ಮಂಗಳೂರು: ಹುಲಿವೇಷ ತಂಡದ ಮುಖ್ಯಸ್ಥನ ಬರ್ಬರ ಹತ್ಯೆ, ಆರೋಪಿಗಳು ಠಾಣೆಗೆ ಶರಣು

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನೆಹರು ನಗರ ಜಂಕ್ಷನ್​ನಲ್ಲಿ ಹುಲಿವೇಷ ತಂಡ ಕಲ್ಲೇಗ ಟೈಗರ್ಸ್ ಮುಖ್ಯಸ್ಥನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೊಲೆ ನಂತರ ಮೂವರು ಆರೋಪಿಗಳ ಪೈಕಿ ಇಬ್ಬರು ಆರೋಪಿಗಳು ಪೊಲೀಸ್ ಠಾಣೆಗೆ ಶರಣಾಗಿದ್ದಾರೆ. ಎರಡು ಸಾವಿರ ನೀಡುವ ವಿಚಾರದಲ್ಲಿ ನಡೆದ ಮಾತುಕತೆ ವಿಕೋಪಕ್ಕೆ ತಿರುಗಿ ಕೊಲೆ ನಡೆದಿದೆ ಎಂದು ತಿಳಿದುಬಂದಿದೆ.

ಮಂಗಳೂರು: ಹುಲಿವೇಷ ತಂಡದ ಮುಖ್ಯಸ್ಥನ ಬರ್ಬರ ಹತ್ಯೆ, ಆರೋಪಿಗಳು ಠಾಣೆಗೆ ಶರಣು
ಕೊಲೆಯಾದ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್
Follow us
ಅಶೋಕ್​ ಪೂಜಾರಿ, ಮಂಗಳೂರು
| Updated By: Rakesh Nayak Manchi

Updated on:Nov 07, 2023 | 1:13 PM

ಮಂಗಳೂರು, ನ.7: ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು (Puttur) ತಾಲೂಕಿನ ನೆಹರು ನಗರ ಜಂಕ್ಷನ್​ನಲ್ಲಿ ಹುಲಿವೇಷ ತಂಡ ಕಲ್ಲೇಗ ಟೈಗರ್ಸ್ ಮುಖ್ಯಸ್ಥನನ್ನು ಬರ್ಬರವಾಗಿ ಹತ್ಯೆ (Murder) ಮಾಡಲಾಗಿದೆ. ಪುತ್ತೂರಿನ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ (26) ಹತ್ಯೆಯಾದ ಯುವಕ. ಕೊಲೆ ನಂತರ ಮೂವರು ಆರೋಪಿಗಳ ಪೈಕಿ ಇಬ್ಬರು ಆರೋಪಿಗಳು ಪೊಲೀಸ್ ಠಾಣೆಗೆ ಶರಣಾಗಿದ್ದಾರೆ.

ಸದ್ಯ ಪೊಲೀಸರು ಬನ್ನೂರು ನಿವಾಸಿ ಮನೀಷ್, ಚೇತು, ಮಂಜ, ಕೇಶವ ಎಂಬವರನ್ನು ಬಂಧಿಸಿದ್ದಾರೆ.  ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತ ವಿಚಾರದಲ್ಲಿ ಎರಡು ಸಾವಿರ ನೀಡುವ ಬಗ್ಗೆ ಮಾತುಕತೆ ನಡೆದಿದೆ.

ಇದನ್ನೂ ಓದಿ: ಕೋಲಾರ: ಎರಡು ಕುಟುಂಬಗಳ ಜಗಳ ಕೊಲೆಯಲ್ಲಿ ಅಂತ್ಯ; ಹತ್ಯೆ ಹಿಂದಿನ ಮಾಸ್ಟರ್‌ ಮೈಂಡ್​ಗೆ ಗುಂಡೇಟು

ಈ ವೇಳೆ ಬಸ್ ಚಾಲಕ ಚೇತು ಎಂಬಾತನ ಬೆಂಬಲಿಗ ಹಾಗೂ ಅಕ್ಷಯ್ ನಡುವೆ ತೀವ್ರ ವಾಗ್ವಾದ ನಡೆದಿದೆ. ಹೀಗೆ ಆರಂಭವಾದ ಗಲಾಟೆ ವಿಕೋಪಕ್ಕೆ ತಿರುಗಿದೆ. ಕೊನೆಗೆ ಮೂರಕ್ಕೂ ಅಧಿಕ ಮಂದಿಯ ತಂಡವು ಮಾಣಿ ಮೈಸೂರು ಹೆದ್ದಾರಿಯ ನೆಹರು ನಗರ ಜಂಕ್ಷನ್​ನಲ್ಲಿ ಅಕ್ಷಯ್​ನನ್ನ ಅಟ್ಟಾಡಿಸಿ ತಲವಾರಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ಘಟನೆ ಸಂಬಂಧ ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಠಾಣಾ ಪೊಲೀಸರು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹತ್ಯೆಗೆ ಬೇರೆ ಕಾರಣಗಳು ಇದೆಯಾ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸಲಾಗುತ್ತಿದೆ. ಹುಲಿಕುಣಿತದಲ್ಲಿ ಕಲ್ಲೇಗ ಟೈಗರ್ಸ್ ತಂಡದ ನೇತೃತ್ವವನ್ನು ಅಕ್ಷಯ್ ವಹಿಸಿಕೊಂಡಿದ್ದನು.

ದೂರುದಾರ ವಿಖ್ಯಾತ್ ಹಾಗೂ ಆರೋಪಿ ಚೇತನ್ ಚಲಾಯಿಸುತ್ತಿದ್ದ ಬಸ್ಸಿನ ನಡುವೆ ಅಪಘಾತ ನಡೆದಿ್ತು. ಈ ವಿಚಾರದಲ್ಲಿ ಅಕ್ಷಯ್ ಹಾಗೂ ಆರೋಪಿಗಳಾದ ಮನೀಶ್, ಚೇತನ್ ಜೊತೆ ಫೋನ್ ಮೂಲಕ ಮಾತಿನ ಚಕಮಕಿ ನಡೆದಿತ್ತು. ರಾತ್ರಿ ವೇಳೆ ನೆಹರುನಗರದ ಎಟಿಎಂ ಬಳಿ ಅಕ್ಷಯ್ ಹಾಗೂ ವಿಖ್ಯಾತ್ ನಿಂತಿದ್ದಾಗ ಕಾರಿನಲ್ಲಿ ಬಂದಿದ್ದ ನಾಲ್ವರು ಆರೋಪಿಗಳು ಜಗಳ ಆರಂಭಿಸಿದ್ದಾರೆ. ಈ ವೇಳೆ ತಾವು ತಂದಿದ್ದ ಎರಡು ತಲಾವಾರು ಮೂಲಕ ಅಕ್ಷಯ್​ ಮೇಲೆ ಹಲ್ಲೆ ನಡೆಸಿದ್ದು, ವಿಖ್ಯಾತ್ ತಪ್ಪಿಸಿಕೊಂಡು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:31 am, Tue, 7 November 23

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ