ವಿಟ್ಲ: ದಾರಿ ಕೇಳುವ ನೆಪದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ, ಆರೋಪಿಯ ಬಂಧನ

|

Updated on: May 17, 2023 | 5:16 PM

ದಾರಿ ಕೇಳುವ ನೆಪದಲ್ಲಿ ಮಹಿಳೆಗೆ ಕಿರುಕುಳ ನೀಡಿದ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ವಿಟ್ಲ: ದಾರಿ ಕೇಳುವ ನೆಪದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ, ಆರೋಪಿಯ ಬಂಧನ
ಸಾಂದರ್ಭಿಕ ಚಿತ್ರ
Follow us on

ವಿಟ್ಲ: ದಾರಿ ಕೇಳುವ ನೆಪದಲ್ಲಿ ಮಹಿಳೆಗೆ ಕಿರುಕುಳ ನೀಡಿದ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಆರೋಪಿಯನ್ನು ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ನಿವಾಸಿ ಅಬೂಬಕರ್ ಕೆ ಪಯ ಎಂದು ಗುರುತಿಸಲಾಗಿದೆ.

ವಿಟ್ಲ ಪೇಟೆಯಲ್ಲಿ ಮೇ 13ರ ಶನಿವಾರ ಮಧ್ಯಾಹ್ನ 2.30ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಎಫ್‌ಐಆರ್ ಪ್ರಕಾರ, ಸಂತ್ರಸ್ತೆ ವಿಟ್ಲ ಪೇಟೆ ಸಮೀಪದ ಕಸಬಾದ ಕಾಂಕ್ರೀಟ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಅದೇ ವೇಳೆ ದ್ವಿಚಕ್ರವಾಹನದಲ್ಲಿ ಬಂದ ಆರೋಪಿಯು ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಬಳಿ ವಿಟ್ಲ ಪೇಟೆಗೆ ಹೋಗುವ ದಾರಿ ಕೇಳಿದ್ದಾರೆ.

ದಾರಿ ಹೇಳುತ್ತಿದ್ದಾಗ ಆರೋಪಿಯು ಹಠಾತ್ತನೆ ತನ್ನ ಮೇಲೆ ಕೈ ಮಾಡಿದ್ದು, ಪ್ಯಾಂಟ್ ಬಿಚ್ಚಲು ಆರಂಭಿಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ತಕ್ಷಣವೇ ಆಘಾತಗೊಂಡ ಮಹಿಳೆಯು ಅಲ್ಲಿಂದ ಓಡಿ ತಪ್ಪಿಸಿಕೊಂಡಿದ್ದು, ಪೊಲೀಸರಿಗೆ ದೂರು ನೀಡಿದ್ದರು. ಆರೋಪಿ ವಿಟ್ಲ ಕಡೆಗೆ ತೆರಳಿದ್ದಾಗಿಯೂ ತಿಳಿಸಿದ್ದರು.

ಇದನ್ನೂ ಓದಿ: Hubballi-Dharwad: ಹುಬ್ಬಳ್ಳಿ-ಧಾರವಾಡದಲ್ಲಿ ಕುಡಿಯುವ ನೀರಿಗೆ ತತ್ವಾರ, ಶಾಶ್ವತ ಪರಿಹಾರಕ್ಕೆ ನಿವಾಸಿಗಳ ಆಗ್ರಹ

ನಂತರ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 (ಹಲ್ಲೆ ಅಥವಾ ಮಹಿಳೆಯ ಘನತೆಗೆ ಧಕ್ಕೆ ತರುವಂಥ ಅಪರಾಧ ಕೃತ್ಯ ಎಸಗುವುದು) ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿರುವುದಾಗಿ ‘ನ್ಯೂಸ್9’ ವರದಿ ಮಾಡಿದೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಮತ್ತು ನಂತರ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗುವುದು ಎಂದು ತನಿಖಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ