ಮಂಗಳೂರು, ನ.7: ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು (Puttur) ತಾಲೂಕಿನ ನೆಹರು ನಗರ ಜಂಕ್ಷನ್ನಲ್ಲಿ ಹುಲಿವೇಷ ತಂಡ ಕಲ್ಲೇಗ ಟೈಗರ್ಸ್ ಮುಖ್ಯಸ್ಥನನ್ನು ಬರ್ಬರವಾಗಿ ಹತ್ಯೆ (Murder) ಮಾಡಲಾಗಿದೆ. ಪುತ್ತೂರಿನ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ (26) ಹತ್ಯೆಯಾದ ಯುವಕ. ಕೊಲೆ ನಂತರ ಮೂವರು ಆರೋಪಿಗಳ ಪೈಕಿ ಇಬ್ಬರು ಆರೋಪಿಗಳು ಪೊಲೀಸ್ ಠಾಣೆಗೆ ಶರಣಾಗಿದ್ದಾರೆ.
ಸದ್ಯ ಪೊಲೀಸರು ಬನ್ನೂರು ನಿವಾಸಿ ಮನೀಷ್, ಚೇತು, ಮಂಜ, ಕೇಶವ ಎಂಬವರನ್ನು ಬಂಧಿಸಿದ್ದಾರೆ. ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತ ವಿಚಾರದಲ್ಲಿ ಎರಡು ಸಾವಿರ ನೀಡುವ ಬಗ್ಗೆ ಮಾತುಕತೆ ನಡೆದಿದೆ.
ಇದನ್ನೂ ಓದಿ: ಕೋಲಾರ: ಎರಡು ಕುಟುಂಬಗಳ ಜಗಳ ಕೊಲೆಯಲ್ಲಿ ಅಂತ್ಯ; ಹತ್ಯೆ ಹಿಂದಿನ ಮಾಸ್ಟರ್ ಮೈಂಡ್ಗೆ ಗುಂಡೇಟು
ಈ ವೇಳೆ ಬಸ್ ಚಾಲಕ ಚೇತು ಎಂಬಾತನ ಬೆಂಬಲಿಗ ಹಾಗೂ ಅಕ್ಷಯ್ ನಡುವೆ ತೀವ್ರ ವಾಗ್ವಾದ ನಡೆದಿದೆ. ಹೀಗೆ ಆರಂಭವಾದ ಗಲಾಟೆ ವಿಕೋಪಕ್ಕೆ ತಿರುಗಿದೆ. ಕೊನೆಗೆ ಮೂರಕ್ಕೂ ಅಧಿಕ ಮಂದಿಯ ತಂಡವು ಮಾಣಿ ಮೈಸೂರು ಹೆದ್ದಾರಿಯ ನೆಹರು ನಗರ ಜಂಕ್ಷನ್ನಲ್ಲಿ ಅಕ್ಷಯ್ನನ್ನ ಅಟ್ಟಾಡಿಸಿ ತಲವಾರಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.
ಘಟನೆ ಸಂಬಂಧ ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಠಾಣಾ ಪೊಲೀಸರು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹತ್ಯೆಗೆ ಬೇರೆ ಕಾರಣಗಳು ಇದೆಯಾ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸಲಾಗುತ್ತಿದೆ. ಹುಲಿಕುಣಿತದಲ್ಲಿ ಕಲ್ಲೇಗ ಟೈಗರ್ಸ್ ತಂಡದ ನೇತೃತ್ವವನ್ನು ಅಕ್ಷಯ್ ವಹಿಸಿಕೊಂಡಿದ್ದನು.
ದೂರುದಾರ ವಿಖ್ಯಾತ್ ಹಾಗೂ ಆರೋಪಿ ಚೇತನ್ ಚಲಾಯಿಸುತ್ತಿದ್ದ ಬಸ್ಸಿನ ನಡುವೆ ಅಪಘಾತ ನಡೆದಿ್ತು. ಈ ವಿಚಾರದಲ್ಲಿ ಅಕ್ಷಯ್ ಹಾಗೂ ಆರೋಪಿಗಳಾದ ಮನೀಶ್, ಚೇತನ್ ಜೊತೆ ಫೋನ್ ಮೂಲಕ ಮಾತಿನ ಚಕಮಕಿ ನಡೆದಿತ್ತು. ರಾತ್ರಿ ವೇಳೆ ನೆಹರುನಗರದ ಎಟಿಎಂ ಬಳಿ ಅಕ್ಷಯ್ ಹಾಗೂ ವಿಖ್ಯಾತ್ ನಿಂತಿದ್ದಾಗ ಕಾರಿನಲ್ಲಿ ಬಂದಿದ್ದ ನಾಲ್ವರು ಆರೋಪಿಗಳು ಜಗಳ ಆರಂಭಿಸಿದ್ದಾರೆ. ಈ ವೇಳೆ ತಾವು ತಂದಿದ್ದ ಎರಡು ತಲಾವಾರು ಮೂಲಕ ಅಕ್ಷಯ್ ಮೇಲೆ ಹಲ್ಲೆ ನಡೆಸಿದ್ದು, ವಿಖ್ಯಾತ್ ತಪ್ಪಿಸಿಕೊಂಡು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:31 am, Tue, 7 November 23