ಮಂಗಳೂರು: ಭೂಗತ ಪಾತಕಿ ರವಿ ಪೂಜಾರಿಯ ಸಹಚರ ಮೊಹಮ್ಮದ್ ಹನೀಫ್ ಕೇರಳದಲ್ಲಿ ಬಂಧನ

ಮಂಗಳೂರು ಸೇರಿದಂತೆ ಕರಾವಳಿ ಜಿಲ್ಲೆಗಳನ್ನು ಕಾರ್ಯಕ್ಷೇತ್ರ ಮಾಡಿಸಿಕೊಂಡಿದ್ದು ಹಲವು ಶೂಟೌಟ್, ದರೋಡೆ, ಬೆದರಿಕೆ ಪ್ರಕರಣದಲ್ಲಿ ರಾಜ್ಯದ ಅನೇಕ ಠಾಣೆಗಳಿಂದ ಬಂಧನ ವಾರಂಟ್ ಎದುರಿಸುತ್ತಿದ್ದ, ಭೂಗತಪಾತಕಿ ರವಿಪೂಜಾರಿ ಸಹಚರನ ಬಂಧನ.

ಮಂಗಳೂರು: ಭೂಗತ ಪಾತಕಿ ರವಿ ಪೂಜಾರಿಯ ಸಹಚರ ಮೊಹಮ್ಮದ್ ಹನೀಫ್ ಕೇರಳದಲ್ಲಿ ಬಂಧನ
ಭೂಗತಪಾತಕಿ ರವಿಪೂಜಾರಿ ಸಹಚರ ಮೊಹಮ್ಮದ್ ಹನೀಫ್
Edited By: ವಿವೇಕ ಬಿರಾದಾರ

Updated on: Oct 25, 2023 | 9:26 AM

ಮಂಗಳೂರು ಅ.25: ಭೂಗತಪಾತಕಿ ರವಿ ಪೂಜಾರಿ (Ravi Pujari) ಮತ್ತು ಕಲಿಯೋಗೀಶ ಸಹಚರನನ್ನು ಕೊಣಾಜೆ ಠಾಣೆ ಪೊಲೀಸರು (Police) ಬಂಧಿಸಿದ್ದಾರೆ. ನಟೋರಿಯಸ್ ಶಾರ್ಪ್ ಶೂಟರ್ ಕೇರಳದ (Kerala) ಮಂಜೇಶ್ವರ ಪೈವಳಿಕೆ ನಿವಾಸಿ ಮೊಹಮ್ಮದ್ ಹನೀಫ್ ಯಾನೆ ಅಲಿ ಮುನ್ನಾ ಬಂಧಿತ ಆರೋಪಿ. ಆರೋಪಿ ಮೊಹಮ್ಮದ್​ ಹನೀಫ್​​ ಜಿಲ್ಲೆಯ ಹಲವು ಠಾಣೆಗಳಲ್ಲಿ ವಾರೆಂಟ್ ಎದುರಿಸುತ್ತಿದ್ದನು.

ಆರೋಪಿ ಹನೀಫ್​ ನಟೋರಿಯಸ್​ ಕ್ರಮಿನಿಲ್​ ಆಗಿದ್ದು, ರವಿಪೂಜಾರಿಯ ಎಲ್ಲ ಕೃತ್ಯಗಳಿಗೆ ಮಂಗಳೂರು ಸೇರಿದಂತೆ ಕರಾವಳಿ ಜಿಲ್ಲೆಗಳನ್ನು ಕಾರ್ಯಕ್ಷೇತ್ರ ಮಾಡಿಸಿಕೊಂಡಿದ್ದು ಹಲವು ಶೂಟೌಟ್, ದರೋಡೆ, ಬೆದರಿಕೆ ಪ್ರಕರಣದಲ್ಲಿ ರಾಜ್ಯದ ಅನೇಕ ಠಾಣೆಗಳಿಂದ ಬಂಧನ ವಾರಂಟ್ ಎದುರಿಸುತ್ತಿದ್ದನು. ಈತನ ವಿರುದ್ಧ ಕೊಣಾಜೆ, ಮಂಗಳೂರು ಉತ್ತರ, ಪುತ್ತೂರು, ಬರ್ಕೆ, ವಿಟ್ಲ, ಉಳ್ಳಾಲ, ಬೆಂಗಳೂರು ವಿಮಾನ ನಿಲ್ದಾಣ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ: ಎಂಡಿಎಂಎ ಮಾರುತ್ತಿದ್ದ ಆರೋಪಿಯನ್ನು ಬಂಧಿಸಿದ ಮಂಗಳೂರು ಸಿಸಿಬಿ

2010 ಮತ್ತು 2013 ಕಾಸರಗೋಡು ಬೇವಿಂಜ ಪಿಡಬ್ಲ್ಯುಡಿ ಗುತ್ತಿಗೆದಾರರ ಶೂಟೌಟ್ ಪ್ರಕರಣ, ಕೇರಳದ ಮಂಜೇಶ್ವರದಲ್ಲಿ ಕಳ್ಳತನ, ಕುಂಬಳೆ ಹಾಗೂ ವಿದ್ಯಾನಗರ ಠಾಣೆಯಲ್ಲೂ ಪ್ರಕರಣಗಳು ದಾಖಲಾಗಿವೆ. ಮಂಗಳೂರು ಉತ್ತರ ಠಾಣಾ ವ್ಯಾಪ್ತಿಯ ಸಂಜೀವ್ ಶೆಟ್ಟಿ ಸಿಲ್ಕ್ಸ್ ಮಳಿಗೆ ಮತ್ತು ಪುತ್ತೂರು ರಾಜಧಾನಿ ಜ್ಯುವೆಲ್ಲರ್ಸ್​ನಲ್ಲಿ ಶೂಟೌಟ್ ನಡೆಸಿದ್ದನು.

ಆರೋಪಿಯನ್ನು ಕೇರಳದಲ್ಲಿ ಬಂಧಿಸಲಾಗಿದ್ದು, ಈಗಲೂ ಹಫ್ತಾ ವಸೂಲಿಯಲ್ಲಿ ತೊಡಗಿಸಿಕೊಂಡಿದ್ದನು ಎನ್ನಲಾಗಿದೆ. ಎಸಿಪಿ ಧನ್ಯ ನಾಯಕ್ ನೇತೃತ್ವದ ತಂಡ ಮತ್ತು ಕೊಣಾಜೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us