ಮಂಗಳೂರು: ಅರಬ್ಬಿ ಸಮುದ್ರದಲ್ಲಿ ಮುಳುಗಿದ್ದ ವಿದೇಶಿ ಸರಕು ಸಾಗಣೆ ಹಡಗಿನಿಂದ (Ship) ಸಣ್ಣ ಪ್ರಮಾಣದಲ್ಲಿ ತೈಲ (Oil) ಸೋರಿಕೆ ಆಗುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಸಮುದ್ರದಲ್ಲಿ ಸಣ್ಣ ಪ್ರಮಾಣದಲ್ಲಿ ಕಪ್ಪು ಬಣ್ಣದ ತೈಲ ಸೋರಿಕೆಯಾಗುತ್ತಿದೆ ಎಂದು ತಿಳಿದುಬಂದಿದೆ. ಸಿರಿಯಾ ದೇಶದ ಎಂಬಿ ಪ್ರಿನ್ಸೆಸ್ ಮಿರಲ್ ವ್ಯಾಪಾರಿ ಹಡಗು ಚೀನಾದಿಂದ ಲೆಬನಾನ್ಗೆ ಸ್ಟೀಲ್ ಕಾಯಿಲ್ ಸಾಗಿಸುತ್ತಿತ್ತು. ಸುಮಾರು 8 ಸಾವಿರ ಟನ್ ಸ್ಟೀಲ್ ಕಾಯಿಲ್ ಸಾಗಿಸುತ್ತಿದ್ದಾಗ ಜೂನ್ 23ರಂದು ತಾಂತ್ರಿಕ ಕಾರಣದಿಂದಾಗಿ ಹಡಗು ಸಮುದ್ರದಲ್ಲಿ ಮುಳುಗಡೆಯಾಗಿತ್ತು.
ಸುಮಾರು 220 ಮೆಟ್ರಿಕ್ ಟನ್ ತೈಲ ಹೊಂದಿರುವ ವಿದೇಶಿ ಹಡಗಿನಲ್ಲಿ 15 ಸಿಬ್ಬಂದಿ ಇದ್ದರು. ತಕ್ಷಣ ಸಿಬ್ಬಂದಿಗಳನ್ನ ರಕ್ಷಣೆ ಮಾಡಲಾಗಿತ್ತು. ಆದರೆ ಹಡಗಿನ ತೈಲ ಸೋರಿಕೆಯಾದರೆ ಮತ್ಸ್ಯ ಸಂಕುಲ ನಾಶವಾಗುವ ಆತಂಕ ಇದೆ.ಮಂಗಳೂರು ಹೊರವಲಯದ ಉಚ್ಚಿಲದ ಬಟ್ಟಪಾಡಿ ಸಮುದ್ರ ತೀರದಲ್ಲಿ ಕಳೆದ ಮೂರು ದಿನಗಳ ಹಿಂದೆಯೇ ತೈಲ ಸೋರಿಕೆಯಾಗುತ್ತಿರುವ ಮಾಹಿತಿ ಇದೆ.
ಇದನ್ನೂ ಓದಿ: ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ಹುದ್ದೆಗೆ ಶಿವಸೇನೆಯ ರಾಜನ್ ಸಾಲ್ವಿ ನಾಮಪತ್ರ ಸಲ್ಲಿಕೆ
ಈ ಬಗ್ಗೆ ಟಿವಿ9 ಜೊತೆ ಮಾತನಾಡಿರುವ ಸ್ಥಳೀಯರು, ಕಳೆದ ಮೂರು ದಿನಗಳಿಂದ ತೈಲ ಸೋರಿಕೆಯಾಗಿ ವಾಸನೆ ಬರುತ್ತಿದೆ. ಸಮುದ್ರದಲ್ಲಿ ತೈಲ ಸೇರಿಕೊಂಡು ಬಾವಿ ನೀರು ಸೇರಿ ಜಲ ಮೂಲಗಳು ಕಲುಷಿತವಾಗಿದೆ. ಇದರಿಂದ ಇಲ್ಲಿನ ಕೆಲ ಮನೆಗಳ ನಿವಾಸಿಗಳಿಗೆ ಬೇಧಿಯಾಗುತ್ತಿದೆ. ನಾಲ್ಕೈದು ಜನರಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. ಮೀನುಗಾರಿಕೆ ತೆರಳಲಾಗದೇ ನಾವು ಸಂಕಷ್ಟಕ್ಕೆ ಸಿಲುಕಿದ್ದೇವೆ ಎಂದರು.
ಜೂನ್ 26ರಂದು ಮುಳುಗಿರುವ ಶಿಪ್ನ ಸುತ್ತಾ ಮುತ್ತಾ ಕೋಸ್ಟ್ ಗಾರ್ಡ್ ಮಿನಿ ಜೆಟ್ ಇತ್ತು. ತೈಲ ಸೋರಿಕೆಯಾದರೆ ಮಾಹಿತಿ ನೀಡಲು ಜೆಟ್ ಸುತ್ತು ಹೊಡೆಯುತ್ತಿತ್ತು. ಈ ಹಿನ್ನೆಲೆ ಮುಳುಗಿರುವ ಶಿಪ್ ಬಳಿ ಬೇರೆ ಶಿಪ್, ಮೀನುಗಾರಿಕೆ ಬೋಟ್ ಬರದಂತೆ ಎಚ್ಚರಿಸಲಾಗಿತ್ತು.
ಇದನ್ನೂ ಓದಿ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಹುಲಿಯೊಂದು ಆನೆಮರಿಯ ದೇಹವನ್ನು ಎಳೆದೊಯ್ಯುವ ದೃಶ್ಯ ಸೆರೆಸಿಕ್ಕಿದೆ!
Published On - 12:42 pm, Sat, 2 July 22