AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಮುಳುಗಡೆಯಾಗಿದ್ದ ವಿದೇಶಿ ಸರಕು ಸಾಗಣೆ ಹಡಗಿನಿಂದ ತೈಲ ಸೋರಿಕೆ ಆತಂಕ! ಕೋಸ್ಟ್ ಗಾರ್ಡ್ ಮಿನಿ ಜೆಟ್ ಆಗಮನ

ತೈಲ ಸೋರಿಕೆಯಾಗುವ ಆತಂಕದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತ, ಕೋಸ್ಟ್ ಗಾರ್ಡ್ ಅಲರ್ಟ್ ಘೋಷಣೆ ಮಾಡಿದೆ. ತೈಲ ಸೋರಿಕೆಯಾದರೆ ಮುಂದಿನ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಚರ್ಚೆ ಮಾಡುತ್ತಾರೆ.

ಮಂಗಳೂರು: ಮುಳುಗಡೆಯಾಗಿದ್ದ ವಿದೇಶಿ ಸರಕು ಸಾಗಣೆ ಹಡಗಿನಿಂದ ತೈಲ ಸೋರಿಕೆ ಆತಂಕ! ಕೋಸ್ಟ್ ಗಾರ್ಡ್ ಮಿನಿ ಜೆಟ್ ಆಗಮನ
ನೀರಿನಲ್ಲಿ ಮುಳುಗಿದ ಹಡಗು
TV9 Web
| Edited By: |

Updated on:Jun 26, 2022 | 1:06 PM

Share

ಮಂಗಳೂರು: ಜೂನ್ 23ರಂದು ಉಚ್ಚಿಲ ಬಟ್ಟಪಾಡಿ ಬಳಿ ಅರಬ್ಬಿ ಸಮುದ್ರದಲ್ಲಿ ಮುಳುಗಿದ್ದ ವಿದೇಶಿ ಸರಕು ಸಾಗಣೆ ಹಡಗಿನಿಂದ (Ship) ತೈಲ (Oil) ಸೋರಿಕೆ ಆಗುವ ಆತಂಕ ಶುರುವಾಗಿದೆ. ಸಿರಿಯಾ ದೇಶದ ಎಂಬಿ ಪ್ರಿನ್ಸೆಸ್ ಮಿರಲ್ ವ್ಯಾಪಾರಿ ಹಡಗು ಚೀನಾದಿಂದ ಲೆಬನಾನ್​ಗೆ ಸ್ಟೀಲ್ ಕಾಯಿಲ್ ಸಾಗಿಸುತ್ತಿತ್ತು. ಸುಮಾರು 8 ಸಾವಿರ ಟನ್ ಸ್ಟೀಲ್ ಕಾಯಿಲ್ ಸಾಗಿಸುತ್ತಿದ್ದಾಗ ತಾಂತ್ರಿಕ ಕಾರಣದಿಂದ ಹಡಗು ಸಮುದ್ರದಲ್ಲಿ ಮುಳುಗಡೆಯಾಗಿತ್ತು. ಇಂಡಿಯನ್ ಕೋಸ್ಟ್ ಗಾರ್ಡ್ನಿಂದ 15 ಸಿಬ್ಬಂದಿಯನ್ನು ರಕ್ಷಣೆ ಮಾಡಲಾಗಿದೆ. ಆದರೆ ಹಡಗಿನ ತೈಲ ಸೋರಿಕೆಯಾದ್ರೆ ಮತ್ಸ್ಯ ಸಂಕುಲ ನಾಶವಾಗುವ ಆತಂಕ ಹೆಚ್ಚಾಗಿದೆ.

ತೈಲ ಸೋರಿಕೆಯಾಗುವ ಆತಂಕದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತ, ಕೋಸ್ಟ್ ಗಾರ್ಡ್ ಅಲರ್ಟ್ ಘೋಷಣೆ ಮಾಡಿದೆ. ತೈಲ ಸೋರಿಕೆಯಾದರೆ ಮುಂದಿನ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಚರ್ಚೆ ಮಾಡುತ್ತಾರೆ.

ಇನ್ನು ಲೆಬನಾನ್ಗೆ ಹೊರಟಿದ್ದ ಹಡಗು ಮಂಗಳೂರಿಗೆ ಬಂದಿದ್ದೇಕೆ? ಎಂಬ ಪ್ರಶ್ನೆ ಮೂಡಿದ್ದು, ಮಂಗಳೂರು ಸಮುದ್ರ ತೀರ ಪ್ರವೇಶದ ಬಗ್ಗೆ ಅನುಮಾನವೂ ಮೂಡಿದೆ. ಹೀಗಾಗಿ ಕೇಂದ್ರ ತನಿಖಾ ದಳದಿಂದ ಮಂಗಳೂರು ಕಡಲ ತೀರ ಪ್ರವೇಶದ ಬಗ್ಗೆ ತನಿಖೆ ನಡೆಯುವ ಸಾಧ್ಯತೆಯಿದೆ.

ಇದನ್ನೂ ಓದಿ
Image
ಹ್ಯಾಕರ್ ಶ್ರೀಕಿ ಸೋದರನಿಗೆ ದೇಶ ಬಿಟ್ಟು ತೆರಳದಂತೆ ನಿರ್ಬಂಧ: ಇಡಿ ತನಿಖೆಗೆ ಸಹಕರಿಸಲು ಹೈಕೋರ್ಟ್ ಸೂಚನೆ
Image
POCO F4 5G: ರಿಲೀಸ್ ಆದ ಎರಡೇ ದಿನಕ್ಕೆ ಪೋಕೋ F4 5G ಸ್ಮಾರ್ಟ್‌ಫೋನ್‌ ಮೇಲೆ ಬಂಪರ್ ಡಿಸ್ಕೌಂಟ್
Image
ಕಿಚ್ಚ ಸುದೀಪ್​ಗೆ ಸಿಕ್ತು ಮತ್ತೊಂದು ಬ್ಯಾಟ್ ಗಿಫ್ಟ್​; ಇದರಲ್ಲಿದೆ ಹಲವು ದಿಗ್ಗಜರ ಆಟೋಗ್ರಾಫ್​
Image
Viral Video: ಮಳೆಗಾಲದಲ್ಲಿ ಹೇಗೆ ನಡೆದುಕೊಂಡು ಹೋಗಬೇಕು ಗೊತ್ತಾ? ಈ ವಿಡಿಯೋ ನೋಡಿ

ಇದನ್ನೂ ಓದಿ: ಹ್ಯಾಕರ್ ಶ್ರೀಕಿ ಸೋದರನಿಗೆ ದೇಶ ಬಿಟ್ಟು ತೆರಳದಂತೆ ನಿರ್ಬಂಧ: ಇಡಿ ತನಿಖೆಗೆ ಸಹಕರಿಸಲು ಹೈಕೋರ್ಟ್ ಸೂಚನೆ

ತೈಲ ಸೋರಿಕೆಯಾದರೆ ಭಾರೀ ಪ್ರಮಾಣದ ಅಗ್ನಿ ಅವಘಡವಾಗುವ ಸಾಧ್ಯತೆ ಇರುತ್ತದೆ. ಸ್ಥಳೀಯರಿಗೆ ಸಾಕಷ್ಟು ತೊಂದರೆಯಾಗಬಹುದು. ಸದ್ಯ ಸ್ಥಳದಲ್ಲಿ ಸಾಕಷ್ಟು ಸಂಖ್ಯೆಯ ಸಿಬ್ಬಂದಿ ದೌಡಾಯಿಸಿದ್ದಾರೆ.

ಕೋಸ್ಟ್ ಗಾರ್ಡ್ ಮಿನಿ ಜೆಟ್ ಆಗಮನ: ಮುಳುಗಿರುವ ಶಿಪ್​ನ ಸುತ್ತಾ ಮುತ್ತಾ ಕೋಸ್ಟ್ ಗಾರ್ಡ್ ಮಿನಿ ಜೆಟ್ ಇದೆ. ತೈಲ ಸೋರಿಕೆಯಾದರೆ ಮಾಹಿತಿ ನೀಡಲು ಜೆಟ್ ಸುತ್ತು ಹೊಡೆಯುತ್ತಿದೆ. ಮುಳುಗಿರುವ ಶಿಪ್ ಬಳಿ ಬೇರೆ ಶಿಪ್, ಮೀನುಗಾರಿಕೆ ಬೋಟ್ ಬರದಂತೆ ಎಚ್ಚರಿಸಲಾಗಿದೆ.

ಇದನ್ನೂ ಓದಿ: ಹ್ಯಾಕರ್ ಶ್ರೀಕಿ ಸೋದರನಿಗೆ ದೇಶ ಬಿಟ್ಟು ತೆರಳದಂತೆ ನಿರ್ಬಂಧ: ಇಡಿ ತನಿಖೆಗೆ ಸಹಕರಿಸಲು ಹೈಕೋರ್ಟ್ ಸೂಚನೆ

Published On - 12:59 pm, Sun, 26 June 22

ಹಿಮಾವೃತವಾದ ಚಂಡೀಗಢದ ಸುಕ್ಮಾ ಸರೋವರದ ಸೌಂದರ್ಯ ನೋಡಿ
ಹಿಮಾವೃತವಾದ ಚಂಡೀಗಢದ ಸುಕ್ಮಾ ಸರೋವರದ ಸೌಂದರ್ಯ ನೋಡಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು