ಅಯ್ಯೋ ವಿಧಿಯೇ! ಕೌಟುಂಬಿಕ ಕಲಹದಿಂದ ಬೇಸತ್ತು ವೃದ್ಧ ಸಹೋದರಿಯರು ಆತ್ಮಹತ್ಯೆ

| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 03, 2023 | 9:30 PM

ಕೌಟುಂಬಿಕ ಕಲಹಕ್ಕೆ ಬೇಸತ್ತು ವೃದ್ಧ ಸಹೋದರಿಯರಿಬ್ಬರು ಆತ್ಮಹತ್ಯೆ ಮಾಡಿಕೊಂಡ ಧಾರುಣ ಘಟನೆ ಮಂಗಳೂರಿ(Mangalore)ನ ಕದ್ರಿ ಕಂಬಳ ಪ್ರದೇಶದಲ್ಲಿ ನಡೆದಿದೆ. ಲತಾ ಭಂಡಾರಿ(70) ಹಾಗೂ ಸುಂದರಿ ಶೆಟ್ಟಿ(80) ನೇಣಿಗೆ ಶರಣಾದ ರ್ದುದೈವಿಗಳು.

ಅಯ್ಯೋ ವಿಧಿಯೇ! ಕೌಟುಂಬಿಕ ಕಲಹದಿಂದ ಬೇಸತ್ತು ವೃದ್ಧ ಸಹೋದರಿಯರು ಆತ್ಮಹತ್ಯೆ
ಮೃತ ರ್ದುದೈವಿಗಳು
Follow us on

ದಕ್ಷಿಣ ಕನ್ನಡ, ಅ.03: ಕೌಟುಂಬಿಕ ಕಲಹಕ್ಕೆ ಬೇಸತ್ತು ವೃದ್ಧ ಸಹೋದರಿಯರಿಬ್ಬರು ಆತ್ಮಹತ್ಯೆ ಮಾಡಿಕೊಂಡ ಧಾರುಣ ಘಟನೆ ಮಂಗಳೂರಿ(Mangalore)ನ ಕದ್ರಿ ಕಂಬಳ ಪ್ರದೇಶದಲ್ಲಿ ನಡೆದಿದೆ. ಲತಾ ಭಂಡಾರಿ(70) ಹಾಗೂ ಸುಂದರಿ ಶೆಟ್ಟಿ(80) ನೇಣಿಗೆ ಶರಣಾದ ರ್ದುದೈವಿಗಳು. ಇನ್ನು ಮೃತ ಲತಾ ಪತಿ ಜಗನ್ನಾಥ ಭಂಡಾರಿ ಕೆಲಸಕ್ಕೆ ತೆರಳಿದ್ದ ವೇಳೆ ಸಹೋದರಿಯರು ಆತ್ಮಹತ್ಯೆಗೆ ಶರಣಾಗಿದ್ದು, ಜಗನ್ನಾಥ ಭಂಡಾರಿ ಅವರು ಮನೆಗೆ ಹಿಂದಿರುಗಿದಾಗ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಸ್ಥಳಕ್ಕೆ ಕದ್ರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೈರೋಲ್ ಹಣ್ಣು ಎಂದು ವಿಷಕಾರಿ ಹಣ್ಣಿನ ಜ್ಯೂಸ್ ಕುಡಿದ ಮಹಿಳೆ ಸಾವು

ದಕ್ಷಿಣ ಕನ್ನಡ: ವಿಷಕಾರಿ ಹಣ್ಣಿನ ಜ್ಯೂಸ್ ಕುಡಿದು ಮಂಗಳೂರು ಜಿಲ್ಲೆಯ ಸುಳ್ಯ ತಾಲೂಕಿನ ಶೇಣಿ‌ ಪ್ರದೇಶದ ಕುಳ್ಳಾಜೆ ನಿವಾಸಿ ಲೀಲಾವತಿ(35) ಸಾವನ್ನಪ್ಪಿದ್ದಾರೆ. ಕಳೆದ ವಾರ ಲೀಲಾವತಿ ತಂದೆ ಮೈರೋಲ್ ಹಣ್ಣಿನ ಜ್ಯೂಸ್​​ ಮಾಡಿದ್ರು, ಲೀಲಾವತಿ ಕೂಡ ಮೈರೋಲ್ ಹಣ್ಣಿನ ಜ್ಯೂಸ್ ಸೇವನೆ ಮಾಡಿದ್ದರು. ಬಳಿಕ ವಾಂತಿ, ಭೇದಿಯಾಗಿ ಸುಳ್ಯ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ತೀವ್ರ ಅನಾರೋಗ್ಯ ಉಂಟಾದ ಹಿನ್ನಲೆ
ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸುವಾಗ ಮಾರ್ಗಮಧ್ಯೆದಲ್ಲಿ ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ: ಮಗಳ ಜೊತೆ ಅನೈತಿಕ ಸಂಬಂಧ: ಯುವಕನನ್ನು ಕೊಂದು 24 ಗಂಟೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ತಂದೆ

ಶಾರ್ಟ್​ ಸರ್ಕ್ಯೂಟ್​ನಿಂದ ಕಬ್ಬಿನ ಗದ್ದೆಗೆ ಬೆಂಕಿ

ಕಲಬುರಗಿ: ಜೇವರ್ಗಿ ತಾಲೂಕಿನ ಬಳೂಂಡಗಿ ಗ್ರಾಮದಲ್ಲಿ ಶಾರ್ಟ್​ ಸರ್ಕ್ಯೂಟ್​ನಿಂದ ಕಬ್ಬಿನ ಗದ್ದೆಗೆ ಬೆಂಕಿ ತಗುಲಿ ಬಸವರಾಜ್, ಗುರುನಾಥ್ ಎಂಬುವರಿಗೆ ಸೇರಿದ ಕಬ್ಬಿನ ಗದ್ದೆ ಸಂಪೂರ್ಣ ಬೆಂಕಿಗಾಹುತಿ ಆಗಿದೆ. ಜಮೀನಿನಲ್ಲಿ ಹಾದುಹೋಗಿರುವ ವಿದ್ಯುತ್ ತಂತಿಯಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದೆ. ಇದರಿಂದ ಲಕ್ಷಾಂತರ ಮೌಲ್ಯದ ಬೆಳೆ ಕಳೆದುಕೊಂಡು ರೈತರು ಕಂಗಾಲಾಗಿದ್ದು, ನೆಲೋಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ