ಮಂಗಳೂರು: ಬೇರೊಬ್ಬಳಿಗೆ ತಾಳಿ ಕಟ್ಟುವಾಗ ಮಾಜಿ ಪ್ರೇಯಸಿ ಎಂಟ್ರಿ; ಮುಂದೆ ಕಲ್ಯಾಣ ಮಂಟಪದಲ್ಲಿ ಆಗಿದ್ದೇನು?

ತನ್ನನ್ನು ಬಿಟ್ಟು ಬೇರೊಬ್ಬಳೊಂದಿಗೆ ಮದುವೆಯಾಗುತ್ತಿರುವ ವಿಚಾರ ತಿಳಿದು ಕಲ್ಯಾಣ ಮಂಟಪಕ್ಕೆ ಪೊಲೀಸರೊಂದಿಗೆ ಬಂದು ಮಾಜಿ ಪ್ರೇಯಸಿ ಜಗಳವಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಬೀರಿ ಬಳಿ ನಡೆದಿದೆ. ಒಂದೂವರೆ ವರ್ಷದ ಹಿಂದೆ ಮೈಸೂರಿನ ಯುವತಿಗೆ ಶಾದಿ ಡಾಟ್ ಕಾಮ್ ಮೂಲಕ ಪರಿಚಯ ಮಾಡಿಕೊಂಡು ವಿವಾಹವಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ ಆರೋಪ ಕೇಳಿಬಂದಿದ್ದು, ಯುವತಿಯಿಂದ ದೂರು ದಾಖಲಾಗಿದೆ.

ಮಂಗಳೂರು: ಬೇರೊಬ್ಬಳಿಗೆ ತಾಳಿ ಕಟ್ಟುವಾಗ ಮಾಜಿ ಪ್ರೇಯಸಿ ಎಂಟ್ರಿ; ಮುಂದೆ ಕಲ್ಯಾಣ ಮಂಟಪದಲ್ಲಿ ಆಗಿದ್ದೇನು?
ಬೇರೊಬ್ಬಳಿಗೆ ತಾಳಿ ಕಟ್ಟುವಾಗ ಮಾಜಿ ಪ್ರೇಯಸಿ ಎಂಟ್ರಿ; ಮುಂದೆ ಕಲ್ಯಾಣ ಮಂಟಪದ ಮುಂಭಾಗ ಯುವತಿಯ ಹೈಡ್ರಾಮ
Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: Rakesh Nayak Manchi

Updated on:Jan 05, 2024 | 1:16 PM

ಮಂಗಳೂರು, ಜ.5: ತನ್ನಗೆ ಮೋಸ ಮಾಡಿ ಬೇರೊಬ್ಬಳೊಂದಿಗೆ ಮದುವೆಯಾಗುತ್ತಿದ್ದಾಗ ಕಲ್ಯಾಣ ಮಂಟಪಕ್ಕೆ ಪೊಲೀಸರೊಂದಿಗೆ ಎಂಟ್ರಿಕೊಟ್ಟ ಮಾಜಿ ಪ್ರೇಯಸಿ ಜಗಳವಾಡಿದ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆ ಉಳ್ಳಾಲ ತಾಲೂಕಿನ ಬೀರಿ ಬಳಿ ನಡೆದಿದೆ. ಕೇರಳ ಮೂಲದ ಅಕ್ಷಯ್ ಎಂಬಾತನ ಮದುವೆ ಮಂಗಳೂರು ಮೂಲದ ಯುವತಿ ಜೊತೆ ನಡೆಯುತ್ತಿದ್ದಾಗ ಮೈಸೂರು ಮೂಲದ ಮಾಜಿ ಪ್ರೇಯಸಿ ಕಲ್ಯಾಣ ಮಂಟಪಕ್ಕೆ ಎಂಟ್ರಿಕೊಟ್ಟು ಹೈಡ್ರಾಮ ನಡೆಸಿದ್ದಾಳೆ.

ಕೇರಳದ ಕೊಝಿಕ್ಕೋಡ್ ಮೂಲದ ಅಕ್ಷಯ್ ಒಂದೂವರೆ ವರ್ಷದ ಹಿಂದೆ ಮೈಸೂರಿನ ಯುವತಿಯನ್ನು ಶಾದಿ ಡಾಟ್ ಕಾಮ್ ಮೂಲಕ ಪರಿಚಯ ಮಾಡಿಕೊಂಡಿದ್ದನು. ನಂತರ ವಿವಾಹವಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ್ದಾನೆ. ನಂತರ ವರಸೆ ಬದಲಾಯಿಸಿದ್ದಾನೆ. ಡಿಸೆಂಬರ್ 26 ರಂದು ಅಕ್ಷಯ್ ವಿರುದ್ಧ ಕೇರಳದ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರದ ದೂರು ದಾಖಲಿಸಿದ್ದಾಳೆ.

ಇದನ್ನೂ ಓದಿ: ಪ್ರೀತಿಸಿ ಕಾರಲ್ಲಿ ಹಾರ ವಿನಿಮಯ ಮಾಡಿಕೊಂಡ ಬಳ್ಳಾರಿಯ ಯುವಕ-ಯುವತಿ ಕೇವಲ 12 ತಾಸುಗಳಲ್ಲಿ ಬೇರ್ಪಟ್ಟರು!

ಪ್ರಕರಣ ಸಂಬಂಧ ಅರೋಪಿ ಅಕ್ಷಯ್​ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯವು ವಜಾಗೊಳಿಸಿತ್ತು. ಈ ನಡುವೆ ಮಂಗಳೂರನ ಯುವತಿ ಜೊತೆ ಅಕ್ಷಯ್​ಗೆ ವಿವಾಹ ನಿಶ್ಚಯವಾಗಿದೆ. ಕರ್ನಾಟಕದ-ಕೇರಳ ಗಡಿಭಾಗ ಬೀರಿಯ ಖಾಸಗಿ ಹಾಲ್​ನಲ್ಲಿ ಮದುವೆ ನಡೆಯುತ್ತಿರುವ ವಿಚಾರ ತಿಳಿದು ಉಳ್ಳಾಲ ಪೊಲೀಸರೊಂದಿಗೆ ಆಗಮಿಸಿ ಹಾಲ್​ ಮುಂಭಾಗದಲ್ಲಿ ಹೈಡ್ರಾಮ ನಡೆಸಿದ್ದಾಳೆ.

ಯುವತಿಯನ್ನು ಕರೆದೊಯ್ದ ಪೊಲೀಸರು, ಮಂಗಳೂರು ಯುವತಿಗೆ ತಾಳಿ ಕಟ್ಟಿದ ಅಕ್ಷಯ್

ನಂತರ ಪೊಲೀಸರೇ ಆಕೆಯನ್ನು ಹಾಲ್ ಬಳಿಯಿಂದ ಕೇರಳದ ಮಂಜೇಶ್ವರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋದರು. ಆರೋಪಿಯನ್ನು ಅರೆಸ್ಟ್ ಮಾಡಿ ಅಂದರೆ ನನ್ನನ್ನೇ ಕರೆದುಕೊಂಡು ಹೋಗುತ್ತಿದ್ದಾರೆ ಎಂದು ಯುವತಿ ಆಕ್ರೋಶ ಹೊರಹಾಕಿದ್ದಾಳೆ. ನಂತರ ಅಕ್ಷಯ್ ಮಂಗಳೂರು ಯುವತಿಗೆ ತಾಳಿ ಕಟ್ಟಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:12 pm, Fri, 5 January 24

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?