ಕಾಂಗ್ರೆಸ್​ ಒಳಗೆ ಆಂತರಿಕ ಜಗಳ, 3 ತಂಡಗಳಿಂದ ಗಲಾಟೆ ಎಂದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

| Updated By: ಗಂಗಾಧರ​ ಬ. ಸಾಬೋಜಿ

Updated on: Oct 28, 2023 | 3:08 PM

ನಿನ್ನೆ ಗೃಹಸಚಿವ ಡಾ.ಪರಮೇಶ್ವರ್ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಡಿನ್ನರ್ ಮೀಟಿಂಗ್‌ ವಿಚಾರವಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​, ಕಾಂಗ್ರೆಸ್​ ಒಳಗೆ ಆಂತರಿಕ ಜಗಳವಾಗುತ್ತಿದೆ. ಕಾಂಗ್ರೆಸ್​ನ ಮೂರು ತಂಡಗಳು ಗಲಾಟೆ ಮಾಡುತ್ತಿವೆ. ಇದರ ಹಿನ್ನೆಲೆಯಲ್ಲಿ ನಿನ್ನೆ ಡಿನ್ನರ್ ಮೀಟಿಂಗ್​ ನಡೆದಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್​ ಒಳಗೆ ಆಂತರಿಕ ಜಗಳ, 3 ತಂಡಗಳಿಂದ ಗಲಾಟೆ ಎಂದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್
ನಳಿನ್ ಕುಮಾರ್ ಕಟೀಲ್
Follow us on

ಮಂಗಳೂರು, ಅಕ್ಟೋಬರ್​​​​​ 28: ಕಾಂಗ್ರೆಸ್​ ಒಳಗೆ ಆಂತರಿಕ ಜಗಳವಾಗುತ್ತಿದೆ. ಕಾಂಗ್ರೆಸ್​ನ ಮೂರು ತಂಡಗಳು ಗಲಾಟೆ ಮಾಡುತ್ತಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel)​ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹಸಚಿವ ಡಾ.ಪರಮೇಶ್ವರ್ ನಿವಾಸದಲ್ಲಿ ಡಿನ್ನರ್ ಮೀಟಿಂಗ್‌ ವಿಚಾರ ಪ್ರಸ್ತಾಪಿಸಿದ್ದಾರೆ. ಸಿಎಂ ಸಿದ್ಧರಾಮಯ್ಯ ತಂಡ, ಡಿಸಿಎಂ ಡಿಕೆ ಶಿವಕುಮಾರ್ ತಂಡ ಮತ್ತು ಸಚಿವ  ಸತೀಶ್ ಜಾರಕಿಹೊಳಿ ತಂಡ ಕೆಲಸ ಮಾಡುತ್ತಿದೆ. ಇದರ ಹಿನ್ನೆಲೆಯಲ್ಲಿ ನಿನ್ನೆ ಡಿನ್ನರ್ ಮೀಟಿಂಗ್​ ನಡೆದಿದೆ ಎಂದು ಹೇಳಿದ್ದಾರೆ.

ಮುಂದೆಯೂ ರೆಸಾರ್ಟ್ ರಾಜಕಾರಣ ಪ್ರಾರಂಭವಾಗುತ್ತದೆ. ಹಾಗಾಗಿ ಕಾಂಗ್ರೆಸ್​ನ ಆಂತರಿಕ ಜಗಳದಿಂದಲೇ ಸರ್ಕಾರ ಬಿದ್ದು ಹೋಗುತ್ತದೆ ಎಂದು ವಾಗ್ದಾಳಿ ಮಾಡಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ದೇಶಭಕ್ತರ ವಿರುದ್ಧ ಕೇಸ್ ಹಾಕಲಾಗುತ್ತಿದೆ

ಕರ್ನಾಟಕದಲ್ಲಿ ದ್ವೇಷದ ರಾಜಕಾರಣ ನಡೆಯುತ್ತಿದೆ. ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ಕೇಸ್​ಗಳನ್ನು ಹಾಕಲಾಗುತ್ತಿದೆ. ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೂ ಕೇಸ್ ಹಾಕಲಾಗುತ್ತಿದೆ. ಜನಪ್ರತಿನಿಧಿಗಳ ಮೇಲೂ ಕೇಸ್ ಹಾಕಿ ಅವರ ಹಕ್ಕು ಕಸಿಯಲಾಗುತ್ತಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ದಕ್ಷಿಣ ಕನ್ನಡ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮೂವರು ಆರೋಪಿಗಳ ಪತ್ತೆಗೆ ತಲಾ 2 ಲಕ್ಷ ಬಹುಮಾನ ಘೋಷಿಸಿದ ಎನ್​ಐಎ

ಕೋಲಾರ ಸಂಸದ ಮುನಿಸ್ವಾಮಿ ಮೇಲೆ ಪೊಲೀಸರು ಹಲ್ಲೆ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನರ ಪರ ಧ್ವನಿ ಎತ್ತಿದ ಶಾಸಕರ ಮೇಲೆ‌ ಕೇಸ್​ ಹಾಕಲಾಗಿದೆ. ಸರ್ಕಾರ ಪೊಲೀಸ್ ಇಲಾಖೆ ಬಳಸಿಕೊಂಡು ಎಫ್​ಐಆರ್​​ ದಾಖಲಿಸಿದೆ. ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಬಿಜೆಪಿ ಹೋರಾಟ ಮಾಡಲಿದೆ ಎಂದರು.

ಇದನ್ನೂ ಓದಿ: ‘ಕಲೆಕ್ಷನ್ ಮಾಸ್ಟರ್’ಎಂದು ಸಿಎಂ ಸಿದ್ದರಾಮಯ್ಯ ಫೋಟೋ ಪೋಸ್ಟ್: ಶಾಸಕ ಹರೀಶ್ ಪೂಂಜ ವಿರುದ್ಧ FIR

ಸಾಮಾಜಿಕ ಜಾಲತಾಣದಲ್ಲಿ ಬರೆದಿರುವುದಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮೇಲೆ ತಿಂಗಳ ಒಳಗೆ ಎರಡನೇ ಎಫ್​ಐಆರ್ ದಾಖಲಿಸಲಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ದೇಶಭಕ್ತರ ವಿರುದ್ಧ ಕೇಸ್​ಗಳು‌ ಜಾಸ್ತಿಯಾಗುತ್ತಿವೆ. ಆದರೆ ದೇಶ ವಿರೋಧಿಗಳ ಮೇಲೆ ಒಂದೇ ಒಂದು ಕೇಸ್ ಹಾಕಿಲ್ಲ ಎಂದು ಕಿಡಿಕಾರಿದ್ದಾರೆ.

ಶಾಸಕ ಹರೀಶ್​ ಪೂಂಜ ರಾಜಕೀಯದಲ್ಲಿ ಬಚ್ಚಾ ಎಂದ ಸಿಎಂ ಸಿದ್ದರಾಮಯ್ಯ 

ಕಲೆಕ್ಷನ್ ಮಾಸ್ಟರ್​ ಎಂದು ಬಗ್ಗೆ ಹರೀಶ್​ ಪೂಂಜ ಪೋಸ್ಟ್​ ವಿಚಾರವಾಗಿ ಮಂಗಳೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹರೀಶ್ ಪೂಂಜಾ ಶಾಸಕನಾಗಿರೋದು ಮೊನ್ನೆ. ನಾನು 1883ರಲ್ಲಿ ಶಾಸಕನಾಗಿ, 1985ರಲ್ಲೇ ಸಚಿವನಾಗಿದ್ದವನು. ಅಂದಿನಿಂದ ಈವರೆಗೆ ಯಾರೂ ನನ್ನನ್ನು ಈ ರೀತಿ ಕರೆದಿರಲಿಲ್ಲ. ಶಾಸಕ ಹರೀಶ್​ ಪೂಂಜ ಪಾಪ ಇನ್ನೂ ರಾಜಕೀಯದಲ್ಲಿ ಬಚ್ಚಾ. ಹಿಂದಿನ ಸರ್ಕಾರ ಹಾಗೂ ಬಿಜೆಪಿ ಮುಖ್ಯಮಂತ್ರಿಗಳಿಗೆ ಹೇಳಲಿ ಎಂದು ತೀವ್ರ ವಾಗ್ದಾಳಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.