ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿಢೀರನೆ ಹೆಚ್ಚಾದ ವೈರಲ್ ಫಿವರ್, ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್

ಕೇರಳದ ಜೊತೆ ಗಡಿ ಹಂಚಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಕಡಬ, ಬಂಟ್ವಾಳ, ಬೆಳ್ತಂಗಡಿ ತಾಲೂಕು ಭಾಗದಲ್ಲಿ ಜ್ವರದ ಪ್ರಮಾಣ ಅಧಿಕವಾಗಿದೆ. ಖಾಸಗಿ ಕ್ಲಿನಿಕ್​ಗಳಲ್ಲಿ ಕಳೆದ ಒಂದು ವಾರದಿಂದ ಜ್ವರದ ಕಾರಣಕ್ಕೆ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ ಹೆಚ್ಚಿದೆ. ಹೀಗಾಗಿ SARI ಮತ್ತು ILI ಪ್ರಕರಣಗಳ ಬಗ್ಗೆ ನಿಗಾ ಇಡಲು ಆರೋಗ್ಯ ಇಲಾಖೆ ಮುಂದಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿಢೀರನೆ ಹೆಚ್ಚಾದ ವೈರಲ್ ಫಿವರ್, ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್
ಸಾಂದರ್ಭಿಕ ಚಿತ್ರ
Edited By: ಆಯೇಷಾ ಬಾನು

Updated on: Dec 21, 2023 | 12:58 PM

ಮಂಗಳೂರು, ಡಿ.21: ಕೇರಳದಲ್ಲಿ ಕೋವಿಡ್ ರೂಪಾಂತರಿ ಜೆಎನ್-1 ವೈರಸ್ (JN.1 Virus) ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದೆ. ಹೀಗಾಗಿ ಕೇರಳದ ಜೊತೆ ಗಡಿ ಹಂಚಿಕೊಂಡ ದಕ್ಷಿಣಕನ್ನಡ ಜಿಲ್ಲೆಯಲ್ಲಿಯೂ ಕೋವಿಡ್ ಆತಂಕ ಹೆಚ್ಚಾಗುತ್ತಿದೆ. ಹೀಗಾಗಿ ಜಿಲ್ಲೆಯ ಸ್ವರ್ಗ, ಸಾರಡ್ಕ, ಜಲ್ಸೂರು, ತಲಪಾಡಿ, ಈಶ್ವರಮಂಗಲ ಗಡಿಪ್ರದೇಶದಲ್ಲಿ ಅಲರ್ಟ್‌ಗೆ ಸೂಚಿಸಲಾಗಿದೆ. ಆದರೆ ಇದರ ನಡುವೆ ಹವಾಮಾನ ವೈಪರೀತ್ಯಗಳಿಂದ ವೈರಲ್ ಫಿವರ್ (Viral Fever) ಪ್ರಮಾಣ ದಿಢೀರ್ ಏರಿಕೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೈರಸ್ ಜ್ವರದ ಪ್ರಮಾಣ ಏರಿಕೆಯಾಗಿದೆ. ಇದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

ಜಿಲ್ಲೆಯ ಸುಳ್ಯ, ಕಡಬ, ಬಂಟ್ವಾಳ, ಬೆಳ್ತಂಗಡಿ ತಾಲೂಕು ಭಾಗದಲ್ಲಿ ಜ್ವರದ ಪ್ರಮಾಣ ಅಧಿಕವಾಗಿದೆ. ಖಾಸಗಿ ಕ್ಲಿನಿಕ್​ಗಳಲ್ಲಿ ಕಳೆದ ಒಂದು ವಾರದಿಂದ ಜ್ವರದ ಕಾರಣಕ್ಕೆ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ ಹೆಚ್ಚಿದೆ. ಹೀಗಾಗಿ SARI ಮತ್ತು ILI ಪ್ರಕರಣಗಳ ಬಗ್ಗೆ ನಿಗಾ ಇಡಲು ಆರೋಗ್ಯ ಇಲಾಖೆ ಮುಂದಾಗಿದೆ. ಈ ಬಗ್ಗೆ ಖಾಸಗಿ ಸಂಸ್ಥೆ, ವೈದ್ಯಕೀಯ ಕಾಲೇಜುಗಳಿಗೆ ಈಗಾಗಲೇ ಸುತ್ತೋಲೆ ಕಳಿಸಲಾಗಿದೆ ಎಂದು ದಕ್ಷಿಣ ಕನ್ನಡ DHO ಡಾ.ಎಚ್.ಆರ್ ತಿಮ್ಮಯ್ಯ ತಿಳಿಸಿದ್ದಾರೆ.

ಇದನ್ನೂ ಓದಿ: ಕೊರೋನಾ ಜೆಎನ್.1 ಭೀತಿ: ಕರ್ನಾಟಕ-ಗೋವಾ ಗಡಿಭಾಗದಲ್ಲಿ ಇಲ್ಲ ಚೆಕ್​ಪೋಸ್ಟ್​ಗಳು, ನಿರ್ಬಂಧವಿಲ್ಲದೆ ಜನ ಓಡಾಟ!

ಖಾಸಗಿ ಸಂಸ್ಥೆ, ವೈದ್ಯಕೀಯ ಕಾಲೇಜುಗಳಿಗೆ ಈಗಾಗಲೇ ಸುತ್ತೋಲೆ ಹೊರಡಿಸಿದ್ದೇವೆ. ILI ಮತ್ತು SARI ಪ್ರಕರಣಗಳ ಬಗ್ಗೆ ನಿಗಾ ಇಡಬೇಕು. ಈ ಬಗ್ಗೆ ಇಲಾಖೆಗೆ ಮಾಹಿತಿ ಕೊಡುವಂತೆ ಸೂಚನೆ ನೀಡಿದ್ದೇವೆ. ತಾಲೂಕು ವೈದ್ಯರುಗಳ ಸಭೆ ಕರೆದು ಸಹ ಸೂಚನೆ ಕೊಟ್ಟಿದ್ದೇವೆ. SARI ಪ್ರಕರಣಗಳೆಲ್ಲವನ್ನು ಪರೀಕ್ಷೆಗೆ ಒಳಪಡಿಸಬೇಕಾಗಿದೆ. ILI ಪ್ರಕರಣಗಳಲ್ಲಿ 20 ರಲ್ಲಿ ಒಂದು ಟೆಸ್ಟ್ ಗೆ ಒಳಪಡಿಸುತ್ತೇವೆ. ರಾಜ್ಯಮಟ್ಟದಲ್ಲಿ ಬರುವ ನಿರ್ದೇಶನವನ್ನು ಪಾಲಿಸುತ್ತೇವೆ. ಕೇರಳದಿಂದ ಸಾಕಷ್ಟು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಜಿಲ್ಲೆಗೆ ಬರ್ತಾರೆ. ಎಲ್ಲಾ ವಿದ್ಯಾಸಂಸ್ಥೆಗಳಿಗೂ ಲಿಖಿತವಾಗಿ ತಿಳಿಸುತ್ತೇವೆ. ಕೇರಳದಿಂದ ಬರುವ ವಿದ್ಯಾರ್ಥಿಗಳಲ್ಲಿ ರೋಗ ಲಕ್ಷಣ ಕಂಡು ಬಂದ್ರೆ ಅವರನ್ನು ಐಸೋಲೇಟ್ ಮಾಡಬೇಕು. ಅಗತ್ಯ ಬಿದ್ರೆ ಚಿಕಿತ್ಸೆ ನೀಡಿ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು ಎಂದು ತಿಳಿಸಿದ್ದೇವೆ ಎಂದು ಡಾ.ಎಚ್.ಆರ್ ತಿಮ್ಮಯ್ಯ ಅವರು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
Loading...
Unable to load recommendations.
Follow Us