AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಬಿಜೆಪಿ ವಿಜಯೋತ್ಸವ ಮುಗಿಸಿ ಮನೆಗೆ ಹೋಗುತ್ತಿದ್ದ ಇಬ್ಬರಿಗೆ ಚಾಕು ಇರಿತ, ಮೂವರು ವಶಕ್ಕೆ

ಮೂವರು ಬಿಜೆಪಿ ಕಾರ್ಯಕರ್ತರು ಬೋಳಿಯಾರ್ ಮಸೀದಿಯ ಮುಂದೆ ಹೋಗುವಾಗ ಬಿಜೆಪಿ ಪರ ಘೋಷಣೆಗಳನ್ನು ಕೂಗಿದ್ದಾರೆ ಎಂದು ಹೇಳಲಾಗುತ್ತಿದ್ದು ಈ ವೇಳೆ ಬೈಕ್‌ಗಳಲ್ಲಿ 20-25 ಮುಸ್ಲಿಂ ಯುವಕರ ತಂಡ ಅವರನ್ನು ಹಿಂಬಾಲಿಸಿ ಬಂದು ಬೋಳಿಯಾರ್ ಬಾರ್‌ ಬಳಿ ವಾಗ್ವಾದ ನಡೆಸಿ ಥಳಿಸಿದ್ದಾರೆ. ಇದರಲ್ಲಿ ಇಬ್ಬರಿಗೆ ಚೂರಿಯಿಂದ ಇರಿಯಲಾಗಿದೆ ಎಂದು ಹೇಳಲಾಗುತ್ತಿದೆ.

ಮಂಗಳೂರು: ಬಿಜೆಪಿ ವಿಜಯೋತ್ಸವ ಮುಗಿಸಿ ಮನೆಗೆ ಹೋಗುತ್ತಿದ್ದ ಇಬ್ಬರಿಗೆ ಚಾಕು ಇರಿತ, ಮೂವರು ವಶಕ್ಕೆ
ಸಾಂದರ್ಭಿಕ ಚಿತ್ರ
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on:Jun 10, 2024 | 11:47 AM

Share

ಮಂಗಳೂರು, ಜೂನ್.10: ಮಂಗಳೂರಿನಲ್ಲಿ (Mangaluru) ಚುನಾವಣೋತ್ತರ ಹಿಂಸಾಚಾರ ಮುಂದುವರೆದಿದೆ. ನಿನ್ನೆ ರಾತ್ರಿ ಬಿಜೆಪಿ ವಿಜಯೋತ್ಸವ ವೇಳೆ ಅನ್ಯಕೋಮಿಯ ಗುಂಪೊಂದು ಇಬ್ಬರಿಗೆ ಚಾಕು ಇರಿದಿದ್ದು ಓರ್ವನ ಮೇಲೆ ದಾಳಿ ನಡೆಸಿದ್ದಾರೆ. ಈ ಘಟನೆ ಸಂಬಂಧ ಕೊಣಾಜೆ ಠಾಣೆ ಪೊಲೀಸರು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಯುತ್ತಿದ್ದಾರೆ. ಹರೀಶ್(41), ನಂದಕುಮಾರ್(24)ಗೆ ಚಾಕು ಇರಿಯಲಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮತ್ತೋರ್ವ ಕೃಷ್ಣ ಕುಮಾರ್ ಎಂಬಾತನ ಮೇಲೆ ಹಿಗ್ಗಾಮುಗ್ಗಾ ಹಲ್ಲೆ (Assault) ನಡೆಸಲಾಗಿದೆ.

ಲೋಕಸಭಾ ಚುನಾವಣೆಯ ಫಲಿತಾಂಶದ ದಿನ ಸಂಭ್ರಮಕ್ಕಾಗಿ ಪಟಾಕಿ ಸಿಡಿಸಿದಕ್ಕೆ ಗಲಾಟೆಯಾಗಿ ಮರು ದಿನ ಬಜರಂಗದಳ ಕಾರ್ಯಕರ್ತನಿಗೆ ಕಾಂಗ್ರೆಸ್ ಕಾರ್ಯಕರ್ತನಿಂದ ಹಲ್ಲೆ ನಡೆದಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕುಂಪಲ ಎಂಬಲ್ಲಿ ನಡೆದಿತ್ತು. ಆದರೆ ನಿನ್ನೆ ಕೂಡ ಚುನಾವಣೋತ್ತರ ಹಿಂಸಾಚಾರ ಘಟನೆ ಮರುಕಳಿಸಿದೆ. ನಿನ್ನೆ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಿಯಾರು ಎಂಬಲ್ಲಿ ಬಿಜೆಪಿ ವಿಜಯೋತ್ಸವ ಮೆರವಣಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಇದನ್ನೂ ಓದಿ: ಚುನಾವಣೆ ಫಲಿತಾಂಶದ ಬಳಿಕ ಪಟಾಕಿ ಸಿಡಿಸಿದ್ದಕ್ಕೆ ಬಜರಂಗದಳ ಕಾರ್ಯಕರ್ತನ ಮೇಲೆ‌ ಕಾಂಗ್ರೆಸ್ ಕಾರ್ಯಕರ್ತನಿಂದ ಹಲ್ಲೆ ಆರೋಪ

ವಿಜಯೋತ್ಸವ ಮುಗಿಸಿ ಬೋಳಿಯಾರು ಪೇಟೆಯಲ್ಲಿ ನಿಂತಿದ್ದ ಸುರೇಶ್, ನಂದ ಕುಮಾರ್​ ಹಾಗೂ ಕೃಷ್ಣ ಕುಮಾರ್ ಮೇಲೆ ಅಪರಿಚಿತ ದುಷ್ಕರ್ಮಿಗಳ ತಂಡ ಏಕಾಏಕಿ ದಾಳಿ ನಡೆಸಿದೆ. ಈ ಗಲಾಟೆಯಲ್ಲಿ ಇಬ್ಬರಿಗೆ ಚಾಕು ಇರಿಯಲಾಗಿದೆ. ಸದ್ಯ ಇಬ್ಬರಿಗೂ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮತ್ತೊಂದೆಡೆ ಸಿಸಿಟಿವಿ ದೃಶ್ಯ ಆಧರಿಸಿ ಪೊಲೀಸರು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಇನ್ನೂ ಹಲವರಿಗಾಗಿ ಪೊಲೀಸರು ಬಲೆಬೀಸಿದ್ದಾರೆ.

ಕೊಣಾಜೆ ಠಾಣಾ ವ್ಯಾಪ್ತಿಯ ಬೊಳಿಯಾರ್ ಬಾರ್‌ನ ಮುಂಭಾಗದಲ್ಲಿ ಚಾಕು ಇರಿತ ನಡೆದಿದೆ. ಮೂವರು ಬಿಜೆಪಿ ಕಾರ್ಯಕರ್ತರು ಬೋಳಿಯಾರ್ ಮಸೀದಿಯ ಮುಂದೆ ಹೋಗುವಾಗ ಬಿಜೆಪಿ ಪರ ಘೋಷಣೆಗಳನ್ನು ಕೂಗಿದ್ದಾರೆ ಎಂದು ಹೇಳಲಾಗುತ್ತಿದ್ದು ಈ ವೇಳೆ ಬೈಕ್‌ಗಳಲ್ಲಿ 20-25 ಮುಸ್ಲಿಂ ಯುವಕರ ತಂಡ ಅವರನ್ನು ಹಿಂಬಾಲಿಸಿ ಬಂದು ಬೋಳಿಯಾರ್ ಬಾರ್‌ ಬಳಿ ವಾಗ್ವಾದ ನಡೆಸಿ ಥಳಿಸಿದ್ದಾರೆ. ಇದರಲ್ಲಿ ಇಬ್ಬರಿಗೆ ಚೂರಿಯಿಂದ ಇರಿಯಲಾಗಿದೆ ಎಂದು ಹೇಳಲಾಗುತ್ತಿದೆ.

ಬೋಳಿಯಾರ್​ನಲ್ಲಿ ಪೊಲೀಸ್ ಭದ್ರತೆ

ಇನ್ನು ಘಟನೆ ಬಳಿಕ ಬೋಳಿಯಾರ್​ನಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಮೂರು ಕೆಎಸ್​ಆರ್​ಪಿ ತುಕಡಿ ಸೇರಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಸದ್ಯ ಸಮಾಧಾನ್ ಬಾರ್ ನ ಸಿಸಿಟಿವಿ ವಶಕ್ಕೆ ಪಡೆದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಬಾರ್ ಮುಂಭಾಗ ಇರೋ ಇರಿತಕ್ಕೊಳಗಾದ ಹರೀಶ್ ಗೆ ಸೇರಿದ ಆಕ್ಟಿವ್ ಹೋಂಡಾ

ವಿಜಯೋತ್ಸವ ಮುಗಿಸಿ ಮನೆಗೆ ವಾಪಾಸ್ ಆಗ್ತಿದ್ದ ಹರೀಶ್ ಮತ್ತು ನಂದಕುಮಾರ್ ಮೇಲೆ 25ಕ್ಕೂ ಅಧಿಕ ಜನರಿಂದ ದಾಳಿ ನಡೆದಿತ್ತು. ಹರೀಶ್ ಆಕ್ಟಿವಾದಲ್ಲಿ ತಪ್ಪಿಸಿಕೊಂಡು ಬಾರ್ ಬಳಿ ಬಂದಿದ್ದ ಅದರೂ ಬಾರ್​ನ ಎದುರು ಅಡ್ಡ ಗಟ್ಟಿ ಚೂರಿ ಇರಿದು ಪರಾರಿಯಾಗಿದ್ದಾರೆ. ತಕ್ಷಣ ಸ್ಥಳದಲ್ಲಿದ್ದವರು ಆಸ್ಪತ್ರೆಗೆ ಸೇರಿಸಿದ ಪರಿಣಾಮ ಯುವಕರು ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:11 am, Mon, 10 June 24

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ