AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯ್ಯೋ ವಿಧಿಯೇ! ಕೌಟುಂಬಿಕ ಕಲಹದಿಂದ ಬೇಸತ್ತು ವೃದ್ಧ ಸಹೋದರಿಯರು ಆತ್ಮಹತ್ಯೆ

ಕೌಟುಂಬಿಕ ಕಲಹಕ್ಕೆ ಬೇಸತ್ತು ವೃದ್ಧ ಸಹೋದರಿಯರಿಬ್ಬರು ಆತ್ಮಹತ್ಯೆ ಮಾಡಿಕೊಂಡ ಧಾರುಣ ಘಟನೆ ಮಂಗಳೂರಿ(Mangalore)ನ ಕದ್ರಿ ಕಂಬಳ ಪ್ರದೇಶದಲ್ಲಿ ನಡೆದಿದೆ. ಲತಾ ಭಂಡಾರಿ(70) ಹಾಗೂ ಸುಂದರಿ ಶೆಟ್ಟಿ(80) ನೇಣಿಗೆ ಶರಣಾದ ರ್ದುದೈವಿಗಳು.

ಅಯ್ಯೋ ವಿಧಿಯೇ! ಕೌಟುಂಬಿಕ ಕಲಹದಿಂದ ಬೇಸತ್ತು ವೃದ್ಧ ಸಹೋದರಿಯರು ಆತ್ಮಹತ್ಯೆ
ಮೃತ ರ್ದುದೈವಿಗಳು
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: ಕಿರಣ್ ಹನುಮಂತ್​ ಮಾದಾರ್|

Updated on: Oct 03, 2023 | 9:30 PM

Share

ದಕ್ಷಿಣ ಕನ್ನಡ, ಅ.03: ಕೌಟುಂಬಿಕ ಕಲಹಕ್ಕೆ ಬೇಸತ್ತು ವೃದ್ಧ ಸಹೋದರಿಯರಿಬ್ಬರು ಆತ್ಮಹತ್ಯೆ ಮಾಡಿಕೊಂಡ ಧಾರುಣ ಘಟನೆ ಮಂಗಳೂರಿ(Mangalore)ನ ಕದ್ರಿ ಕಂಬಳ ಪ್ರದೇಶದಲ್ಲಿ ನಡೆದಿದೆ. ಲತಾ ಭಂಡಾರಿ(70) ಹಾಗೂ ಸುಂದರಿ ಶೆಟ್ಟಿ(80) ನೇಣಿಗೆ ಶರಣಾದ ರ್ದುದೈವಿಗಳು. ಇನ್ನು ಮೃತ ಲತಾ ಪತಿ ಜಗನ್ನಾಥ ಭಂಡಾರಿ ಕೆಲಸಕ್ಕೆ ತೆರಳಿದ್ದ ವೇಳೆ ಸಹೋದರಿಯರು ಆತ್ಮಹತ್ಯೆಗೆ ಶರಣಾಗಿದ್ದು, ಜಗನ್ನಾಥ ಭಂಡಾರಿ ಅವರು ಮನೆಗೆ ಹಿಂದಿರುಗಿದಾಗ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಸ್ಥಳಕ್ಕೆ ಕದ್ರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೈರೋಲ್ ಹಣ್ಣು ಎಂದು ವಿಷಕಾರಿ ಹಣ್ಣಿನ ಜ್ಯೂಸ್ ಕುಡಿದ ಮಹಿಳೆ ಸಾವು

ದಕ್ಷಿಣ ಕನ್ನಡ: ವಿಷಕಾರಿ ಹಣ್ಣಿನ ಜ್ಯೂಸ್ ಕುಡಿದು ಮಂಗಳೂರು ಜಿಲ್ಲೆಯ ಸುಳ್ಯ ತಾಲೂಕಿನ ಶೇಣಿ‌ ಪ್ರದೇಶದ ಕುಳ್ಳಾಜೆ ನಿವಾಸಿ ಲೀಲಾವತಿ(35) ಸಾವನ್ನಪ್ಪಿದ್ದಾರೆ. ಕಳೆದ ವಾರ ಲೀಲಾವತಿ ತಂದೆ ಮೈರೋಲ್ ಹಣ್ಣಿನ ಜ್ಯೂಸ್​​ ಮಾಡಿದ್ರು, ಲೀಲಾವತಿ ಕೂಡ ಮೈರೋಲ್ ಹಣ್ಣಿನ ಜ್ಯೂಸ್ ಸೇವನೆ ಮಾಡಿದ್ದರು. ಬಳಿಕ ವಾಂತಿ, ಭೇದಿಯಾಗಿ ಸುಳ್ಯ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ತೀವ್ರ ಅನಾರೋಗ್ಯ ಉಂಟಾದ ಹಿನ್ನಲೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸುವಾಗ ಮಾರ್ಗಮಧ್ಯೆದಲ್ಲಿ ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ: ಮಗಳ ಜೊತೆ ಅನೈತಿಕ ಸಂಬಂಧ: ಯುವಕನನ್ನು ಕೊಂದು 24 ಗಂಟೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ತಂದೆ

ಶಾರ್ಟ್​ ಸರ್ಕ್ಯೂಟ್​ನಿಂದ ಕಬ್ಬಿನ ಗದ್ದೆಗೆ ಬೆಂಕಿ

ಕಲಬುರಗಿ: ಜೇವರ್ಗಿ ತಾಲೂಕಿನ ಬಳೂಂಡಗಿ ಗ್ರಾಮದಲ್ಲಿ ಶಾರ್ಟ್​ ಸರ್ಕ್ಯೂಟ್​ನಿಂದ ಕಬ್ಬಿನ ಗದ್ದೆಗೆ ಬೆಂಕಿ ತಗುಲಿ ಬಸವರಾಜ್, ಗುರುನಾಥ್ ಎಂಬುವರಿಗೆ ಸೇರಿದ ಕಬ್ಬಿನ ಗದ್ದೆ ಸಂಪೂರ್ಣ ಬೆಂಕಿಗಾಹುತಿ ಆಗಿದೆ. ಜಮೀನಿನಲ್ಲಿ ಹಾದುಹೋಗಿರುವ ವಿದ್ಯುತ್ ತಂತಿಯಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದೆ. ಇದರಿಂದ ಲಕ್ಷಾಂತರ ಮೌಲ್ಯದ ಬೆಳೆ ಕಳೆದುಕೊಂಡು ರೈತರು ಕಂಗಾಲಾಗಿದ್ದು, ನೆಲೋಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ