AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದ ವ್ಯಕ್ತಿಯನ್ನು ಸಿನಿಮೀಯ ರೀತಿಯಲ್ಲಿ ರಕ್ಷಿಸಿದ ಪೊಲೀಸರು

ಮಂಗಳೂರಿನಲ್ಲಿ ಕೌಟುಂಬಿಕ ಕಲಹದಿಂದ ಮನನೊಂದ ವ್ಯಕ್ತಿ ತನ್ನ ಆರು ವರ್ಷದ ಮಗಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದರು.ಕೌಟುಂಬಿಕ ಕಲಹದ ಕಾರಣ ತನ್ನ ಆರು ವರ್ಷದ ಮಗಳೊಂದಿಗೆ ತಣ್ಣೀರುಬಾವಿ ಬೀಚ್​ನಲ್ಲಿ ವೀಡಿಯೋ ಮಾಡಿದ್ದು, ವೈರಲ್ ವೀಡಿಯೋ ಸುಳಿವಿನಿಂದ ಸ್ಥಳಕ್ಕೆ ಧಾವಿಸಿದ ಮಂಗಳೂರು ಪೊಲೀಸರು, ಸಮಯಪ್ರಜ್ಞೆ ಮೆರೆದು ತಂದೆ-ಮಗಳನ್ನು ರಕ್ಷಿಸಿದ್ದಾರೆ.

ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದ ವ್ಯಕ್ತಿಯನ್ನು ಸಿನಿಮೀಯ ರೀತಿಯಲ್ಲಿ ರಕ್ಷಿಸಿದ ಪೊಲೀಸರು
ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದ ವ್ಯಕ್ತಿಯನ್ನು ಸಿನಿಮೀಯ ರೀತಿಯಲ್ಲಿ ರಕ್ಷಿಸಿದ ಪೊಲೀಸರು
ಅಶೋಕ್​ ಪೂಜಾರಿ
| Edited By: |

Updated on:Nov 05, 2025 | 11:51 AM

Share

ಮಂಗಳೂರು, ನವೆಂಬರ್ 5: ಕೌಟುಂಬಿಕ ಕಲಹಕ್ಕೆ ಬೇಸತ್ತು 6 ವರ್ಷದ ಮಗಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಮಂಗಳೂರು (Mangaluru) ಪೊಲೀಸ್‌ ಇಲಾಖೆ ಸಮಯಪ್ರಜ್ಞೆಯಿಂದ ರಕ್ಷಿಸಿದ ಘಟನೆ ಕಾವೂರು ಠಾಣಾ ವ್ಯಾಪ್ತಿಯ ಶಾಂತಿನಗರದಲ್ಲಿ ನಡೆದಿದೆ. ಕೌಟುಂಬಿಕ ಕಲಹದ ಕಾರಣ ತನ್ನ ಆರು ವರ್ಷದ ಮಗಳೊಂದಿಗೆ ತಣ್ಣೀರುಬಾವಿ ಬೀಚ್​ನಲ್ಲಿ ವೀಡಿಯೋ ಮಾಡಿದ್ದು, ವೈರಲ್ ವೀಡಿಯೋ ಮೂಲಕವೇ ಆತನನ್ನು ಪತ್ತೆ ಹಚ್ಚಿದ ಪೊಲೀಸರು, ಆತನನ್ನು ರಕ್ಷಿಸಿದ್ದಾರೆ.

ಕೌಟುಂಬಿಕ ಕಲಹದಿಂದ ಆತ್ಮಹತ್ಯೆಗೆ ಯತ್ನ

7 ವರ್ಷಗಳ ಹಿಂದೆ ಬಜ್ಪೆ ಪ್ರದೇಶದ ಯುವತಿಯನ್ನು ರಾಜೇಶ್ ಪ್ರೀತಿಸಿ ಮದುವೆಯಾಗಿದ್ದರು. ಆದರೆ ದಂಪತಿ ನಡವೆ ಇತ್ತೀಚೆಗೆ ಜಗಳಗಳು ಶುರುವಾಗಿದ್ದವು. ಹೆಚ್ಚಾದ ಕೌಟುಂಬಿಕ ಕಲಹದಿಂದ ಬೇಸತ್ತ ರಾಜೇಶ್, ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದರು.

ವೈರಲ್ ವೀಡಿಯೋದಿಂದ ರಾಜೇಶ್ ಪತ್ತೆ

ಮೊದಲಿಗೆ ತನ್ನ 6 ವರ್ಷದ ಮಗಳನ್ನು ಕರೆದುಕೊಂಡು ತಣ್ಣೀರುಬಾವಿ ಬೀಚ್‌ಗೆ ಹೋಗಿದ್ದರು. ಈ ವೇಳೆ ಸಾಯುವುದು ಬೇಡವೆಂದು ಪುಟ್ಟ ಮಗಳು ತನ್ನ ತಂದೆಗೆ ಅಂಗಲಾಚಿ ಬೇಡಿದ್ದಳು. ತನ್ನ ಮಗಳೊಂದಿಗೆ ಆತ್ಮಹತ್ಯೆಗೆ ಸಮುದ್ರ ಕಿನಾರೆಗೆ ತೆರಳುತ್ತಿರುವ ವೀಡಿಯೋ ಮಾಡಿ, ತನ್ನ ಅಕ್ಕ ಹಾಗೂ ಸಂಬಂಧಿಕರಿಗೆ ಕಳುಹಿಸಿದ್ದರು. ಹೀಗೆ ಕಳುಹಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ವೈರಲ್ ಆದ ತಂದೆ ಮಗಳ ವೀಡಿಯೋ

ವೈರಲ್ ಆದ ವೀಡಿಯೋ ಸುಳಿವಿನಿಂದ ಸ್ಥಳಕ್ಕೆ ಆಗಮಿಸಿದ್ದ ಪಣಂಬೂರು ಪೊಲೀಸರು, ಬೀಚ್​ನಲ್ಲಿ ತಂದೆ ಮಗಳ ಹುಡುಕಾಟ ನಡೆಸಿದ್ದರು. ಎಲ್ಲಿಯೂ ರಾಜೇಶ್ ಸುಳಿವು ಸಿಗದಾಗ ಆತನ ಮೊಬೈಲ್ ಲೊಕೇಷನ್​ ಪತ್ತೆ ಮಾಡಿದ ಪೊಲೀಸರು, ಕಾವೂರು ಶಾಂತಿ ನಗರಕ್ಕೆ ರಾಜೇಶ್ ಮನೆ ಹುಡುಕಿಕೊಂಡು ಹೋಗಿದ್ದರು. ಮನೆಯಲ್ಲಿ  ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸುತ್ತಿದ್ದಾಗ ಸಿನಿಮೀಯ ರೀತಿಯಲ್ಲಿ ಮನೆ ಬಾಗಿಲು‌ ಮುರಿದು ಒಳ ನುಗ್ಗಿ, ಆತನನ್ನು ರಕ್ಷಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:50 am, Wed, 5 November 25

Follow Us
ಅಶೋಕ್​ ಪೂಜಾರಿ
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ
ಮಾಗಡಿ ಮಾರುಕಟ್ಟೆಯಲ್ಲಿ ರಾಶಿ ರಾಶಿ ಕಸ ಕಂಡು ಗರಂ ಆದ್ರು ಸಚಿವ ಬಾಲಕೃಷ್ಣ!
ಮಾಗಡಿ ಮಾರುಕಟ್ಟೆಯಲ್ಲಿ ರಾಶಿ ರಾಶಿ ಕಸ ಕಂಡು ಗರಂ ಆದ್ರು ಸಚಿವ ಬಾಲಕೃಷ್ಣ!