AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anwar Manippady: ಅನ್ವರ್ ಮಾಣಿಪ್ಪಾಡಿಗೆ ವಿದೇಶಿ ವ್ಯಕ್ತಿಗಳಿಂದ ಬೆದರಿಕೆ ಕರೆ, ವಕ್ಫ್ ಮಸೂದೆಗೆ ಅನುಮೋದನೆ ಬೆನ್ನಲ್ಲೇ ಕೃತ್ಯ

ಅನ್ವರ್ ಮಾಣಿಪ್ಪಾಡಿಗೆ ಬೆದರಿಕೆ ಕರೆ: ಕೊನೆಗೂ ವಕ್ಫ್ ತಿದ್ದುಪಡಿ ಮಸೂದೆಗೆ ಸಂಸತ್ತಿನ ಅನುಮೋದನೆ ಪಡೆಯುವಲ್ಲಿ ಕೇಂದ್ರದ ಎನ್​​ಡಿಎ ಸರ್ಕಾರ ಯಶಸ್ವಿಯಾಗಿದೆ. ಇದರ ಬೆನ್ನಲ್ಲೇ, ಕರ್ನಾಟಕದ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಅವರಿಗೆ ವಿದೇಶಿ ವ್ಯಕ್ತಿಗಳಿಂದ ಬೆದರಿಕೆ ಕರೆಗಳು ಬಂದಿವೆ.. ಈ ವಿಚಾರವಾಗಿ ಅವರು ಈಗಾಗಲೇ ಮಂಗಳೂರು ಪೊಲೀಸ್ ಕಮಿಷನರ್​​ಗೆ ಮಾಹಿತಿ ನೀಡಿದ್ದಾರೆ.

Anwar Manippady: ಅನ್ವರ್ ಮಾಣಿಪ್ಪಾಡಿಗೆ ವಿದೇಶಿ ವ್ಯಕ್ತಿಗಳಿಂದ ಬೆದರಿಕೆ ಕರೆ, ವಕ್ಫ್ ಮಸೂದೆಗೆ ಅನುಮೋದನೆ ಬೆನ್ನಲ್ಲೇ ಕೃತ್ಯ
ಅನ್ವರ್ ಮಾಣಿಪ್ಪಾಡಿಗೆ ವಿದೇಶಿ ವ್ಯಕ್ತಿಗಳಿಂದ ಬೆದರಿಕೆ ಕರೆ
Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: Ganapathi Sharma

Updated on:Apr 04, 2025 | 12:48 PM

ಮಂಗಳೂರು, ಏಪ್ರಿಲ್ 4: ಕೇಂದ್ರ ಸರ್ಕಾರವು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ತಿದ್ದುಪಡಿ ಮಸೂದೆಗೆ ಅನುಮೋದನೆ ಪಡೆದ ಬೆನ್ನಲ್ಲೇ, ಕರ್ನಾಟಕದ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪಾಡಿ (Anwar Manippady) ಅವರಿಗೆ ವಿದೇಶಿ ವ್ಯಕ್ತಿಗಳಿಂದ ಬೆದರಿಕೆ ಕರೆ (Threat Call) ಬಂದಿದೆ. ಈ ವಿಚಾರವಾಗಿ ಅನ್ವರ್ ಮಾಣಿಪ್ಪಾಡಿ ಮಂಗಳೂರು ನಗರ ಪೊಲೀಸ್ (Mangaluru Police) ಆಯುಕ್ತರಿಗೆ ಮಾಹಿತಿ ನೀಡಿದ್ದಾರೆ. ಇಂಟರ್ನೆಟ್ ಆಧಾರಿತ ಕರೆ ಮೂಲಕ ಬೆದರಿಕೆ ಕರೆ ಬಂದಿದೆ ಎನ್ನಲಾಗಿದೆ. ಅನ್ವರ್ ಮಾಣಿಪ್ಪಾಡಿ ಅವರು ಸದ್ಯ ಮಂಗಳೂರಿನಲ್ಲಿರುವ ನಿವಾಸದಲ್ಲಿ ವಾಸವಾಗಿದ್ದಾರೆ.

ಐತಿಹಾಸಿಕ ವಕ್ಫ್ ತಿದ್ದುಪಡಿ ಮಸೂದೆಯ ಮೇಲೆ ಲೋಕಸಭೆಯಲ್ಲಿ ಚರ್ಚೆ ಮಾಡುವ ಸಂದರ್ಭ ಗೃಹ ಸಚಿವ ಅಮಿತ್ ಶಾ ಕರ್ನಾಟಕದ ವಿಚಾರ ಕೂಡ ಪ್ರಸ್ತಾಪ ಮಾಡಿದ್ದರು. ಅನ್ವರ್ ಮಾಣಿಪ್ಪಾಡಿ ವರದಿ ಉಲ್ಲೇಖಿಸಿ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದ್ದರು. ಅಲ್ಲದೆ, ಕಾಂಗ್ರೆಸ್ ಪಕ್ಷದ ಗೆಲುವಿನ ದಿನ ಅವರ ಬೆಂಬಲಿಗರು ಪಾಕಿಸ್ತಾನ ಪರ ಜೈಕಾರ ಹಾಕಿದ್ದರು ಎಂದು ಕಾಂಗ್ರೆಸ್ ರಾಜ್ಯ ಸಭಾ ಸದಸ್ಯ ನಾಸಿರ್ ಹುಸೇನ್ ಅವರಿಗೆ ಟಾಂಗ್ ನೀಡಿದ್ದರು. ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಬೆದರಿಕೆ ಕರೆ ಬಂದಿರುವುದು ಗಮನಾರ್ಹ.

ಅನ್ವರ್ ಮಾಣಿಪ್ಪಾಡಿ ಹೇಳಿದ್ದೇನು?

ಬೆದರಿಕೆ ಕರೆ ವಿಚಾರವಾಗಿ ಅನ್ವರ್ ಮಾಣಿಪ್ಪಾಡಿ ‘ಟಿವಿ9’ಗೆ ಪ್ರತಿಕ್ರಿಯೆ ನೀಡಿದ್ದು, ‘ಇಂಟರ್ನೆಟ್ ಕರೆ ಮೂಲಕ ನನಗೆ ನಿರಂತರ ಬೆದರಿಕೆ ಬರುತ್ತಾ ಇದೆ. ಹಿಂದಿ, ಮರಾಠಿ, ಇಂಗ್ಲೀಷ್ ಹಾಗೂ ಉತ್ತರ ಭಾರತದ ಭಾಷೆಗಳಲ್ಲಿ ಕರೆಗಳು ಬರುತ್ತಾ ಇವೆ. ಇಂಗ್ಲಿಷ್​ನಲ್ಲಿ ಕರೆ ಮಾಡಿದ ವ್ಯಕ್ತಿ ನೀವು ಹೆಚ್ಚು ದಿನ ಉಳಿಯುವುದಿಲ್ಲ ಎಂದು ಬೆದರಿಕೆ ಹಾಕಿದ್ದಾನೆ. ನಿನ್ನ ಸಮುದಾಯ ನಿನ್ನನ್ನು ಬಿಡಲ್ಲ ಎಂದೆಲ್ಲಾ ಹೇಳಿದ್ದಾನೆ. ಆದರೆ ನನ್ನ ಸಮುದಾಯದ ಬಗ್ಗೆ ನನಗೆ ಖುಷಿ ಇದೆ. ಸದ್ಯ ನಾನು ಮಂಗಳೂರು ಕಮಿಷನರ್ ಅನುಪಮ್ ಅಗರವಾಲ್​ಗೆ ಮಾಹಿತಿ ಕೊಟ್ಟಿದ್ದೇನೆ. ನಾನು ಈ ಹಿಂದೆಯೂ ಭದ್ರತೆ ಕೊಟ್ಟಾಗ ವಾಪಾಸ್ ಕಳುಹಿಸಿದ್ದೆ. ಈಗ ತಿದ್ದುಪಡಿ ಮಸೂದೆ ಜಾರಿ ಬಳಿಕ ಮತ್ತೆ ಒಂದಷ್ಟು ಕರೆಗಳು ಬರುತ್ತಿವೆ, ಅದು ಸಾಮಾನ್ಯ’ ಎಂದಿದ್ದಾರೆ.

ಇದನ್ನೂ ಓದಿ
Image
ವಕ್ಫ್​ ವ್ಯಾಪ್ತಿಯಿಂದ ಬುಡಕಟ್ಟು ಜನಾಂಗದ ಭೂಮಿ ಹೊರಕ್ಕೆ
Image
ವಕ್ಫ್​ ತಿದ್ದುಪಡಿ ಮಸೂದೆ ಅಂಗೀಕಾರ ಕುರಿತು ಪ್ರಧಾನಿ ಮೋದಿ ಹೇಳಿದ್ದೇನು?
Image
ವಕ್ಫ್ ತಿದ್ದುಪಡಿ ಮಸೂದೆಗೆ ರಾಜ್ಯಸಭೆಯಲ್ಲೂ ಅನುಮೋದನೆ
Image
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ

ವಕ್ಫ್ ತಿದ್ದುಪಡಿ ಕಾಯ್ದೆಗೆ ಅನುಮೋದನೆ ದೊರೆತಿರುವುದು ಖುಷಿಕೊಟ್ಟಿದೆ: ಅನ್ವರ್ ಮಾಣಿಪ್ಪಾಡಿ

ವಕ್ಫ್ ತಿದ್ದುಪಡಿ ಕಾಯ್ದೆಗೆ ಅನುಮೋದನೆ ದೊರೆತಿರುವುದು ಖುಷಿಕೊಟ್ಟಿದೆ ಎಂದು ಅನ್ವರ್ ಮಾಣಿಪ್ಪಾಡಿ ತಿಳಿಸಿದ್ದಾರೆ. ಈ ಮಸೂದೆ ಜಾರಿಯ ಹಿಂದೆ ನನ್ನ ವರದಿಯ ನೆರಳಿದೆ. ದೆಹಲಿಗೆ ತೆರಳಿ ಜೆಪಿಸಿ ಸಭೆಯಲ್ಲೂ ನಾನು ಭಾಗಿಯಾಗಿದ್ದೆ. ನನ್ನ ವರದಿಯ ಆಧಾರದಲ್ಲೇ ಕೇಂದ್ರದ ಈ ತಿದ್ದುಪಡಿ ಮಸೂದೆ ಜಾರಿ ಆಗಿದೆ ಎಂದು ಅವರು ಹೇಳಿದ್ದಾರೆ.

ತಿದ್ದುಪಡಿ ಮಸೂದೆಯಿಂದ ಕೆಲವು ಐಎಎಸ್‌ ಅಧಿಕಾರಿಗಳಿಗೆ ಸಂಕಷ್ಟ ಇದೆ. ಎಲ್ಲಾ ಪಕ್ಷದ ಹಲವು ರಾಜಕಾರಣಿಗಳಿಗೆ ಸಂಕಷ್ಟ ಇದೆ. ಕಾಂಗ್ರೆಸ್​ನ ಹಲವು ಮುಖಂಡರ ತಲೆಗಳು ಇದರಿಂದ ಉರುಳಲಿವೆ. ಮಸೂದೆ ಜಾರಿಯಾದ ಬಳಿಕ ಕ್ರಮಗಳು ಆಗುತ್ತವೆ. ಅತಿಕ್ರಮಣ ತೆರವು ಜಾರಿಯಾದಾಗ ಅನೇಕರಿಗೆ ಸಮಸ್ಯೆ ಆಗಲಿದೆ ಎಂದು ಅನ್ವರ್ ಮಾಣಿಪ್ಪಾಡಿ ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:24 am, Fri, 4 April 25

Daily Devotional: ಈ 5 ವಿಷಯಗಳನ್ನ ಯಾರಿಗೂ ಹೇಳಬಾರದು
Daily Devotional: ಈ 5 ವಿಷಯಗಳನ್ನ ಯಾರಿಗೂ ಹೇಳಬಾರದು
ಸೂರ್ಯ ಮಿಥುನ ರಾಶಿಯಲ್ಲಿ, ಇಂದು ಯಾರಿಗೆಲ್ಲಾ ಶುಭ ದಿನ ತಿಳಿಯಿರಿ
ಸೂರ್ಯ ಮಿಥುನ ರಾಶಿಯಲ್ಲಿ, ಇಂದು ಯಾರಿಗೆಲ್ಲಾ ಶುಭ ದಿನ ತಿಳಿಯಿರಿ
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!