AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಹಾಸ್ ಹತ್ಯೆ ಪ್ರಕರಣದಲ್ಲಿ ಬಂಧಿತ ಇಬ್ಬರು ಹಿಂದೂಗಳು: ಅಣ್ಣನ ಹತ್ಯೆ ಪ್ರತೀಕಾರಕ್ಕೆ ಹಿಂದೂಗಳನ್ನು ಬಳಸಿದ ಫಾಜಿಲ್ ತಮ್ಮ

ಮಂಗಳೂರಿನ ರೌಡಿಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ದೊಡ್ಡ ತಿರುವು ದೊರೆತಿದೆ. ಪ್ರಕರಣಕ್ಕೆ ಸಂಬಂಧಿಸಿದ ಈವರೆಗೆ ಬಂಧಿಸಲಾಗಿರುವ 8 ಮಂದಿಯ ಪೈಕಿ ಇಬ್ಬರು ಹಿಂದುಗಳು ಎಂಬುದು ಗೊತ್ತಾಗಿದೆ. ಆದರೆ, ಈ ಹಿಂದೆ ಹತ್ಯೆಯಾಗಿದ್ದ ಫಾಜಿಲ್ ತಮ್ಮ ಸುಹಾಸ್ ಹತ್ಯೆಗೆ ಹಣ ನೀಡಿದ್ದೂ ಬಯಲಾಗಿದೆ. ಇದರೊಂದಿಗೆ, ಅಣ್ಣನ ಹತ್ಯೆಗೆ ಪ್ರತೀಕಾರಕ್ಕೆ ಹಿಂದೂಗಳನ್ನೇ ಆದಿಲ್ ಬಳಸಿಕೊಂಡನೇ ಎಂಬ ಪ್ರಶ್ನೆ ಉದ್ಭವಿಸಿದೆ. ಈ ಬಗ್ಗೆ ಮಂಗಳೂರು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.

ಸುಹಾಸ್ ಹತ್ಯೆ ಪ್ರಕರಣದಲ್ಲಿ ಬಂಧಿತ ಇಬ್ಬರು ಹಿಂದೂಗಳು: ಅಣ್ಣನ ಹತ್ಯೆ ಪ್ರತೀಕಾರಕ್ಕೆ ಹಿಂದೂಗಳನ್ನು ಬಳಸಿದ ಫಾಜಿಲ್ ತಮ್ಮ
ಬಂಧಿತರು
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:May 03, 2025 | 2:11 PM

Share

ಮಂಗಳೂರು, ಮೇ 03: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದ್ದ, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಕೊಲೆ ಪ್ರಕರಣ ಸಂಬಂಧ ಮಂಗಳೂರು ಪೊಲೀಸ್ ಆಯುಕ್ತರು ಮಹತ್ವದ ಹೇಳಿಕೆ ನೀಡಿದ್ದಾರೆ. ಗೃಹ ಸಚಿವ ಪರಮೇಶ್ವರ್ ಜೊತೆ ಸಭೆ ನಡೆಸಿದ ನಂತರ ಮಾತನಾಡಿದ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ (Anupam Agarwal), ಘಟನೆ ಸಂಬಂಧ ಎಂಟು ಮಂದಿಯನ್ನು ಬಂಧಿಸಲಾಗಿದೆ ಎಂದಿದ್ದು, ಬಂಧಿತರ ವಿವರ ನೀಡಿದ್ದಾರೆ. ಈ ಪೈಕಿ ಇಬ್ಬರು ಹಿಂದುಗಳು ಇರುವುದು ದೃಢಪಟ್ಟಿದೆ. ಆದರೆ, ಈ ಹಿಂದೆ ಕೊಲೆಯಾಗಿದ್ದ ಫಾಜಿಲ್ ತಮ್ಮ ಆದಿಲ್ ಸುಹಾಸ್ ಕೊಲೆಗೆ ಸಂಚು ಹೂಡಿದ್ದು, 5 ಲಕ್ಷ ಫಂಡಿಂಗ್ ಮಾಡಿದ್ದಾಗಿಯೂ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಇದರೊಂದಿಗೆ, ಅಣ್ಣನ ಹತ್ಯೆ ಪ್ರತೀಕಾರಕ್ಕೆ ಆದಿಲ್ ಹಿಂದೂಗಳನ್ನೂ ಬಳಸಿಕೊಂಡಿರುವುದು ಬಯಲಾದಂತಾಗಿದೆ.

ಯಾರೆಲ್ಲಾ ಅರೆಸ್ಟ್​?

ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್​ ಹೇಳಿರುವಂತೆ ಬಂಧಿತ 8 ಆರೋಪಿಗಳ ಪೈಕಿ ಇಬ್ಬರು ಹಿಂದೂಗಳಿದ್ದಾರೆ. ಅವರ ವಿವರನ್ನು ನೀಡಿದ್ದಾರೆ. ಅಬ್ದುಲ್ ಸಫ್ವಾನ್ (29), ನಿಯಾಜ್ (28), ಕಲಂದರ್ ಶಾಫಿ (31), ಮೊಹಮ್ಮದ್ ಮುಝಮ್ಮಿಲ್ (32), ರಂಜಿತ್ (19), ನಾಗರಾಜ್ (20), ಮೊಹಮ್ಮದ್ ರಿಜ್ವಾನ್ ​(28) ಮತ್ತು ಆದಿಲ್ ಮೆಹರೂಫ್ ಬಂಧಿತರು.

ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಹೇಳಿದ್ದೇನು?

ಸುಹಾಸ್​ ಶೆಟ್ಟಿ ಹತ್ಯೆ ಪ್ರಕರಣದಲ್ಲಿ 8 ಆರೋಪಿಗಳನ್ನು ಬಂಧಿಸಲಾಗಿದೆ. ಸಫ್ವಾನ್ ಪ್ರಮುಖ ಆರೋಪಿ. 2023ರಲ್ಲಿ ಅಬ್ದುಲ್ ಸಫ್ವಾನ್​ ಮೇಲೆ ಮಾರಣಾಂತಿಕ ಹಲ್ಲೆ ಆಗಿತ್ತು. ಸಫ್ವಾನ್​​ಗೆ ಸುಹಾಸ್ ಶೆಟ್ಟಿ ಕೊಲೆ ಮಾಡುವ ಆತಂಕ ಇತ್ತು. ಹಾಗಾಗಿ ಸುಹಾಸ್ ಶೆಟ್ಟಿಯನ್ನು ಕೊಲೆ ಮಾಡಲು ತೀರ್ಮಾನಿಸಿದ್ದರು. ಅದಕ್ಕಾಗಿ ಫಾಜಿಲ್​ ತಮ್ಮ ಆದಿಲ್ ಮೆಹರೂಫ್​ ನನ್ನು ಸಂಪರ್ಕಿಸಿ ಕೊಲೆ ಮಾಡಲು ತೀರ್ಮಾನಿಸಿದ್ದರು ಎಂದು ಹೇಳಿದ್ದಾರೆ.

ಇದನ್ನೂ ಓದಿ
Image
ಕರಾವಳಿಗೆ ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್: ಪರಮೇಶ್ವರ್
Image
ಸುಹಾಸ್ ಹತ್ಯೆ: ಫಿನೀಶ್, ರಿವೇಂಜ್ ಪೋಸ್ಟ್​​ಗಳ ವಿರುದ್ಧ 12 ಪ್ರಕರಣ ದಾಖಲು
Image
ಸುಹಾಸ್ ಶೆಟ್ಟಿ ಕೊಲೆ ಕೇಸ್‌: 8 ಜನ ಶಂಕಿತರು ವಶಕ್ಕೆ, ಪೊಲೀಸರಿಂದ ವಿಚಾರಣೆ
Image
ಸುಹಾಸ್ ಹತ್ಯೆಕೋರರನ್ನು ಸುಮ್ಮನೆ ಬಿಡುವ ಮಾನಸಿಕತೆ ಯಾರಲ್ಲೂ ಇಲ್ಲ: CT ರವಿ

ಇದನ್ನೂ ಓದಿ: ಕರಾವಳಿಗೆ ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್, ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ಧವೂ ಕ್ರಮ: ಪರಮೇಶ್ವರ್

ಸುಹಾಸ್ ಕೊಲೆ ಮಾಡಲು ಸಫ್ವಾನ್​ ತಂಡಕ್ಕೆ ಆದಿಲ್ 5 ಲಕ್ಷ ರೂ. ನೀಡಿದ್ದ. ಈ 5 ಲಕ್ಷ ರೂಪಾಯಿಗಾಗಿ ಆದಿಲ್ ಫಂಡಿಂಗ್ ಮಾಡಿದ್ದ. ನಿಯಾಜ್ ಸ್ನೇಹಿತರಾದ ನಾಗರಾಜ್ ಮತ್ತು ರಂಜಿನ್ ಸಂಪರ್ಕ ಮಾಡುತ್ತಾರೆ. ಈ ಇಬ್ಬರು ಸಫ್ವಾನ್ ಮನೆಯಲ್ಲಿ ಎರಡು ದಿನಗಳ ಕಾಲ ವಾಸವಿದ್ದರು. ಮೇ 1ರಂದು ಸುಹಾಸ್ ಚಲನವಲನ ಗಮನಿಸಿ ಕೊಲೆ ಮಾಡಿದ್ದಾರೆ ಎಂದು ಅನುಪಮ್ ಅಗರ್ವಾಲ್ ತಿಳಿಸಿದರು.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಿಷ್ಟು 

ಇನ್ನು ಪೊಲೀಸ್ ಅಧಿಕಾರಿಗಳೊಂದಿಗಿನ ಸಭೆ ಬಳಿಕ ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್​​, ಕೋಮು ಸಂಘರ್ಷ ತಡೆಗೆ ಐಜಿ ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ಸ್ಥಾಪಿಸಲಾಗುತ್ತೆ. ಪ್ರಚೋದನಕಾರಿ ಹೇಳಿಕೆ ನೀಡುವವರ ವಿರುದ್ಧವೂ ಕಠಿಣ ಕ್ರಮಕೈಗೊಳ್ಳುವುದಾಗಿ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:21 pm, Sat, 3 May 25

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ