ದಕ್ಷಿಣ ಕನ್ನಡ, ಜು.06: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದೆ. ಅದರಲ್ಲೂ ಕರಾವಳಿ ಭಾಗದಲ್ಲಿ ಮಳೆರಾಯ ಅವಾಂತರಗಳನ್ನು ಸೃಷ್ಟಿಸಿದ್ದಾನೆ. ಅದರಂತೆ ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ ಮಳೆಗಾಲ ಮುಗಿಯುವವರೆಗೆ ಜಿಲ್ಲೆಯಲ್ಲಿ ಟ್ರೆಕ್ಕಿಂಗ್ ನಿಷೇಧಿಸಿ ಮತ್ತು ಜಿಲ್ಲೆಯ ಜಲ ಪ್ರದೇಶಗಳಲ್ಲೂ ಅನಧಿಕೃತ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.
ಹೌದು, ಭಾರಿ ಮಳೆಯಿಂದ ಭೂಕುಸಿತ, ಗುಡ್ಡ ಕುಸಿತ, ಮರ ಬೀಳುವ ಸಾಧ್ಯತೆ ಇರುವುದರಿಂದ ಮುಂಜಾಗೃತ ಕ್ರಮವಾಗಿ ಜಿಲ್ಲೆಯ ಶಿಖರಗಳ ಟ್ರೆಕ್ಕಿಂಗ್, ಸಾಹಸ ಚಟುವಟಿಕೆಗಳಿಗೆ ನಿಷೇಧ ಹೇರಲಾಗಿದೆ. ಅದರಂತೆ ಜಲಪಾತ, ಝರಿ, ನದಿ, ಸಮುದ್ರ, ಜಲಾಶಯದ ಪ್ರದೇಶಗಳಲ್ಲೂ ನಿರ್ಬಂಧಿಸಿಲಾಗಿದೆ. ಇನ್ನು ಆದೇಶ ಉಲ್ಲಂಘಿಸಿದ್ರೆ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮದ ಎಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿ:ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿ ಕರ್ನಾಟಕದ ಹಲವೆಡೆ ಭಾರಿ ಮಳೆ: ಪ್ರವಾಸಿ ತಾಣ, ಜಲಪಾತಗಳಿಗೆ ಪ್ರವೇಶ ನಿರ್ಬಂಧ
ಉಡುಪಿ: ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು, ಬಾರಿ ಮಳೆಗೆ ಕಡಲು ಪ್ರಕ್ಷಬ್ಧವಾಗಿದೆ. ಉಡುಪಿಯ ಪಡುಕರೆ ಬೀಚ್ನಲ್ಲಿ ರಕ್ಕಸಗಾತ್ರದ ಅಲೆಗಳು ಅಬ್ಬರಿಸುತ್ತಿವೆ. ಈ ಮಧ್ಯೆ ಪಡುಕರೆ ಬೀಚಿನಲ್ಲಿ ಪ್ರವಾಸಿಗರ ಹುಚ್ಚಾಟ ಮೀತಿಮೀರಿದೆ. ಕಳೆದ ಮೂರು ದಿನದಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಜಿಲ್ಲೆಯ ಬಹುತೇಕ ಪ್ರವಾಸಿ ತಾಣಗಳಿಗೆ ಜಿಲ್ಲಾಡಳಿತ ನಿಷೇಧ ಹೇರಿದೆ. ಆದರೂ ಸಮುದ್ರ ತಡೆಗೋಡೆಯ ಮಧ್ಯೆ ನಿಂತು ಪ್ರವಾಸಿಗರ ರಿಸ್ಕಿ ಸೆಲ್ಫಿ ತೆಗೆದುಕೊಳ್ಳುವ ಮೂಲಕ ಹುಚ್ಚಾಟ ಮಾಡುತ್ತಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ