AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳ್ತಂಗಡಿ ಬಿಜೆಪಿ ಶಾಸಕನ ವಿಜಯೋತ್ಸವದಲ್ಲಿ ಭಾಗಿಯಾಗಿದ್ದ ಗ್ರಾಮ ಪಂಚಾಯತ್​ ಸಿಬ್ಬಂದಿ ಅಮಾನತು

ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಉಜಿರೆ ಗ್ರಾಮ ಪಂಚಾಯಿತಿ ಸಿಬ್ಬಂದಿಯನ್ನು ಅಮಾನತುಗೊಳಿಸಿ ಪಿಡಿಓ ಆದೇಶ ಹೊರಡಿಸಿದ್ದಾರೆ.

ಬೆಳ್ತಂಗಡಿ ಬಿಜೆಪಿ ಶಾಸಕನ ವಿಜಯೋತ್ಸವದಲ್ಲಿ ಭಾಗಿಯಾಗಿದ್ದ ಗ್ರಾಮ ಪಂಚಾಯತ್​ ಸಿಬ್ಬಂದಿ ಅಮಾನತು
ಅಮಾನತಾದ ಗ್ರಾಮ ಪಂಚಾಯತ್​ ಸದಸ್ಯ ನಾಗೇಶ್​​
ವಿವೇಕ ಬಿರಾದಾರ
|

Updated on:May 26, 2023 | 2:42 PM

Share

ಮಂಗಳೂರು: ರಾಜ್ಯ ವಿಧಾಸನಭೆ ಚುನಾವಣೆ (Karnataka Assembly Election) ಮುಗಿದು 10 ದಿನ ಕಳೆದಿದ್ದು, ಗೆದ್ದ ನಾಯಕರು ವಿಜಯೋತ್ಸವ ಆಚರಿಸುತ್ತಿದ್ದಾರೆ. ಇದೆ ರೀತಿ ಬೆಳ್ತಂಗಡಿ (Belthangady) ಬಿಜೆಪಿ (BJP) ಶಾಸಕ ಹರೀಶ್ ಪೂಂಜಾ (Harish Poonja) ಅವರ ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಉಜಿರೆಯ ಗ್ರಾಮ ಪಂಚಾಯಿತಿ ಸಿಬ್ಬಂದಿಯನ್ನು ಅಮಾನತುಗೊಳಿಸಿ ಪಿಡಿಓ ಆದೇಶ ಹೊರಡಿಸಿದ್ದಾರೆ. ನಾಗೇಶ್ ಅಮಾನತಾದ ಉಜಿರೆ ಗ್ರಾಮ ಪಂಚಾಯತ್ ಸಿಬ್ಬಂದಿ. ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಚುನಾವಣಾ ಪ್ರಚಾರ ಹಾಗೂ ವಿಜಯೋತ್ಸವದಲ್ಲಿ ಪಂಚಾಯಿತಿ​​ ಸಿಬ್ಬಂದಿ ನಾಗೇಶ್ ಬಿಜೆಪಿ ಬಾವುಟ ಹಿಡಿದು ತಿರುಗುವ ವಿಡಿಯೋ ವೈರಲ್ ಆಗಿತ್ತು. ಈ ಹಿನ್ನೆಲೆ ಸೇವೆಯಿಂದ ಅಮಾನತು ಮಾಡಿ ಪಿಡಿಓ ಪ್ರಕಾಶ್ ಶೆಟ್ಟಿ ನೊಚ್ಚ ಆದೇಶ ಹೊರಡಿಸಿದ್ದಾರೆ.

ಹರೀಶ್ ಪೂಂಜಾ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಮುಂದಾದ ಕಾಂಗ್ರೆಸ್​

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರನ್ನು ಕೊಲೆ ಮಾಡಿದ್ದಾರೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಕಾಂಗ್ರೆಸ್​​ ನಿರ್ಧರಿಸಿತ್ತು. ಇದೇ ತಿಂಗಳ 22ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದ ಬಿಜೆಪಿ ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಹರೀಶ್ ಪೂಂಜಾ ಅವರು, 24 ಹಿಂದೂ ಕಾರ್ಯಕರ್ತರನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಹತ್ಯೆ ಮಾಡಿದ್ದಾರೆಂದು ತುಳುವಿನಲ್ಲಿ‌ ಹೇಳಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಕೂಡ ವೈರಲ್​ ಆಗಿತ್ತು.

ಇದನ್ನೂ ಓದಿ : ಕರಾವಳಿಯಿಂದ ಗೆದ್ದಿದ್ದು ಇಬ್ಬರೇ, ಒಬ್ಬರು ಸ್ಪೀಕರಾದರೆ ಮತ್ತೊಬ್ಬರು ಹೊಸಬರು; ಇನ್ಯಾರಿಗೆ ಸಚಿವ ಸ್ಥಾನ?

ಮಹಿಳಾ ಕಾಂಗ್ರೆಸ್​ ಕಾರ್ಯಕರ್ತೆ ನಮಿತಾ ಪೂಜಾರಿ ನೀಡಿದ ದೂರಿನ ಆಧಾರದ ಮೇಲೆ ಬುಧವಾರ ಬೆಳ್ತಂಗಡಿ ಪೊಲೀಸ್​​ ಠಾಣೆಯಲ್ಲಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್​ಐಆರ್​ ಕೂಡ ದಾಖಲಾಗಿತ್ತು.

ಹರೀಶ್ ಪೂಂಜಾ ಚುನಾವಣೆ ಗೆಲ್ಲಲು ಹಣ ಹಂಚಿದ್ದಾರೆ: ಹರೀಶ್ ಕುಮಾರ್​

ಈ ಕುರಿತಾಗಿ ನಗರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಹರೀಶ್ ಕುಮಾರ್​ ಪ್ರತಿಕ್ರಿಯೆ ನೀಡಿದ್ದು, ಹರೀಶ್ ಪೂಂಜಾ ಚುನಾವಣೆ ಗೆಲ್ಲಲು 40% ಕಮಿಷನ್ ಹಣ ಹಂಚಿದ್ದಾರೆ. ಬೆಳ್ತಂಗಡಿ ಕ್ಷೇತ್ರದಲ್ಲಿ ಗೆಲ್ಲಲು ಹರೀಶ್ ಪೂಂಜಾ ಹಣದ ಹೊಳೆ ಹರಿಸಿದ್ದಾರೆ. ಸುಮಾರು 30ರಿಂದ 40 ಕೋಟಿ ಹಣ ಖರ್ಚು ಮಾಡಿ ಚುನಾವಣೆ ಗೆದ್ದಿದ್ದಾರೆ ಎಂದು ಆರೋಪ ಮಾಡಿದ್ದರು.

ಚುನಾವಣೆ ಸಂದರ್ಭದಲ್ಲಿ ಬೆಳ್ತಂಗಡಿ ಪೊಲೀಸರನ್ನು ಪೂಂಜಾ ಬುಕ್ ಮಾಡಿದ್ದರು. ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ. ಈಗ ನಮ್ಮ ಸರ್ಕಾರ ಇರುವುದರಿಂದ ಪೂಂಜಾ ವಿರುದ್ಧ ತನಿಖೆ ನಡೆಸುತ್ತೇವೆ ಎಂದು ಕಿಡಿಕಾರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:37 pm, Fri, 26 May 23

ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್
ಸುಮ್ಮನೆ ನಿಂತಿದ್ದ ಅಂಪೈರ್​ ತಲೆಗೆ ಗಾಯ ಮಾಡಿದ ಪಾಕ್ ಆಟಗಾರ; ವಿಡಿಯೋ
ಸುಮ್ಮನೆ ನಿಂತಿದ್ದ ಅಂಪೈರ್​ ತಲೆಗೆ ಗಾಯ ಮಾಡಿದ ಪಾಕ್ ಆಟಗಾರ; ವಿಡಿಯೋ
ರಸ್ತೆ ಗುಂಡಿ, ಟಿವಿ9 ರಿಯಾಲಿಟಿ ಚೆಕ್​ನಲ್ಲಿ ಮತ್ತಷ್ಟು ಅವ್ಯವಸ್ಥೆ ಬಯಲು
ರಸ್ತೆ ಗುಂಡಿ, ಟಿವಿ9 ರಿಯಾಲಿಟಿ ಚೆಕ್​ನಲ್ಲಿ ಮತ್ತಷ್ಟು ಅವ್ಯವಸ್ಥೆ ಬಯಲು
ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸುಪ್ರೀಂಗೆ ಅರ್ಜಿ
ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸುಪ್ರೀಂಗೆ ಅರ್ಜಿ