ದಕ್ಷಿಣ ಕನ್ನಡದಲ್ಲಿ ಕೊರೊನಾ ಕೇಸ್ ಹೆಚ್ಚಳ: ಅದ್ದೂರಿ ಸ್ವಾತಂತ್ರ್ಯೋತ್ಸವಕ್ಕೆ ಬ್ರೇಕ್; ವಾರಾಂತ್ಯ ಕರ್ಫ್ಯೂ ಇರಲಿದೆ
Independence Day 2021: ವಾರಾಂತ್ಯ ಕರ್ಪ್ಯೂ ಹಿನ್ನೆಲೆ ಸಾರ್ವಜನಿಕರು ಅನಾವಶ್ಯಕವಾಗಿ ಮನೆಯಿಂದ ಹೊರಗೆ ಬರದಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ. ಈ ಮಧ್ಯೆಯೂ ಸ್ವಾತಂತ್ರ್ಯ ದಿನಾಚರಣೆಯ ಘನತೆಗೆ ಧಕ್ಕೆ ಬಾರದಂತೆ ಆಚರಿಸಬೇಕು ಎಂದು ಹೇಳಲಾಗಿದೆ.
ಮಂಗಳೂರು: ಕೊರೊನಾ ಪ್ರಕರಣಗಳ ಸಂಖ್ಯೆ ರಾಜ್ಯದಲ್ಲಿ ಹೆಚ್ಚಳವಾಗುತ್ತಿದೆ. ಕೊವಿಡ್19 ಸೋಂಕಿನ ಪ್ರಮಾನ ಸಂಪೂರ್ಣ ಕಡಿಮೆ ಆಗುವ ಸೂಚನೆ ಇನ್ನೂ ಕಂಡುಬರುತ್ತಿಲ್ಲ. ಕೊಂಚವೇ ಇಳಿದಂತೆ ಅನಿಸಿದರೂ ಮತ್ತೆ ಸೋಂಕು ಏರಿಕೆ ಆಗಿರುತ್ತದೆ. ಕರ್ನಾಟಕದ ನೆರೆಯ ರಾಜ್ಯಗಳಾದ ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಕೂಡ ಕೊರೊನಾ ಕೇಸ್ಗಳ ಪ್ರಮಾಣ ದಟ್ಟವಾಗಿದೆ. ಹೀಗಾಗಿ, ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ವಿಶೇಷ ಕಾಳಜಿ ವಹಿಸಲಾಗುತ್ತಿದೆ. ಕರ್ನಾಟಕ ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಗಡಿ ಜಿಲ್ಲೆಗಳಲ್ಲಿ ಹೆಚ್ಚುವರಿ ವಾರಾಂತ್ಯ ಕರ್ಫ್ಯೂ ಕೂಡ ಜಾರಿ ಮಾಡಲಾಗಿದೆ.
ಇದೀಗ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಕೇಸ್ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಆಗಸ್ಟ್ 15ರಂದು ಕೂಡ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿ ಇರುತ್ತದೆ ಎಂದು ಸೂಚಿಸಲಾಗಿದೆ. ಸ್ವಾತಂತ್ರ್ಯ ದಿನ ಆಗಿದ್ದರೂ ವೀಕೆಂಡ್ ಕರ್ಫ್ಯೂ ಇರಲಿದೆ. ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಸ್ವಾತಂತ್ರ್ಯೋತ್ಸವ ದಿನಕ್ಕೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ನಿಯಮ ಪಾಲಿಸಿ ಸ್ವಾತಂತ್ರ್ಯೋತ್ಸವ ಆಚರಿಸಲು ಸೂಚನೆ ನೀಡಿದ್ದಾರೆ. ಹೆಚ್ಚು ಜನರನ್ನು ಸೇರಿಸದೇ ಧ್ವಜಾರೋಹಣ ಮಾಡಬೇಕು ಎಂದು ಆದೇಶ ನೀಡಲಾಗಿದೆ.
ದಕ್ಷಿಣ ಕನ್ನಡದಲ್ಲಿ ಕಳೆದ ಎರಡು ದಿನಗಳಿಂದ ಬೆಂಗಳೂರಿಗಿಂತಲೂ ಅಧಿಕ ಸಂಖ್ಯೆಯಲ್ಲಿ ಕೊರೊನಾ ಪ್ರಕರಣಗಳು ವರದಿ ಆಗಿದೆ. ಹೀಗಾಗಿ, ಸಾರ್ವಜನಿಕರು ಶಿಷ್ಟಾಚಾರ ಪಾಲಿಸಿ ಜವಾಬ್ದಾರಿಯುತವಾಗಿ ಸ್ವಾತಂತ್ರ್ಯ ದಿನ ಆಚರಿಸಲು ಸೂಚನೆ ಕೊಡಲಾಗಿದೆ. ಧ್ವಜಾರೋಹಣ ಸ್ಥಳದಲ್ಲಿ ಹೆಚ್ಚು ಜನ ಸೇರಿಸದೇ ಕೊವಿಡ್ ನಿಯಮ ಪಾಲಿಸಲು ಹೇಳಲಾಗಿದೆ. ವಾರಾಂತ್ಯ ಕರ್ಪ್ಯೂ ಹಿನ್ನೆಲೆ ಸಾರ್ವಜನಿಕರು ಅನಾವಶ್ಯಕವಾಗಿ ಮನೆಯಿಂದ ಹೊರಗೆ ಬರದಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ. ಈ ಮಧ್ಯೆಯೂ ಸ್ವಾತಂತ್ರ್ಯ ದಿನಾಚರಣೆಯ ಘನತೆಗೆ ಧಕ್ಕೆ ಬಾರದಂತೆ ಆಚರಿಸಬೇಕು ಎಂದು ಹೇಳಲಾಗಿದೆ.
ಇದನ್ನೂ ಓದಿ: Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 1,826 ಜನರಿಗೆ ಕೊರೊನಾ ದೃಢ; 33 ಮಂದಿ ಸಾವು
Wedding Loan: ಕೊರೊನಾ ಎರಡನೇ ಅಲೆಯ ವೇಳೆ ಮದುವೆ ಉದ್ದೇಶಕ್ಕೆ ಸಾಲ ಪಡೆದವರು ಹೆಚ್ಚು
(Weekend Curfew in effect at Mangaluru District on Independence Day 2021 amid Coronavirus Covid19 Case)