ಮಂಗಳೂರು: ಮಂಗಳೂರು ನಗರ ಹಾಗೂ ಸುತ್ತಾಮುತ್ತಲಿನ ಪ್ರದೇಶಗಳಿಗೆ ನೀರು ಪೂರೈಸುವ ತುಂಬೆ ಡ್ಯಾಂನಲ್ಲಿ(Thumbe Dam) ನಿರಂತರವಾಗಿ ನೀರು ಕಡಿಮೆಯಾಗುತ್ತಿದ್ದು ನೀರಿನ ಸಮಸ್ಯೆ(Water Crisis) ಎದುರಾಗುವ ಬಗ್ಗೆ ಈ ಹಿಂದೆ ವರದಿ ಮಾಡಲಾಗಿತ್ತು. ಈ ಸಂಬಂಧ ಜಿಲ್ಲಾಡಳಿತ ಸಭೆ ನಡೆಸಿ ಕೆಲವು ತೀರ್ಮಾನಗಳನ್ನು ತೆಗೆದುಕೊಂಡಿದೆ. ನೇತ್ರಾವತಿ ನದಿಯ ನೀರಿನ ಒಳಹರಿವು ಈಗಾಗಲೇ ನಿಂತಿರುವುದರಿಂದ ಮತ್ತು ಬೇಸಿಗೆ ಬಿರು ಬಿಸಿಲಿನಿಂದಾಗಿ ಮಂಗಳೂರು ನಗರ ಪಾಲಿಕೆಯ ತುಂಬೆ ಕಿಂಡಿ ಅಣೆಕಟ್ಟಿನಲ್ಲಿ ನೀರಿನ ಮಟ್ಟ ತೀವ್ರವಾಗಿ ಕುಸಿಯುತ್ತಿದೆ.
ಸಾರ್ವಜನಿಕರಿಗೆ ಈ ಬೇಸಿಗೆಯ ಅಂತ್ಯದವರೆಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ತೊಂದರೆಯಾಗದಂತೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮೇ 4 ರಿಂದ ರೇಷನಿಂಗ್ ಮೂಲಕ ನೀರು ಸರಬರಾಜು ಮಾಡುವುದು ಅನಿವಾರ್ಯವಾಗಿದೆ. ಈ ಬಗ್ಗೆ ಸಾಧಕ ಭಾದಕಗಳನ್ನು ಪರಿಶೀಲಿಸಿ ಜಿಲ್ಲಾಡಳಿತ ಸಭೆ ನಡೆಸಿ ಕೆಲವು ನಿರ್ಣಯಗಳನ್ನು ತೆಗೆದುಕೊಂಡಿದೆ.
ಇದನ್ನೂ ಓದಿ: ತುಂಬೆ ಡ್ಯಾಂನಲ್ಲಿ ಕೇವಲ 20 ದಿನಗಳಿಗೆ ಆಗುವಷ್ಟು ಮಾತ್ರ ನೀರು ಸಂಗ್ರಹ, ಮಂಗಳೂರು ನಗರಕ್ಕೆ ಜಲಕ್ಷಾಮ ಸಾಧ್ಯತೆ
ಮಂಗಳೂರಿಗೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ