ನೀರಿನ ಸಮಸ್ಯೆ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ತರಕಾರಿ ಬೆಲೆ, ಇಲ್ಲಿದೆ ದರ ವಿವರ

ಮಳೆ ಕೊರತೆ, ನೀರಿನ ಬಿಕ್ಕಟ್ಟು, ತಾಪಮಾನ ಹೆಚ್ಚಳ, ಬೇಡಿಕೆ ಹೆಚ್ಚಳ ಮತ್ತಿತರ ಕಾರಣಗಳಿಂದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ತರಕಾರಿ ಬೆಲೆ ಗಗನಕ್ಕೆ ಏರತೊಡಗಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಯಾವ ತರಕಾರಿ ಬೆಲೆ ಎಷ್ಟಾಗಿದೆ ಎಂಬ ವಿವರ ಇಲ್ಲಿದೆ.

ನೀರಿನ ಸಮಸ್ಯೆ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ತರಕಾರಿ ಬೆಲೆ, ಇಲ್ಲಿದೆ ದರ ವಿವರ
ಸಾಂದರ್ಭಿಕ ಚಿತ್ರ
Follow us
|

Updated on: Mar 26, 2024 | 10:33 AM

ಮಂಗಳೂರು, ಮಾರ್ಚ್​​ 26: ದಕ್ಷಿಣ ಕನ್ನಡ (Dkashina Kannada) ಮತ್ತು ಉಡುಪಿ (Udupi) ಜಿಲ್ಲೆಗಳಲ್ಲಿ ತರಕಾರಿಗಳ ಬೆಲೆ (Vegetable Price) ಗಗನಕ್ಕೇರಿರುವುದು ವರದಿಯಾಗಿದೆ. ಮದುವೆ ಇನ್ನಿತರ ಸಮಾರಂಭಗಳ ಸೀಸನ್, ಹೆಚ್ಚುತ್ತಿರುವ ತಾಪಮಾನ ಮತ್ತು ನೀರಿನ ಸಮಸ್ಯೆ ತರಕಾರಿ ಬೆಲೆ ಗಣನೀಯವಾಗಿ ಏರಿಕೆಯಾಗಲು ಕಾರಣ ಎನ್ನಲಾಗಿದೆ. ಬೀನ್ಸ್, ಬೆಂಡೆಕಾಯಿ, ಟೊಮೆಟೋ, ನಿಂಬೆ ಸೇರಿದಂತೆ ಇತರ ತರಕಾರಿಗಳ ದರ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಹೆಚ್ಚಾಗುತ್ತಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಕೆಜಿಗೆ 100 ರೂ. ದಾಟಿದ ಬೀನ್ಸ್ ಬೆಲೆ

ಈ ಹಿಂದೆ ಸ್ಥಳೀಯ ಮಾರುಕಟ್ಟೆಯಲ್ಲಿ ಕೆಜಿಗೆ 50 ರಿಂದ 60 ರೂ.ವರೆಗೆ ಇದ್ದ ಬೀನ್ಸ್ ಬೆಲೆ ಈಗ ಗಗನಕ್ಕೇರಿದ್ದು, ಕೆಜಿಗೆ 100 ರೂ. ದಾಟಿದೆ. ಕರಾವಳಿ ಪ್ರದೇಶಕ್ಕೆ ಪ್ರಮುಖವಾಗಿ ಬೆಂಗಳೂರು ಹೊರವಲಯ ಮತ್ತು ಚಿಕ್ಕಮಗಳೂರಿನ ಮಾರುಕಟ್ಟೆಗಳಿಂದ ಬೀನ್ಸ್ ರವಾನೆಯಾಗುತ್ತಿದೆ. ಆದರೆ, ಬೆಂಗಳೂರಿನ ಹೊರವಲಯದಲ್ಲಿ ನೀರಿನ ಕೊರತೆಯಿಂದ ಇಳುವರಿ ಕಡಿಮೆಯಾಗಿದೆ. ಕರಾವಳಿ ಪ್ರದೇಶಗಳಲ್ಲಿಯೂ ನೀರಿನ ಪರಿಸ್ಥಿತಿ ಹದಗೆಟ್ಟಿದ್ದು, ತರಕಾರಿ ಬೆಳೆಗೆ ಮಾರಕವಾಗಿ ಪರಿಣಮಿಸಿದೆ. ಹೀಗಾಗಿ ನಿವಾಸಿಗಳು ದೂರದ ಜಿಲ್ಲೆಗಳ ತರಕಾರಿಗಳನ್ನು ಅವಲಂಬಿಸಬೇಕಾಗಿದೆ.

ಇದಕ್ಕೆ ವ್ಯತಿರಿಕ್ತವಾಗಿ, ಇತ್ತೀಚೆಗೆ ದಿಢೀರ್ ಏರಿಕೆ ಕಂಡಿದ್ದ ಬೆಳ್ಳುಳ್ಳಿ ಬೆಲೆ ಇದೀಗ ಕೆಜಿಗೆ 200 ರೂ.ಗೆ ಇಳಿಕೆಯಾಗಿದೆ. ಮತ್ತೊಂದೆಡೆ, ಇತ್ತೀಚಿನ ದಿನಗಳಲ್ಲಿ ನಿಂಬೆ ಹಣ್ಣಿನ ಬೆಲೆಯೂ ಏರಿಕೆಯಾಗಿದ್ದು, ಮಧ್ಯಮ ಗಾತ್ರದ ನಿಂಬೆ ಹಣ್ಣಿಗೆ ಏಳರಿಂದ ಎಂಟು ರೂ.ವರೆಗೆ ಮಾರಾಟವಾಗುತ್ತಿದೆ. ಸಗಟು ಮಾರುಕಟ್ಟೆಯಲ್ಲಿ ಆರರಿಂದ ಏಳು ರೂಪಾಯಿಗೆ ಮಾರಾಟವಾಗುತ್ತಿದೆ.

ಏತನ್ಮಧ್ಯೆ, ಶುಂಠಿ ಬೆಲೆ ಈಗ ಕೆಜಿಗೆ 160 ರಿಂದ 200 ರೂ.ವರೆಗೆ ಇದೆ. ಈರುಳ್ಳಿ ಕೆಜಿಗೆ 30 ರೂ.ಗೆ ಮಾರಾಟವಾಗುತ್ತಿದೆ. ಟೊಮೆಟೊ ಕೆಜಿಗೆ 25 ರೂ., ಸೀಬೆಕಾಯಿ ಕೆಜಿಗೆ 60 ರಿಂದ 70 ರೂ., ಹೀರೇಕಾಯಿ ಕೆಜಿಗೆ 40 ರೂ., ಬೆಂಡೆಕಾಯಿ 80 ರೂ., ಹಸಿರು ಬದನೆ 80 ರೂ.ಗೆ ಮಾರಾಟವಾಗುತ್ತಿದೆ.

ಇದನ್ನೂ ಓದಿ: ಕುಕ್ಕೆ ಸುಬ್ರಹ್ಮಣ್ಯ ಸಮೀಪ ನಕ್ಸಲರ ಚಲನವಲನ ಪತ್ತೆ; ಮನೆಗೆ ಭೇಟಿ ನೀಡಿ ಮೊಬೈಲ್ ಚಾರ್ಚ್ ಮಾಡಿರುವ ತಂಡ

ಮಳೆ ಕೊರತೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹಾಗೂ ಉಡುಪಿ ಜಿಲ್ಲೆಯ ಅನೇಕ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಉಂಟಾಗಿದೆ. ಪರಿಣಾಮವಾಗಿ ತರಕಾರಿ ಕೃಷಿಗೂ ಹೊಡೆತ ಬಿದ್ದಿದೆ. ಉಭಯ ಜಿಲ್ಲೆಗಳಿಗೆ ಅಗತ್ಯ ಇರುವ ಅಷ್ಟೂ ತರಕಾರಿಗಳನ್ನು ಹೊರಗಡೆಯಿಂದ ತರಿಸಿಕೊಳ್ಳುವಂತಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು