ಶಿರಾಡಿಘಾಟ್​​ನಲ್ಲಿ ಭೀಕರ ಅಪಘಾತ: ಕಾರಿನಲ್ಲಿದ್ದ ನಾಲ್ವರ ಪೈಕಿ ಮೂವರು ಸಾವು, ಓರ್ವನ ಸ್ಥಿತಿ ಗಂಭೀರ

ಶಿರಾಡಿಘಾಟ್​​ನಲ್ಲಿ KSRTC ರಾಜಹಂಸ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದವರು ಸಕಲೇಶಪುರಕ್ಕೆ ಮದುವೆಗೆ ಹೋಗಿ ಬರುತ್ತಿದ್ದ ನಾಲ್ವರ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ರೆ, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಶಿರಾಡಿಘಾಟ್​​ನಲ್ಲಿ ಭೀಕರ ಅಪಘಾತ: ಕಾರಿನಲ್ಲಿದ್ದ ನಾಲ್ವರ ಪೈಕಿ ಮೂವರು ಸಾವು, ಓರ್ವನ ಸ್ಥಿತಿ ಗಂಭೀರ
Sikarighat Accident
Edited By:

Updated on: Mar 13, 2026 | 6:06 PM

ಮಂಗಳೂರು, (ಮಾರ್ಚ್ 13): KSRTC ರಾಜಹಂಸ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ (Accident) ಸಂಭವಿಸಿದ್ದು,  ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ  ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುತ್ತೂರು ತಾಲೂಕಿನ ಶಿರಾಡಿಘಾಟ್​​​ನ (shiradi ghat) ಗುಂಡ್ಯ ಸಮೀಪ ನಡೆದಿದೆ. ಉಜಿರೆ ನಿವಾಸಿಗಳಾದ ಶ್ರೀಧರ ಮರಕಡ, ಜನಾರ್ದನ ಕೆರಿಮಾರ್ ಹಾಗೂ ಕೊಕ್ಕಡ ನಿವಾಸಿ ಚಂದ್ರಶೇಖರಗೌಡ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಇನ್ನು ಈ ಘಟನೆಯಲ್ಲಿ ಕಾರಿನಲ್ಲಿದ್ದ ಮತ್ತೋರ್ವ ಸುರೇಶ್ ಎಂಬುವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ.

ನಾಲ್ವರು ಒಂದೇ ಕಾರಿನಲ್ಲಿ ಸಕಲೇಶಪುರದಲ್ಲಿ ಮದುವೆ ಮುಗಿಸಿಕೊಂಡು ವಾಪಸ್ ಉಜಿರೆ ಕಡೆ ಹೋಗುತ್ತಿದ್ದರು. ಇನ್ನು ಕೆಎಸ್​​ಆರ್​​ಟಿಸಿ ರಾಜಹಂಸ ಬಸ್ ಮಂಗಳೂರು ಕಡೆಯಿಂದ ಬಂದಿದ್ದು, ಶಿರಾಡಿಘಾಟ್​ನ ಗುಂಡ್ಯ ಸಮೀಪ ಮುಖಾಮುಖಿ ಡಿಕ್ಕಿಯಾಗಿವೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರ ಪೈಕಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಕಲೇಶಪುರದಿಂದ ಕೊಕ್ಕಡ ಕಡೆಗೆ ಬರುತ್ತಿದ್ದ ಶಿಶಿಲ ಗ್ರಾಮದ ಧರ್ಮದಕಳ ನಿವಾಸಿ ಚಂದ್ರಶೇಖರ ಗೌಡ ರವರು ಪ್ರಯಾಣಿಸುತ್ತದ್ದ ಸ್ವೀಫ್ಟ್ ಕಾರು ಮತ್ತು ಧರ್ಮಸ್ಥಳದಿಂದ ತಿರುಪತಿ ಹೊರಟಿರುವ ಕೆಎಸ್ಸಾರ್ಟಿಸಿ ರಾಜಹಂಸ ಬಸ್ ನಡುವೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪ ಈ ದುರ್ಘಟನೆ ಸಂಭವಿಸಿದೆ. ಇನ್ನು ಕಾರಿನಲ್ಲಿದ್ದ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಸುರೇಶ್ ಉಜಿರೆ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.

ಮುಖಾಮುಖಿ ಡಿಕ್ಕಿಯಾದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅಪಘಾತದಿಂದ ಕೆಲ ಸಮಯ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ. ಬಳಿಕ ಪೊಲೀಸರು ಬಂದು ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಕರ್ನಾಟಕದ ಮ್ತತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:55 pm, Fri, 13 March 26

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us