AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangaluru Jaleel Murder Case: ಜಲೀಲ್ ಹತ್ಯೆ ಪ್ರಕರಣದಲ್ಲಿ ಮೂವರ ಬಂಧನ, ಆರೋಪಿಗಳ ಬಗ್ಗೆ ಮಾಹಿತಿ ನೀಡಿದ ಕಮಿಷನರ್

ಅಬ್ದುಲ್​ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿಕೆ ನೀಡಿದ್ದು, ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.

Mangaluru Jaleel Murder Case: ಜಲೀಲ್ ಹತ್ಯೆ ಪ್ರಕರಣದಲ್ಲಿ ಮೂವರ ಬಂಧನ, ಆರೋಪಿಗಳ ಬಗ್ಗೆ ಮಾಹಿತಿ ನೀಡಿದ ಕಮಿಷನರ್
ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್
TV9 Web
| Edited By: |

Updated on:Dec 26, 2022 | 4:43 PM

Share

ದಕ್ಷಣ ಕನ್ನಡ: ಮಂಗಳೂರಿನ (Mangalore) ಕಾಟಿಪಳ್ಳದಲ್ಲಿ ನಡೆದ ಅಬ್ದುಲ್​ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿಕೆ ನೀಡಿದ್ದು, ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದೇವೆ. ವಶಕ್ಕೆ ಪಡೆದ ಮೂವರ ಪೈಕಿ ಇಬ್ಬರು ಕೃತ್ಯದಲ್ಲಿ ಭಾಗಿಯಾಗಿದ್ದು, ಒಬ್ಬ ಬೈಕ್​ನಲ್ಲಿ ಕರೆತಂದು ಇಬ್ಬರನ್ನು ಡ್ರಾಪ್ ಮಾಡಿದ್ದ.​ ಕೊಲೆಗೆ ಕಾರಣವಾದ ಅಂಶಗಳ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ಮೂವರಲ್ಲಿ ಇಬ್ಬರು ಈ ಹಿಂದೆ ಹಲವು ಪ್ರಕರಣಗಳಲ್ಲಿ ಮತ್ತು 2021ರಲ್ಲಿ ನಡೆದ ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾಗಿದ್ದರು. ಸದ್ಯ ಅವರನ್ನು ನ್ಯಾಯಾಲಯಕ್ಕೆ ಹಾಜರು ಮಾಡಿದ್ದೇವೆ. 14 ದಿನ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತದೆ ಎಂದು ತಿಳಿಸಿದರು.

ತನಿಖೆ ಬಳಿಕ ಹೆಚ್ಚಿನ ಮಾಹಿತಿ

ಗುರುತು ಪತ್ತೆ ಆಗೋವರೆಗೂ ಆರೋಪಿಗಳ ಮಾಹಿತಿ ಹೇಳಲು ಆಗಲ್ಲ. ನಿನ್ನೆ ರಾತ್ರಿ ಅವರನ್ನು ವಶಕ್ಕೆ ಪಡೆಯಲಾಗಿದೆ, ಹೆಚ್ಚಿನ ವಿಚಾರಣೆ ಮಾಡುತ್ತೇವೆ. ಕೊಲೆಗೆ ಕಾರಣ ಏನು ಅನ್ನೋದನ್ನ ಪೂರ್ಣ ತನಿಖೆ ಬಳಿಕ ಹೇಳುತ್ತೇವೆ. ಜಲೀಲ್ ಕೇಸ್​ನಲ್ಲಿ ಮಹಿಳೆಯರೂ ಸೇರಿ 10-12 ಜನರನ್ನ ವಶಕ್ಕೆ ಪಡೆದಿದ್ದೆವು. ಜಲೀಲ್ ಕುಟುಂಬಸ್ಥರು ಸೇರಿ ಕೆಲವರ ವಿಚಾರಣೆ ನಡೆದಿದೆ. ಆದರೆ ಸದ್ಯ ಒಟ್ಟು 3 ಜನರನ್ನ ಮಾತ್ರ ಬಂಧನ ಮಾಡಲಾಗಿದೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿದರು.

ಇದನ್ನೂ ಓದಿ: ಸುರತ್ಕಲ್​ ಜಲೀಲ್ ಹತ್ಯೆ ಪ್ರಕರಣ: ಸುರತ್ಕಲ್ ಸುತ್ತಮುತ್ತ ಮದ್ಯ ಮಾರಾಟ ನಿಷೇಧ, ಸೆಕ್ಷನ್ 144 ಜಾರಿ

144 ಸೆಕ್ಷನ್​ ಜಾರಿ

ಇನ್ನು ಮಂಗಳೂರಿನ ಸುರತ್ಕಲ್​​ ಸೇರಿದಂತೆ ಹಲವೆಡೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಸುರತ್ಕಲ್​​, ಬಜ್ಪೆ, ಕಾವೂರು, ಪಣಂಬೂರು ವ್ಯಾಪ್ತಿಯಲ್ಲಿ ನಿನ್ನೆಯಿಂದ (ಡಿ.25) ಡಿ.27ರ ಬೆಳಗ್ಗೆ 6ರವರೆಗೂ ನಿಷೇಧಾಜ್ಞೆ ಜಾರಿಗೊಳಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್​. ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ತುರ್ತು ಸೇವೆಗಳಿಗೆ, ಕ್ರಿಸ್​ಮಸ್​ ಹಬ್ಬ ಆಚರಣೆಗೆ ಅನುಮತಿ ನೀಡಲಾಗಿದೆ.

ಮದ್ಯ ಮಾರಾಟ ನಿಷೇಧ

ಸುರತ್ಕಲ್ ಸುತ್ತಮುತ್ತ ಮದ್ಯ ಮಾರಾಟ ನಿಷೇಧಿಸಲಾಗಿದೆ. ಸುರತ್ಕಲ್, ಬಜ್ಪೆ, ಕಾವೂರು ಮತ್ತು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ 10 ರಿಂದ ಡಿ.27 ಬೆಳಗ್ಗೆ 10 ರವರೆಗೂ ನಿಷೇಧ ಹೇರಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: Mangaluru Jaleel Murder Case: ಕಾಟಿಪಳ್ಳಕ್ಕೆ ಜಲೀಲ್ ಮೃತದೇಹ ರವಾನೆ; ಸುರತ್ಕಲ್ ಸುತ್ತಮುತ್ತ ಅಘೋಷಿತ ಬಂದ್​​ ವಾತಾವರಣ

ಇಂಡಸ್ಟ್ರೀಸ್ ಹಾಗೂ ಸಂಕೀರ್ಣಗಳಿಗೆ ಪೊಲೀಸ್ ಅಡ್ವೈಸರಿ

ಸುರತ್ಕಲ್, ಬಜ್ಪೆ, ಕಾವೂರು ಮತ್ತು ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ಸಂಜೆ 6 ಗಂಟೆ ಒಳಗೆ ಶಿಫ್ಟ್ ಚೆಂಜ್ ಮಾಡಲು ಸೂಚಿಸಲಾಗಿದೆ. ಸಂಜೆ 6 ರಿಂದ ಬೆಳಗ್ಗೆ 6 ರವರೆಗೂ ಸಿಬ್ಬಂದಿಗಳು ರಸ್ತೆಯಲ್ಲಿ ಇರದಂತೆ ನೋಡಿಕೊಳ್ಳಲು ಆದೇಶಿಸಲಾಗಿದೆ.

ಘಟನೆ ಹಿನ್ನೆಲೆ

ಮಂಗಳೂರು ಹೊರವಲಯದ ಸುರತ್ಕಲ್​​ನ ಕಾಟಿಪಳ್ಳ ನಾಲ್ಕನೇ ಬ್ಲಾಕ್​ನಲ್ಲಿ ಜಲೀಲ್ (45) ಎಂಬುವರಿಗೆ ದುಷ್ಕರ್ಮಿಗಳು ಡಿ. 24ರಂದು ಚಾಕು ಇರಿದಿದ್ದಾರೆ. ಜಲೀಲ್ ಕಾಟಿಪಳ್ಳದ ನೈತಂಗಡಿ ರಸ್ತೆಯಲ್ಲಿರುವ ಲತೀಫಾ ಸ್ಟೋರ್ ಮಾಲಿಕರಾಗಿದ್ದರು. ಸ್ಟೋರ್​ನಲ್ಲಿದ್ದ ಜಲೀಲ್​ಗೆ ದುಷ್ಕರ್ಮಿಗಳ ಗುಂಪು ಚಾಕು ಇರಿದು ಪರಾರಿಯಾಗಿದ್ದರು. ಇದರಿಂದ ತೀರ್ವ ಗಯಗೊಂಡಿದ್ದ ಜಲೀಲ್​ರನ್ನು ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಜಲೀಲ್​ ಸಾವನ್ನಪ್ಪಿದ್ದರು. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:46 pm, Mon, 26 December 22

Follow Us
Web contact
Web contact

TV9 Kannada

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?