ತ್ರಾಸ್ತ್ರ, ಹಣ ಸಾಗಿಸಲು ವಾಹನ ಬಳಕೆಯಾಗುತ್ತಿದೆಯಾ ಎಂಬ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಕೇರಳ ಕರಾವಳಿ-ಮಂಗಳೂರು ಗಡಿ ಭಾಗದಲ್ಲಿ ಎಚ್ಚರವಿರಲು ಗುಪ್ತಚರ ಇಲಾಖೆ ಪೊಲೀಸರಿಗೆ ಸೂಚಿಸಿದೆ. ಕಪ್ಪು ಹಣವನ್ನು ಬಿಳಿ ಮಾಡಲು ಹೆದ್ದಾರಿ ಗೂಡಂಗಡಿ ಬಳಸುವ ಶಂಕೆ ಇದೆ. ಕೆಲ ಗೂಡಂಗಡಿಗಳಿಗೆ ಭಯೋತ್ಪಾದಕ ಸಂಘಟನೆಗಳ ನಂಟಿನ ಬಗ್ಗೆಯೂ ಅನುಮಾನ ವ್ಯಕ್ತವಾಗಿದೆ. ಗೂಡಂಗಡಿಗಳ ಜೊತೆ ಐಷಾರಾಮಿ ವಾಹನಗಳ ಅಕ್ರಮ ವ್ಯವಹಾರ? ನಡೆಯುತ್ತಿರುವ ಬಗ್ಗೆ ಅನುಮಾನ ಬಂದಿದ್ದು ಕೇರಳ ಕರಾವಳಿ, ಮಂಗಳೂರು ಗಡಿಗಳಲ್ಲಿ ಹದ್ದಿನ ಕಣ್ಣಿಡಲು ಸೂಚನೆ ನೀಡಿದೆ. ಕೇರಳ ಪೊಲೀಸ್ ಇಲಾಖೆಗೆ ಕೇಂದ್ರ ಗುಪ್ತಚರ ಇಲಾಖೆ ಅಲರ್ಟ್ ಆಗಿರುವಂತೆ ತಿಳಿಸಿದೆ. ಇದನ್ನೂ ಓದಿ: ಪಶ್ಚಿಮ ಬಂಗಾಳದ ಅಸನ್ಸೋಲ್ನಲ್ಲಿ ಹಳಿ ತಪ್ಪಿದ 40 ಪ್ರಯಾಣಿಕರಿದ್ದ ಪ್ಯಾಸೆಂಜರ್ ರೈಲು
ಶಿವಮೊಗ್ಗ ಜಿಲ್ಲೆಯಲ್ಲಿ ನಿಷೇಧಿತ ಸ್ಯಾಟಲೈಟ್ ಫೋನ್ ಸಿಗ್ನಲ್ ಪತ್ತೆ ಶಂಕೆ ಜಿಲ್ಲೆಯಲ್ಲಿ ನಿಷೇಧಿತ ಸ್ಯಾಟಲೈಟ್ ಫೋನ್ (Satellite Phone) ಬಳಕೆಯಾಗಿರುವ ಶಂಕೆ ವ್ಯಕ್ತವಾಗಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಅವರ ತವರು ಜಿಲ್ಲೆಯ ಮೇಲೆ ಉಗ್ರರ ಕರಿನೆರಳು ಬಿದ್ದಿರುವ ಬಗ್ಗೆ ಮಾತುಗಳು ಕೇಳಿ ಬರುತ್ತಿವೆ. ಸಾಗರ (ಸಿಗಂದೂರು) ಮತ್ತು ಶಿಕಾರಿಪುರ ಬಳಿ ಸ್ಯಾಟಲೈಟ್ ಫೋನ್ ಬಳಕೆಯಾಗಿರಬಹುದು ಎಂದು ಐಎಸ್ಡಿ ಅಧಿಕಾರಿಗಳು ಹೇಳಿದ್ದಾರೆ. ರಾಜ್ಯದ ಆಂತರಿಕ ಭದ್ರತಾ ವಿಭಾಗದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದರು. ಸ್ಯಾಟಲೈಟ್ ಫೋನ್ ಬಳಕೆಗೆ ಈ ಎರಡು ಪ್ರದೇಶಗಳನ್ನು ಆಯ್ಕೆ ಮಾಡಿದ್ದೇಕೆ ಎಂಬ ಬಗ್ಗೆ ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
ಈ ಮೊದಲು ಕರಾವಳಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಕೆಲ ಅರಣ್ಯ ಪ್ರದೇಶಗಳಲ್ಲಿ ಸ್ಯಾಟಲೈಟ್ ಫೋನ್ ಬಳಕೆಯಾಗಿತ್ತು. ಈ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು. ಪ್ರವಾಸಿಗರ ಸೋಗಿನಲ್ಲಿ ಬಂದಿರುವ ಅನಿವಾಸಿ ಭಾರತೀಯರು ನಿಷೇಧಿತ ಸ್ಯಾಟಲೈಟ್ ಫೋನ್ ಬಳಕೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಕೇಂದ್ರ ತನಿಖಾ ದಳ ಮತ್ತು ರಾಜ್ಯ ಪೊಲೀಸ್ ಇಲಾಖೆಯಿಂದ ಜಂಟಿ ತನಿಖೆ ಆರಂಭವಾಗಿದೆ. ಕಳೆದ 15 ದಿನಗಳ ಹಿಂದೆ ಈ ಪ್ರದೇಶದಲ್ಲಿ ಸ್ಯಾಟಲೈಟ್ ಪೋನ್ ಬಳಕೆಯಾಗಿದೆ ಎಂದು ಮೂಲಗಳು ಹೇಳಿವೆ.
Published On - 8:28 am, Wed, 8 June 22