ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆ, ಮಳೆಗಾಲ ಮುಗಿಯುವವರೆಗೆ ಜಿಲ್ಲೆಯಲ್ಲಿ ಟ್ರೆಕ್ಕಿಂಗ್ ನಿಷೇಧ

ದಕ್ಷಿಣ ಕನ್ನಡ (Dakshina Kannada)  ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ ಮಳೆಗಾಲ ಮುಗಿಯುವವರೆಗೆ ಜಿಲ್ಲೆಯಲ್ಲಿ ಟ್ರೆಕ್ಕಿಂಗ್ ನಿಷೇಧಿಸಿ ಮತ್ತು ಜಿಲ್ಲೆಯ ಜಲ ಪ್ರದೇಶಗಳಲ್ಲೂ ಅನಧಿಕೃತ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ. ಜೊತೆಗೆ ಆದೇಶ ಉಲ್ಲಂಘಿಸಿದ್ರೆ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮದ ಎಚ್ಚರಿಕೆ ನೀಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆ, ಮಳೆಗಾಲ ಮುಗಿಯುವವರೆಗೆ ಜಿಲ್ಲೆಯಲ್ಲಿ ಟ್ರೆಕ್ಕಿಂಗ್ ನಿಷೇಧ
ಮಳೆಗಾಲ ಮುಗಿಯುವವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಟ್ರೆಕ್ಕಿಂಗ್ ನಿಷೇಧ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 06, 2024 | 4:19 PM

ದಕ್ಷಿಣ ಕನ್ನಡ, ಜು.06: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದೆ. ಅದರಲ್ಲೂ ಕರಾವಳಿ ಭಾಗದಲ್ಲಿ ಮಳೆರಾಯ ಅವಾಂತರಗಳನ್ನು ಸೃಷ್ಟಿಸಿದ್ದಾನೆ. ಅದರಂತೆ ದಕ್ಷಿಣ ಕನ್ನಡ(Dakshina Kannada)  ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ ಮಳೆಗಾಲ ಮುಗಿಯುವವರೆಗೆ ಜಿಲ್ಲೆಯಲ್ಲಿ ಟ್ರೆಕ್ಕಿಂಗ್ ನಿಷೇಧಿಸಿ ಮತ್ತು ಜಿಲ್ಲೆಯ ಜಲ ಪ್ರದೇಶಗಳಲ್ಲೂ ಅನಧಿಕೃತ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

ಪ್ರವಾಸೋದ್ಯಮ ಸಂಬಂಧ ಗಿರಿಶಿಖರಗಳ ಚಾರಣ ನಿಷೇಧಿಸಿ ಆದೇಶ

ಹೌದು, ಭಾರಿ ಮಳೆಯಿಂದ ಭೂಕುಸಿತ, ಗುಡ್ಡ ಕುಸಿತ, ಮರ ಬೀಳುವ ಸಾಧ್ಯತೆ ಇರುವುದರಿಂದ  ಮುಂಜಾಗೃತ ಕ್ರಮವಾಗಿ ಜಿಲ್ಲೆಯ ಶಿಖರಗಳ ಟ್ರೆಕ್ಕಿಂಗ್, ಸಾಹಸ ಚಟುವಟಿಕೆಗಳಿಗೆ ನಿಷೇಧ ಹೇರಲಾಗಿದೆ. ಅದರಂತೆ ಜಲಪಾತ, ಝರಿ, ನದಿ, ಸಮುದ್ರ, ಜಲಾಶಯದ ಪ್ರದೇಶಗಳಲ್ಲೂ ನಿರ್ಬಂಧಿಸಿಲಾಗಿದೆ. ಇನ್ನು ಆದೇಶ ಉಲ್ಲಂಘಿಸಿದ್ರೆ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮದ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ:ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿ ಕರ್ನಾಟಕದ ಹಲವೆಡೆ ಭಾರಿ ಮಳೆ: ಪ್ರವಾಸಿ ತಾಣ, ಜಲಪಾತಗಳಿಗೆ ಪ್ರವೇಶ ನಿರ್ಬಂಧ

ಪಡುಕರೆ ಬೀಚಿನಲ್ಲಿ ಪ್ರವಾಸಿಗರ ಹುಚ್ಚಾಟ

ಉಡುಪಿ: ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು, ಬಾರಿ ಮಳೆಗೆ ಕಡಲು ಪ್ರಕ್ಷಬ್ಧವಾಗಿದೆ. ಉಡುಪಿಯ ಪಡುಕರೆ ಬೀಚ್​ನಲ್ಲಿ ರಕ್ಕಸಗಾತ್ರದ ಅಲೆಗಳು ಅಬ್ಬರಿಸುತ್ತಿವೆ. ಈ ಮಧ್ಯೆ ಪಡುಕರೆ ಬೀಚಿನಲ್ಲಿ ಪ್ರವಾಸಿಗರ ಹುಚ್ಚಾಟ ಮೀತಿಮೀರಿದೆ. ಕಳೆದ ಮೂರು ದಿನದಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಜಿಲ್ಲೆಯ ಬಹುತೇಕ ಪ್ರವಾಸಿ ತಾಣಗಳಿಗೆ ಜಿಲ್ಲಾಡಳಿತ ನಿಷೇಧ ಹೇರಿದೆ. ಆದರೂ ಸಮುದ್ರ ತಡೆಗೋಡೆಯ ಮಧ್ಯೆ ನಿಂತು ಪ್ರವಾಸಿಗರ ರಿಸ್ಕಿ ಸೆಲ್ಫಿ ತೆಗೆದುಕೊಳ್ಳುವ ಮೂಲಕ ಹುಚ್ಚಾಟ ಮಾಡುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉದಾಹರಣೆ ಮೂಲಕ ಇಕ್ಕಟ್ಟಿನ ಪರಿಸ್ಥಿತಿ ವಿವರಿಸಿದ ರಮೇಶ್ ಅರವಿಂದ್
ಉದಾಹರಣೆ ಮೂಲಕ ಇಕ್ಕಟ್ಟಿನ ಪರಿಸ್ಥಿತಿ ವಿವರಿಸಿದ ರಮೇಶ್ ಅರವಿಂದ್
ಗೋಡೌನ್‌ನಲ್ಲಿ ಮೂಟೆಗಳ ಅಡಿ ಸಿಲುಕಿದ ಕಾರ್ಮಿಕರು; ಓರ್ವ ಸಾವು
ಗೋಡೌನ್‌ನಲ್ಲಿ ಮೂಟೆಗಳ ಅಡಿ ಸಿಲುಕಿದ ಕಾರ್ಮಿಕರು; ಓರ್ವ ಸಾವು
ಹಬ್ಬ ಮುಗಿಯುತ್ತಿದ್ದಂತೆಯೇ ಗಣೇಶನಿಗೆ ಹೀಗಾ ಅವಮಾನ ಮಾಡುವುದು..!
ಹಬ್ಬ ಮುಗಿಯುತ್ತಿದ್ದಂತೆಯೇ ಗಣೇಶನಿಗೆ ಹೀಗಾ ಅವಮಾನ ಮಾಡುವುದು..!
ಸ್ಫೋಟಕ್ಕೆ ಉಗ್ರರ ಸಂಚು: ಕರ್ನಾಟಕ ಬಿಜೆಪಿ ಮುಖ್ಯ ಕಚೇರಿಗೆ ಭದ್ರತೆ ಹೆಚ್ಚಳ
ಸ್ಫೋಟಕ್ಕೆ ಉಗ್ರರ ಸಂಚು: ಕರ್ನಾಟಕ ಬಿಜೆಪಿ ಮುಖ್ಯ ಕಚೇರಿಗೆ ಭದ್ರತೆ ಹೆಚ್ಚಳ
ಧ್ರುವ ಸರ್ಜಾ ಮ್ಯಾನೇಜರ್​ ಬಂಧನದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್​
ಧ್ರುವ ಸರ್ಜಾ ಮ್ಯಾನೇಜರ್​ ಬಂಧನದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್​
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ವೈದ್ಯ; ಕುಡಿದ ಮತ್ತಿನಲ್ಲಿ ಬಿದ್ದು ಹೊರಳಾಟ
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ವೈದ್ಯ; ಕುಡಿದ ಮತ್ತಿನಲ್ಲಿ ಬಿದ್ದು ಹೊರಳಾಟ
ಗೃಹಲಕ್ಷ್ಮಿ ಯೋಜನೆಗೆ ನೀಡಲು ಸರ್ಕಾರದ ಬಳಿ ಹಣ ಇಲ್ವಾ?
ಗೃಹಲಕ್ಷ್ಮಿ ಯೋಜನೆಗೆ ನೀಡಲು ಸರ್ಕಾರದ ಬಳಿ ಹಣ ಇಲ್ವಾ?
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ಮೈಸೂರು ದಸರಾ ಆನೆಗಳ ಮಾವುತ, ಕಾವಾಡಿಗರಿಗೆ ಹಾಟ್​​ ಬಾಕ್ಸ್​​ ಗಿಫ್ಟ್​​
ಮೈಸೂರು ದಸರಾ ಆನೆಗಳ ಮಾವುತ, ಕಾವಾಡಿಗರಿಗೆ ಹಾಟ್​​ ಬಾಕ್ಸ್​​ ಗಿಫ್ಟ್​​
ವಿದ್ಯಾರ್ಥಿಗಳ ಮುಂದೆ ಮಾದಕ ಮೈಮಾಟ ತೋರಿಸಿಕೊಂಡು ನೃತ್ಯ ಮಾಡಿದ ಶಿಕ್ಷಕಿ
ವಿದ್ಯಾರ್ಥಿಗಳ ಮುಂದೆ ಮಾದಕ ಮೈಮಾಟ ತೋರಿಸಿಕೊಂಡು ನೃತ್ಯ ಮಾಡಿದ ಶಿಕ್ಷಕಿ