AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಂಗಿಕವಾಗಿ ಬಳಸಿಕೊಂಡು ಮಹಿಳಾ ಅಧಿಕಾರಿ ಮೋಸ: ಮಂಗಳೂರಿನಲ್ಲಿ ಯುವಕ ಆತ್ಮಹತ್ಯೆ

ಉತ್ತರ ಪ್ರದೇಶ ಮೂಲದ ಯುವಕ ಮಂಗಳೂರಿನ ಲಾಡ್ಜ್​ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎಕ್ಸಿಬಿಷನ್​ನಲ್ಲಿ ಪಾಲ್ಗೊಳ್ಳಲು ಮಂಗಳೂರಿಗೆ ಬಂದು ಲಾಡ್ಜ್​ನಲ್ಲಿದ್ದ ನೇಣಿಗೆ ಶರಣಾಗಿದ್ದಾನೆ. ಸಾವಿಗೂ ಮುನ್ನ ವಿಡಿಯೋ ಮಾಡಿಕೊಂಡಿದ್ದು, ಮಹಿಳಾ ಅಧಿಕಾರಿಯೊಬ್ಬರು ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಿದ್ದಾರೆ ಎಂದು ಆರೋಪಿಸಿದ್ದಾನೆ. ಹಾಗಾದ್ರೆ, ಯಾರು ಆ ಮಹಿಳಾಧಿಕಾರಿ? ಮೃತನ ವಿಡಿಯೋನಲ್ಲೇನಿದೆ?

ಲೈಂಗಿಕವಾಗಿ ಬಳಸಿಕೊಂಡು ಮಹಿಳಾ ಅಧಿಕಾರಿ ಮೋಸ: ಮಂಗಳೂರಿನಲ್ಲಿ ಯುವಕ ಆತ್ಮಹತ್ಯೆ
Cisf Monika
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Mar 03, 2025 | 5:18 PM

Share

ಮಂಗಳೂರು, (ಮಾರ್ಚ್​ 03): ಸಿಐಎಸ್‌ಎಫ್ ಮಹಿಳಾ ಅಧಿಕಾರಿಯೊಬ್ಬರು ತನ್ನನ್ನು ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಿದ್ದಾರೆ ಎಂದು ಆರೋಪಿಸಿ ಉತ್ತರ ಪ್ರದೇಶದ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು (ಮಾರ್ಚ್​ 03) ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ರಾವ್ ಮತ್ತು ರಾವ್ ಸರ್ಕಲ್ ಬಳಿಯ ಲಾಡ್ಜ್‌ನಲ್ಲಿ ನೇಣಿಗೆ ಶರಣಾಗಿದ್ದು, ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶದ ಗಾಜಿಪುರದ ಅಭಿಷೇಕ್ ಸಿಂಗ್(40) ಎಂದು ಗುರುತಿಸಲಾಗಿದೆ. ಅಭಿಷೇಕ್ ಸಿಂಗ್ ಆತ್ಮಹತ್ಯೆಗೂ ಮುನ್ನ ವಿಡಿಯೋ ರೆಕಾರ್ಡ್ ಮಾಡಿ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದು, ಸಿಐಎಸ್ಎಫ್ ಸಹಾಯಕ ಕಮಾಂಡೆಂಟ್ ಮೋನಿಕಾ ಸಿಹಾಗ್ ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿ ವಂಚಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಚೆನ್ನೈನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅಭಿಷೇಕ್, ಕೆಲವು ದಿನಗಳ ಹಿಂದೆ ಸಹೋದ್ಯೋಗಿಗಳೊಂದಿಗೆ ವಸ್ತುಪ್ರದರ್ಶನವೊಂದರಲ್ಲಿ ಭಾಗವಹಿಸಲು ಮಂಗಳೂರಿಗೆ ಬಂದಿದ್ದರು. ಅವರು ನಗರದ ರಾವ್ ಮತ್ತು ರಾವ್ ವೃತ್ತದ ಬಳಿ ಇರುವ ಲಾಡ್ಜ್‌ವೊಂದರಲ್ಲಿ ತಂಗಿದ್ದರು. ಈಗ ಅದೇ ಲಾಡ್ಜ್​ನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನು ಸಾವಿಗೂ ಮುನ್ನ ವಿಡಿಯೋ ಪೋಸ್ಟ್ ಮಾಡಿರುವ ಅಭಿಷೇಕ್, ಮೋನಿಕಾ ಸಿಹಾಗ್ ಈಗಾಗಲೇ ವಿವಾಹಿತೆಯಾಗಿದ್ದು, ಆ ವಿಷಯವನ್ನು ಮುಚ್ಚಿಟ್ಟು ತನ್ನೊಂದಿಗೆ ಸಂಬಂಧ ಬೆಳೆಸಿದ್ದರು ಎಂದು ಅಭಿಷೇಕ್ ಸಿಂಗ್ ವಿಡಿಯೋದಲ್ಲಿ ಆರೋಪಿಸಿದ್ದು, ಈ ಸಂಬಂಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: 6 ತಿಂಗಳ ಹಿಂದಷ್ಟೇ ಮದ್ವೆಯಾಗಿದ್ದ ಯುವಕ ಆತ್ಮಹತ್ಯೆ: ಪತ್ನಿ ಕಿರುಕುಳ ಆರೋಪ

ಅಭೀಷೇಕ್​ ವಿಡಿಯೋನಲ್ಲೇನಿದೆ?

ಆತ್ಮಹತ್ಯೆಗೆ ಮುನ್ನ ಅಭಿಷೇಕ್ ಸಿಂಗ್ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹರಿಬಿಟ್ಟಿದ್ದು, ಅದರಲ್ಲಿ ಮೋನಿಕಾ ಸಿಹಾಗ್ ಅವರು ತಮ್ಮನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿ ವಂಚಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಮೋನಿಕಾ ಸಿಹಾಗ್ ಈಗಾಗಲೇ ವಿವಾಹಿತೆಯಾಗಿದ್ದು, ಆ ವಿಷಯವನ್ನು ಮುಚ್ಚಿಟ್ಟಿದ್ದಾಳೆ. ಪ್ರೀತಿಯ ನೆಪದಲ್ಲಿ ತನ್ನಿಂದ ದೈಹಿಕ ಸುಖ, ಆರ್ಥಿಕ ಲಾಭ ಪಡೆದು ಮೋಸ ಮಾಡಿದ್ದಾಳೆ. ಹಾಗೆ ಹಲವರ ಜೊತೆಗೆ ಇದೇ ರೀತಿಯ ಸಂಬಂಧ ಇಟ್ಟುಕೊಂಡಿರುವುದು ತಿಳಿದುಬಂದಿದೆ. ಮೋನಿಕಾಗೆ ಎಂಟು ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ತೆಗೆದುಕೊಟ್ಟಿದ್ದೇನೆ. ಮೋನಿಕಾ ಸಿಂಗ್, ಗುಜರಾತಿನ ಅಹ್ಮದಾಬಾದ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಳೆ ಎಂದು ಅಭಿಷೇಕ್ ವಿಡಿಯೋನಲ್ಲಿ ಹೇಳಿಕೊಂಡಿದ್ದಾನೆ.

ಮಂಗಳೂರು ಪೊಲೀಸ್ ಆಯುಕ್ತ ಹೇಳಿದ್ದಿಷ್ಟು

ಇನ್ನು ಈ ಪ್ರಕರಣದ ಬಗ್ಗೆ ಟಿವಿ9ಗೆ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಪ್ರತಿಕ್ರಿಯಿಸಿದ್ದು, ಮೃತ ಅಭಿಷೇಕ್ ಸಹೋದರ ಇಂದು ಮೋನಿಕಾ ವಿರುದ್ಧ ದೂರು ನೀಡಿದ್ದಾರೆ. 15 ಲಕ್ಷ ಹಣ, ಚಿನ್ನ ವಂಚನೆ ಆರೋಪ ಕೂಡ ಇದೆ. ಹಾಗೇ ಲೈಂಗಿಕ ಕಿರುಕುಳ ಕೊಟ್ಟಿರುವ ಬಗ್ಗೆ ದೂರು ದಾಖಲಾಗಿದ್ದು, CISF ಮೋನಿಕಾ ಸಿಹಾಗ್ ಗೆ ನೋಟೀಸ್ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:08 pm, Mon, 3 March 25

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್