AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ​ಗಿರಿ: ಹಿಂದೂ ವಿದ್ಯಾರ್ಥಿನಿಯರ ಜತೆ ಜಾತ್ರೆಗೆ ಬಂದಿದ್ದ ಮುಸ್ಲಿಂ ವಿದ್ಯಾರ್ಥಿ ಮೇಲೆ ಹಲ್ಲೆ

ಉಜಿರೆಯ ಜಾತ್ರೆಯಲ್ಲಿ ಹಿಂದೂ ಸ್ನೇಹಿತೆಯರೊಂದಿಗೆ ಬಂದ 17 ವರ್ಷದ ಮುಸ್ಲಿಂ ಬಾಲಕನ ಮೇಲೆ ಬಜರಂಗದಳದ ಕಾರ್ಯಕರ್ತರು ಹಲ್ಲೆ ನಡೆಸಿ, ಅಪಹರಿಸಿರುವ ಘಟನೆ ನಡೆದಿದೆ. "ಹಿಂದೂ ಹುಡುಗಿಯರನ್ನು ಲಾಡ್ಜ್‌ಗೆ ಕರೆದೊಯ್ಯುತ್ತಿದ್ದೀಯಾ?" ಎಂದು ಪ್ರಶ್ನಿಸಿ ಬಾಲಕನಿಗೆ ಹಲ್ಲೆ ಮಾಡಿ, ವಿಡಿಯೋ ರೆಕಾರ್ಡ್ ಮಾಡಿಸಿದ್ದಾರೆ. ಸಂತ್ರಸ್ತನ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿದ್ದು, ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿದ್ದಾರೆ. ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಸ್‌ಪಿ ಎಚ್ಚರಿಸಿದ್ದಾರೆ.

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ​ಗಿರಿ: ಹಿಂದೂ ವಿದ್ಯಾರ್ಥಿನಿಯರ ಜತೆ ಜಾತ್ರೆಗೆ ಬಂದಿದ್ದ ಮುಸ್ಲಿಂ ವಿದ್ಯಾರ್ಥಿ ಮೇಲೆ ಹಲ್ಲೆ
ನೈತಿಕ ಪೊಲೀಸ್​​ ಗಿರಿ
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on:Mar 19, 2026 | 12:53 PM

Share

ಮಂಗಳೂರು, ಮಾ.19: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಜಾತ್ರೆಯ ಸಂಭ್ರಮದ ನಡುವೆಯೇ ಅಹಿತಕರ ಘಟನೆಯೊಂದು ನಡೆದಿದೆ. ಹಿಂದೂ ಸ್ನೇಹಿತೆಯರ ಜೊತೆ ಜಾತ್ರೆ ನೋಡಲು ಬಂದಿದ್ದ 17 ವರ್ಷದ ಮುಸ್ಲಿಂ ಬಾಲಕನ ಮೇಲೆ ಬಜರಂಗದಳದ ಕಾರ್ಯಕರ್ತರ ಗುಂಪೊಂದು ಹಲ್ಲೆ ನಡೆಸಿ, ಅಪಹರಿಸಿರುವ ದೂರು ದಾಖಲಾಗಿದೆ. ಮಾರ್ಚ್ 18ರಂದು ಸಂಜೆ ಉಜಿರೆ ಜಾತ್ರಾ ಮೈದಾನದಲ್ಲಿ ಈ ಘಟನೆ ನಡೆದಿದೆ. ಮುಸ್ಲಿಂ ಬಾಲಕನು ತನ್ನ ಹಿಂದೂ ಸ್ನೇಹಿತೆಯರೊಂದಿಗೆ ಜಾತ್ರೆ ವೀಕ್ಷಿಸುತ್ತಿದ್ದನು.

ಈ ವೇಳೆ ಸ್ಥಳಕ್ಕೆ ಬಂದ ಯುವಕರ ಗುಂಪು, “ಹಿಂದೂ ಹುಡುಗಿಯರನ್ನು ಲಾಡ್ಜ್‌ಗೆ ಕರೆದೊಯ್ಯುತ್ತಿದ್ದೀಯಾ?” ಎಂದು ಪ್ರಶ್ನಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದೆ. ಅಲ್ಲದೆ, ಬಾಲಕನ ಮೇಲೆ ಮನಬಂದಂತೆ ಹಲ್ಲೆ ನಡೆಸಲಾಗಿದೆ. ಹಲ್ಲೆಯ ಬಳಿಕ ಬಾಲಕನನ್ನು ಬಲವಂತವಾಗಿ ಅಪಹರಿಸಿದ ಆರೋಪಿಗಳು, ಮೊಬೈಲ್‌ನಲ್ಲಿ ಬಲವಂತವಾಗಿ ವಿಡಿಯೋ ರೆಕಾರ್ಡಿಂಗ್ ಮಾಡಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಕ್ರೈಸ್ತ ವ್ಯಕ್ತಿಯಿಂದ ದೈವ ನರ್ತನ ಸೇವೆ ಆರೋಪ:ಜಾತಿ ಪ್ರಮಾಣಪತ್ರ ಮೂಲಕ ದೈವ ನರ್ತಕ ಸ್ಪಷ್ಟನೆ

ಸಂತ್ರಸ್ತ 17 ವರ್ಷದ ಬಾಲಕ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಎಸ್ಪಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ. 17 ವರ್ಷದ ಬಾಲಕ ನೀಡಿದ ದೂರಿನನ್ವಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 341 (ಅಕ್ರಮ ತಡೆ), 323 (ಹಲ್ಲೆ), 363 (ಅಪಹರಣ), 504 (ನಿಂದನೆ) ಮತ್ತು 506 (ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಗಳ ಪತ್ತೆಗಾಗಿ ಪೊಲೀಸರು ಈಗಾಗಲೇ ವಿಶೇಷ ತಂಡವನ್ನು ರಚಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:18 am, Thu, 19 March 26

Follow Us
Ashok
Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
ಉತ್ತರಾಖಂಡದಲ್ಲಿ ಹಳಿ ತಪ್ಪಿದ ಉಜ್ಜಯಿನಿ ಎಕ್ಸ್​​ಪ್ರೆಸ್ ರೈಲು
ಉತ್ತರಾಖಂಡದಲ್ಲಿ ಹಳಿ ತಪ್ಪಿದ ಉಜ್ಜಯಿನಿ ಎಕ್ಸ್​​ಪ್ರೆಸ್ ರೈಲು
ಅಧಿಕ ಜೇಷ್ಠ ಮಾಸದಲ್ಲಿ ವಿಷ್ಣು ಸಹಸ್ರನಾಮ ಓದಲೇಬೇಕು!
ಅಧಿಕ ಜೇಷ್ಠ ಮಾಸದಲ್ಲಿ ವಿಷ್ಣು ಸಹಸ್ರನಾಮ ಓದಲೇಬೇಕು!
ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರ ಬಂಧನ
ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರ ಬಂಧನ
ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು
ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?
ಕುಕ್ಕೆ ಸುಬ್ರಹ್ಮಣ್ಯ ಮತ್ತೆ ನಂಬರ್‌ 1 ಶ್ರೀಮಂತ ದೇಗುಲ
ಕುಕ್ಕೆ ಸುಬ್ರಹ್ಮಣ್ಯ ಮತ್ತೆ ನಂಬರ್‌ 1 ಶ್ರೀಮಂತ ದೇಗುಲ
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು