ಮಂಗಳೂರು: ನ್ಯಾಯಾಂಗ ಬಂಧನದಿಂದ ಎಸ್ಕೇಪ್ ಆಗಿದ್ದ ಆರೋಪಿ 17 ವರ್ಷದ ಬಳಿಕ ಸೆರೆ

ಆತ ಕುಖ್ಯಾತ ಅಂತರ್‌ ಜಿಲ್ಲಾ ಮನೆ ಕಳ್ಳ. ಕಳ್ಳತನದ ಜೊತೆ ಕೊಲೆ ಪ್ರಕರಣವೊಂದರಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಆತ ನ್ಯಾಯಾಲಯಕ್ಕೆ ಹಾಜರುಪಡಿಸುವಾಗಲೇ ಎಸ್ಕೇಪ್ ಆಗಿದ್ದ. ಆದ್ರೆ, ಇದೀಗ ಹದಿನೇಳು ವರ್ಷದ ಬಳಿಕ ಮನೆ ಕಳ್ಳತನ ಮಾಡಲು ಬಂದು ಮತ್ತೆ ಪೊಲೀಸರ ಅತಿಥಿಯಾಗಿದ್ದಾನೆ.

ಮಂಗಳೂರು: ನ್ಯಾಯಾಂಗ ಬಂಧನದಿಂದ ಎಸ್ಕೇಪ್ ಆಗಿದ್ದ ಆರೋಪಿ 17 ವರ್ಷದ ಬಳಿಕ ಸೆರೆ
ಖತರ್ನಾಕ್​ ಕಳ್ಳನನ್ನ ಬಂಧಿಸಿದ ಪೊಲೀಸರು
Follow us
ಕಿರಣ್ ಹನುಮಂತ್​ ಮಾದಾರ್
|

Updated on: Apr 19, 2023 | 7:40 AM

ಮಂಗಳೂರು: ಕಾಲು ಕುಂಟುತ್ತಾ ಪೊಲೀಸ್ ಭದ್ರತೆಯಲ್ಲಿ ಹೋಗುತ್ತಿರುವ ಈತ ಸಾಧಾರಣ ವ್ಯಕ್ತಿಯೇನಲ್ಲ. ಊಸುರವಳ್ಳಿ ತರ ಆಡುವ ಈತ ಖತರ್ನಾಕ್ ಅಂತರ್‌ ಜಿಲ್ಲಾ ಮನೆ ಕಳ್ಳತನದ ಆರೋಪಿ ಸಿದ್ದರಾಜು ಅಲಿಯಾಸ್ ಮೂರ್ತಿ. ಮೂಲತಃ ಮೈಸೂರು(Mysore) ನಗರದ ಮೇಟಗಳ್ಳಿ ಮೂಲದವನಾದ ಇವನು ಬೆಂಗಳೂರಿ(Bengaluru)ನಲ್ಲಿ ವಾಸ ಮಾಡುತ್ತಿದ್ದ. ದುಡಿದು ತಿನ್ನುವ ಬದಲು ಮನೆ ಕಳ್ಳತನ ಮಾಡಿ ಖತರ್ನಾಕ್ ಐಡಿಯಾಗಳಿಂದ ತಲೆಮರೆಸಿಕೊಂಡು ಆರಾಮದಾಯಕ ಜೀವನ ಮಾಡುತ್ತಿದ್ದ. ಹೀಗೆ ಮಂಗಳೂರಿನಲ್ಲಿ ಮನೆ ಕಳ್ಳತನ ಮಾಡಲು ಬಂದು ಪೊಲೀಸರ ಕೈಗೆ ಅತಿಥಿಯಾಗಿದ್ದಾನೆ.

ಹೌದು ಕಾವೂರಿನಲ್ಲಿ ನಡೆದ ಮನೆಕಳ್ಳತನ ಪ್ರಕರಣದ ಬೆನ್ನತ್ತಿದ್ದ ಮಂಗಳೂರು ಸಿಸಿಬಿ ಪೊಲೀಸರು ಬೆಂಗಳೂರು ಹೊರವಲಯದಲ್ಲಿ ಈತನನ್ನು ಅರೆಸ್ಟ್ ಮಾಡಿದ್ದಾರೆ. ವಿಚಾರಣೆ ಸಂದರ್ಭದಲ್ಲಿ ಕೇವಲ ಮಂಗಳೂರು ಮಾತ್ರವಲ್ಲದೇ ಉಡುಪಿ ಜಿಲ್ಲೆಯ ಮಣಿಪಾಲ, ಕಾರ್ಕಳ, ಆಗುಂಬೆ, ತೀರ್ಥಹಳ್ಳಿ, ಮಾಲೂರು, ಕಾರ್ಗಲ್ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಹರಿಹರ ಠಾಣಾ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಮಾಡಿ ಚಿನ್ನಾಭರಣ ಲೂಟಿ ಮಾಡಿದ್ದ ಎಂದು ಗೊತ್ತಾಗಿದೆ. ಸದ್ಯ ಆರೋಪಿಯಿಂದ ಹದಿನೈದು ಲಕ್ಷ ಮೌಲ್ಯದ 270 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ:Bengaluru: ಮೈದಾನದಲ್ಲಿ ಕುಳಿತುಕೊಂಡೆ ಬೆಟ್ಟಿಂಗ್ ದಂಧೆ; ಕೇವಲ 10 ಸೆಕೆಂಡ್ ಅಂತರದಲ್ಲಿ ಸಾವಿರ ಸಾವಿರ ಹಣ, ಇದೀಗ ಪೊಲೀಸ್​ ಬಲೆಗೆ

2005ರಲ್ಲಿ ಮೈಸೂರಿನಲ್ಲಿ ನಡೆದ ಮಹಿಳೆಯೊಬ್ಬರ ಕೊಲೆ ಪ್ರಕರಣದ ಆರೋಪಿ

ಈ ಖತರ್ನಾಕ್ ಖದೀಮ 2005ರಲ್ಲಿ ಮೈಸೂರಿನಲ್ಲಿ ನಡೆದ ಮಹಿಳೆಯೊಬ್ಬರ ಕೊಲೆ ಪ್ರಕರಣದ ಆರೋಪಿಯಾಗಿದ್ದ. ಈ ಪ್ರಕರಣದಲ್ಲಿ ಬಂಧನಕ್ಕೊಳಕ್ಕಾಗಿ ನ್ಯಾಯಾಂಗ ಬಂಧನದಲ್ಲಿದ್ದಾಗ 2006ನೇ ಇಸವಿಯಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸುವಾಗ ಮಂಡ್ಯ ಜಿಲ್ಲೆಯ ಮದ್ದೂರು ಎಂಬಲ್ಲಿ ಪೊಲೀಸರ ಕಸ್ಟಡಿಯಿಂದ ತಪ್ಪಿಸಿಕೊಂಡು ಎಸ್ಕೇಪ್ ಆಗಿದ್ದ. ಆ ಬಳಿಕದಿಂದ ಈತನ ಪತ್ತೆಗಾಗಿ ಪೊಲೀಸರು ಹುಡುಕಾಡಿದ್ರೂ ಸಿಕ್ಕರಲಿಲ್ಲ. ಆ ಬಳಿಕ ಉಡುಪಿಯ ಕೋಟ ಹಾಗೂ ಹಾಸನದ ಚನ್ನರಾಯಪಟ್ಟಣದಲ್ಲಿ ಮನೆ ಕಳ್ಳತನ ಪ್ರಕರಣದಲ್ಲಿ ಅರೆಸ್ಟ್ ಆದಾಗ ಬೇರೆ ಹೆಸರು, ವಿಳಾಸ ಹೇಳಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ.

ಆದ್ರೆ ಈ ಬಾರಿ ಮಂಗಳೂರಿನಲ್ಲಿ ನಡೆದ ಮನೆ ಕಳ್ಳತನ ಪ್ರಕರಣದಲ್ಲಿ ಖಾಕಿ ಕೈಗೆ ಸಿಕ್ಕಿಬಿದ್ದಾಗ ತನ್ನ ಜಾತಕವನ್ನೆಲ್ಲ ಕಕ್ಕಿದ್ದಾನೆ. ಈ ಮೂಲಕ 17 ವರ್ಷದಿಂದ ಎಸ್ಕೇಪ್ ಆಗಿದ್ದ ಅಸಾಮಿ ಪೊಲೀಸರ ಕೈಯಲ್ಲಿ ಲಾಕ್ ಆಗಿದ್ದಾನೆ. ಈತನ ಮೇಲೆ ಮನೆಕಳ್ಳತನ, ಕೊಲೆ ಪ್ರಕರಣ ಮಾತ್ರವಲ್ಲದೆ ಅತ್ಯಚಾರ, ಕೊಲೆ ಯತ್ನ ಸೇರಿದಂತೆ ಒಟ್ಟು 30 ಪ್ರಕರಣಗಳು ದಾಖಲಾಗಿದೆ. ಈತನ ಮೇಲೆ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟ್ ಸಹ ತೆರೆಯಲಾಗಿದೆ. ಒಟ್ಟಿನಲ್ಲಿ ಖತರ್ನಾಕ್ ಖದೀಮನನ್ನು ಮಂಗಳೂರು ಸಿಸಿಬಿ ಪೊಲೀಸರು ಹೆಡೆಮುರಿಕಟ್ಟಿದ್ದು, ಪೊಲೀಸ್​ ತಂಡಕ್ಕೆ ನಗರ ಪೊಲೀಸ್ ಕಮೀಷನರ್ ಹತ್ತು ಸಾವಿರ ನಗದು ಬಹುಮಾನ ಘೋಷಿಸಿ ಪ್ರಶಂಸಿದ್ದಾರೆ.

ವರದಿ: ಅಶೋಕ್ ಟಿವಿ9 ಮಂಗಳೂರು

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್