AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಾವಳಿ ಜನರ ಆಸೆಗೆ ತಣ್ಣೀರೆರಚಿದ ರೈಲ್ವೆ ಇಲಾಖೆ!: ಜೂನ್ 3ರ ಬೆಂಗಳೂರು-ಮಂಗಳೂರು ವಂದೇ ಭಾರತ್ ಟ್ರಯಲ್ ರನ್ ದಿಢೀರ್ ಕ್ಯಾನ್ಸಲ್!

ಕರಾವಳಿ ಕರ್ನಾಟಕ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಜನರ ಬಹುದಿನಗಳ ಕನಸಾದ ಬೆಂಗಳೂರು–ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಸಂಚಾರಕ್ಕೆ ಆರಂಭದಲ್ಲೇ ಹಿನ್ನಡೆಯಾಗಿದೆ. ಜೂನ್ 3 ರಂದು ನಡೆಯಬೇಕಿದ್ದ ಬಹುನಿರೀಕ್ಷಿತ ಪ್ರಾಯೋಗಿಕ ಸಂಚಾರವನ್ನು (Trial Run) ನೈಋತ್ಯ ರೈಲ್ವೆ ವಲಯವು ದಿಢೀರ್ ರದ್ದುಗೊಳಿಸಿದೆ. ಇದಕ್ಕೆ ಕಾರಣವೇನು? ಮುಂದಿನ ಪ್ರಾಯೋಗಿಕ ಸಂಚಾರ ಯಾವಾಗ ಎಂಬುದಕ್ಕೆ ಇಲ್ಲಿದೆ ನೋಡಿ ಉತ್ತರ.

ಕರಾವಳಿ ಜನರ ಆಸೆಗೆ ತಣ್ಣೀರೆರಚಿದ ರೈಲ್ವೆ ಇಲಾಖೆ!: ಜೂನ್ 3ರ ಬೆಂಗಳೂರು-ಮಂಗಳೂರು ವಂದೇ ಭಾರತ್ ಟ್ರಯಲ್ ರನ್ ದಿಢೀರ್ ಕ್ಯಾನ್ಸಲ್!
ಬೆಂಗಳೂರು-ಮಂಗಳೂರು ವಂದೇ ಭಾರತ್ ಟ್ರಯಲ್ ರನ್ ಕ್ಯಾನ್ಸಲ್Image Credit source: google gemini
ಅಕ್ಷಯ್​ ಪಲ್ಲಮಜಲು​​
|

Updated on:Jun 02, 2026 | 4:18 PM

Share

ಮಂಗಳೂರು, ಜೂ.2: ಬೆಂಗಳೂರು ಮತ್ತು ಮಂಗಳೂರು ನಡುವೆ ಅತಿ ಶೀಘ್ರದಲ್ಲೇ ಸಂಚರಿಸಲಿದೆ ಎನ್ನಲಾಗಿದ್ದ ಪ್ರೀಮಿಯಂ ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express) ರೈಲಿನ ಸೇವೆಗೆ ಸದ್ಯಕ್ಕೆ ಬ್ರೇಕ್ ಬಿದ್ದಿದೆ. ಜೂನ್ 3ರ ಬುಧವಾರದಂದು ನಿಗದಿಯಾಗಿದ್ದ ರೈಲಿನ ಮೊದಲ ಅಧಿಕೃತ ಪ್ರಾಯೋಗಿಕ ಸಂಚಾರವನ್ನು ನೈಋತ್ಯ ರೈಲ್ವೆ (South Western Railway) ವಲಯವು ಕೊನೆ ಘಳಿಗೆಯಲ್ಲಿ ರದ್ದುಗೊಳಿಸಿದ್ದು, ಕರಾವಳಿ ಜನರಲ್ಲಿ ತೀವ್ರ ನಿರಾಶೆ ಮೂಡಿಸಿದೆ. ನೆನ್ನೆ ಅಂದರೆ ಜೂ.1ಕ್ಕೆ ಈ ಪ್ರಯೋಗ ನಡೆಯಬೇಕಿತ್ತು. ಆದರೆ ಇದನ್ನು ಜೂ.3ಕ್ಕೆ ಅಂದರೆ ನಾಳೆಗೆ ಮುಂದೂಡಲಾಗಿತ್ತು. ಆದರೆ ಇದೀಗ ಅದನ್ನು ರದ್ದು ಮಾಡಲಾಗಿದೆ.

ನೈಋತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಾರಿಗೆ ವ್ಯವಸ್ಥಾಪಕರ ಕಚೇರಿಯು ಮೇ 31 ರಂದು ಅಧಿಕೃತ ಆದೇಶ ಹೊರಡಿಸಿದ್ದು, ಪ್ರಾಯೋಗಿಕ ಸಂಚಾರದ ಪ್ರಸ್ತಾವನೆಯನ್ನು ಹಿಂಪಡೆದಿದೆ. ಆದೇಶ ಸಂಖ್ಯೆ T.454/YPR-MAQ Vande Bharat/2026-27(241) ರ ಪ್ರಕಾರ, ಜೂನ್ 3 ರಂದು ಯಶವಂತಪುರ (YPR) ಮತ್ತು ಮಂಗಳೂರು (MAQ) ನಡುವೆ ನಡೆಯಬೇಕಿದ್ದ ವಂದೇ ಭಾರತ್ ಪ್ರಾಯೋಗಿಕ ಸಂಚಾರವನ್ನು ಅಧಿಕೃತವಾಗಿ ರದ್ದುಗೊಳಿಸಲಾಗಿದೆ. ಇದರ ಬೆನ್ನಲ್ಲೇ, ರೈಲ್ವೆ ನಿಲ್ದಾಣಗಳಲ್ಲಿ ಮಾಡಲಾಗಿದ್ದ ಎಲ್ಲಾ ಕಾರ್ಯಾಚರಣೆಯ ಸಿದ್ಧತೆಗಳನ್ನು ಸ್ಥಗಿತಗೊಳಿಸಲಾಗಿದೆ.

ಘಾಟ್ ಸೆಕ್ಷನ್‌ನಲ್ಲಿ ಪರೀಕ್ಷೆ ನಡೆಯಬೇಕಿತ್ತು:

ಬೆಂಗಳೂರು-ಮಂಗಳೂರು ನಡುವಿನ ಕಠಿಣವಾದ ಶಿರಾಡಿ ಘಾಟ್ ಸೆಕ್ಷನ್‌ನ ಸುರಂಗ ಮಾರ್ಗಗಳು ಮತ್ತು ತಿರುವುಗಳಲ್ಲಿ 8 ಬೋಗಿಗಳ ಈ ಸೆಮಿ-ಹೈಸ್ಪೀಡ್ ರೈಲಿನ ವೇಗ, ಹಳಿಗಳ ಸಾಮರ್ಥ್ಯ ಹಾಗೂ ತಾಂತ್ರಿಕ ಕಾರ್ಯಕ್ಷಮತೆಯನ್ನು ಪರೀಕ್ಷಿಸಲು ಈ ಟ್ರಯಲ್ ರನ್ ಅತ್ಯಂತ ಪ್ರಮುಖವಾಗಿತ್ತು. ರೈಲ್ವೆ ಪ್ರೇಮಿಗಳು ಮತ್ತು ಸಾರ್ವಜನಿಕರು ಈ ಐಷಾರಾಮಿ ರೈಲಿನ ಆಗಮನವನ್ನು ಕಣ್ಣಿಟ್ಟು ಕಾಯುತ್ತಿದ್ದರು. ಆದರೆ ಇದೀಗ ಅವರ ಕಾಯುವಿಕೆಗೆ ತಣ್ಣೀರೆರಚಿದೆ.

ಇದನ್ನೂ ಓದಿ: ರೈಲ್ವೆ ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: RRB NTPC ಪರೀಕ್ಷಾ ವೇಳಾಪಟ್ಟಿಯಲ್ಲಿ ಮಹತ್ವದ ಬದಲಾವಣೆ

ರದ್ದತಿಗೆ ಅಸಲಿ ಕಾರಣವೇನು?:

ಪ್ರಾಯೋಗಿಕ ಸಂಚಾರ ರದ್ದತಿಗೆ ರೈಲ್ವೆ ಇಲಾಖೆಯು ಯಾವುದೇ ಅಧಿಕೃತ ಕಾರಣವನ್ನು ಬಹಿರಂಗಪಡಿಸಿಲ್ಲ. ಆದರೆ ವಂದೇ ಭಾರತ್ ರೈಲಿನ ಪ್ರತ್ಯೇಕ ರೇಕ್ (Rake/ಬೋಗಿಗಳ ಸೆಟ್) ಲಭ್ಯವಿಲ್ಲದಿರುವುದು, ಕಾರ್ಯಾಚರಣೆಯ ಆದ್ಯತೆಗಳು ಮತ್ತು ಕೆಲವು ತಾಂತ್ರಿಕ ಕಾರಣದಿಂದ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ. ಪ್ರಸ್ತುತ ಶಿರಾಡಿ ಘಾಟ್ ಮಾರ್ಗದಲ್ಲಿ ಸರಕು ಸಾಗಣೆ ರೈಲುಗಳ ಸಂಚಾರ ಎಂದಿನಂತೆ ಮುಂದುವರಿದಿರುವುದರಿಂದ, ಮೂಲಸೌಕರ್ಯದ ಯಾವುದೇ ಪ್ರಮುಖ ಸಮಸ್ಯೆಗಳಿಲ್ಲ ಎಂಬುದು ಸ್ಪಷ್ಟವಾಗಿದೆ.

ಮುಂದಿನ ವೇಳಾಪಟ್ಟಿ ಇನ್ನೂ ನಿಗದಿಯಾಗಿಲ್ಲ:

ಬೆಂಗಳೂರು ಮತ್ತು ಮಂಗಳೂರು ನಡುವಿನ ಪ್ರಯಾಣದ ಸಮಯವನ್ನು ಗಣನೀಯವಾಗಿ ಕಡಿಮೆ ಮಾಡುವ, ಪ್ರವಾಸೋದ್ಯಮ ಮತ್ತು ಉದ್ಯಮಕ್ಕೆ ಬೂಸ್ಟ್ ನೀಡುವ ಈ ವಂದೇ ಭಾರತ್ ಯೋಜನೆಯ ಮುಂದಿನ ಟ್ರಯಲ್ ರನ್ ದಿನಾಂಕವನ್ನು ರೈಲ್ವೆ ಇಲಾಖೆ ಇನ್ನೂ ಪ್ರಕಟಿಸಿಲ್ಲ. ಕರಾವಳಿ ಭಾಗದ ಪ್ರಯಾಣಿಕರು ಮುಂದಿನ ಅಧಿಕೃತ ಅಪ್‌ಡೇಟ್‌ಗಾಗಿ ಕಾತರದಿಂದ ಕಾಯುತ್ತಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:13 pm, Tue, 2 June 26

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!