AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೂಮ್‌ಮೇಟ್ ಯುವತಿಯರ ಬಟ್ಟೆ ಬದಲಿಸುವ ವಿಡಿಯೋ ಮಾಡಿ ವೈರಲ್ ಮಾಡಿದ್ದವಳು ಅರೆಸ್ಟ್​

ರೂಮ್​ ಮೇಟ್​ ಯುವತಿಯರ ಬಟ್ಟೆ ಬದಲಾಯಿಸುವುದನ್ನು ರಹಸ್ಯವಾಗಿ ವಿಡಿಯೋ ಮಾಡಿ ಹರಿಬಿಟ್ಟಿದ್ದ ಮತ್ತೋರ್ವ ಯುವತಿ ಸಿಕ್ಕಿಬಿದ್ದಿದ್ದಾಳೆ. ನಂಬಿಕೆ ಮೇಲೆ ರೂಮ್ ನಲ್ಲಿಟ್ಟುಕೊಂಡಿದ್ದಕ್ಕೆ ಈ ರೀತಿಯ ಮಣ್ಣ ತಿನ್ನುವ ಕೆಲಸ ಮಾಡಿ ಇದೀಗ ಪೊಲೀಸರ ಅತಿಥಿಯಾಗಿದ್ದಾಳೆ. ಮೊನ್ನೆ ಅಷ್ಟೇ ಕಾರ್ಕಳದ ಅಭಿಷೇಕ್ ಎನ್ನುವ ಯುವಕ ಬರೆದಿಟ್ಟಿದ್ದ ಡೆತ್​ ನೋಟ್​ ನಲ್ಲೂ ಸಹ ಬಂಧಿತ ಯುವತಿ ಹೆಸರು ಸಹ ಉಲ್ಲೇಖಿಸಿದ್ದ. ಅಲ್ಲದೇ ಈಕೆಯ ಬಂಡವಾಳ ಸಹ ಬಿಚ್ಚಿಟ್ಟಿದ್ದ.

ರೂಮ್‌ಮೇಟ್  ಯುವತಿಯರ ಬಟ್ಟೆ ಬದಲಿಸುವ ವಿಡಿಯೋ ಮಾಡಿ ವೈರಲ್ ಮಾಡಿದ್ದವಳು ಅರೆಸ್ಟ್​
ಅಭಿಷೇಕ್ (ಮೃತ ಯುವಕ), ನಿರೀಕ್ಷಾ (ಬಂಧಿತ ಆರೋಪಿ)
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Oct 19, 2025 | 6:47 PM

Share

ಮಂಗಳೂರು (ಅಕ್ಟೋಬರ್ 19): ಇಬ್ಬರು ಯುವತಿಯರ ಬಟ್ಟೆ ಬದಲಾಯಿಸುವುದನ್ನು ರಹಸ್ಯವಾಗಿ ಚಿತ್ರೀಕರಿಸಿ ವಿಡಿಯೋ ವೈರಲ್ ಮಾಡಿದ ಆರೋಪದ ಮೇಲೆ ಯುವತಿಯನ್ನ ಮಂಗಳೂರಿನ (Mangaluru) ಕದ್ರಿ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಕಲಶದ ನಿರೀಕ್ಷಾ ಬಂಧನವಾಗಿರುವ ಯುವತಿ. ನಿರೀಕ್ಷಾ ಹಾಗೂ ಇನ್ನಿಬ್ಬರು ಯುವತಿಯರು ಸೇರಿಕೊಂಡು ಕುದ್ಕೋರಿಗುಡ್ಡೆಯ ಬಾಡಿಗೆ ಮನೆಯಲ್ಲಿ ಒಟ್ಟಿಗೆ ವಾಸಿಸುತ್ತಿದ್ದರು. ಆದ್ರೆ, ನಿರೀಕ್ಷಾ ತನ್ನ ರೂಮ್​​ ಮೇಟ್ ಯುವತಿಯರು ಬಟ್ಟೆ ಬದಲಿಸುವುದನ್ನು ವಿಡಿಯೋ ಮಾಡಿಕೊಂಡು ವೈರಲ್ ಮಾಡಿದ್ದಾಳೆ. ಈ ಸಂಬಂಧ ಇದೀಗ ನಿರೀಕ್ಷಾಳನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಅತ್ತ  ಆತ್ಮಹತ್ಯೆ ಮಾಡಿಕೊಂಡಿದ್ದ ಕಾರ್ಕಳದ ಅಭಿಷೇಕ್ ತನ್ನ ಡೆತ್ ನೋಟ್‌ನಲ್ಲಿ ಇದೇ ನಿರೀಕ್ಷಾಳ ಹೆಸರು ಉಲ್ಲೇಖ ಮಾಡಿದ್ದ. ಹೀಗಾಗಿ ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ.

ಮಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಯುವತಿಯರು ಕುದ್ಕೋರಿಗುಡ್ಡೆಯ ಬಾಡಿಗೆ ಮನೆಯಲ್ಲಿ ಒಟ್ಟಿಗೆ ವಾಸಿಸುತ್ತಿದ್ದರು. ಯುವತಿಯರ ಬಟ್ಟೆ ಬದಲಾಯಿಸುವ ದೃಶ್ಯವನ್ನು ನಿರೀಕ್ಷಾ ರಹಸ್ಯವಾಗಿ ವಿಡಿಯೋ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ. ಈ ವಿಡಿಯೋವನ್ನು ಉಡುಪಿ ಜಿಲ್ಲೆಯ ಕಾರ್ಕಳದ ಮೃತ ಅಭಿಷೇಕ್‌ಗೆ ಕಳುಹಿಸಿದ್ದಾಳೆ ಎಂದು ತಿಳಿದುಬಂದಿದೆ. ಅಭಿಷೇಕ್, ಮಂಗಳೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಶಿಯನ್ ಆಗಿದ್ದವನು, ಕಳೆದ ಅಕ್ಟೋಬರ್ 09 ರಂದು ಕಾರ್ಕಳದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ.

ಇದನ್ನೂ ಓದಿ: ಕಾರ್ಕಳ ಯುವಕನ ಸಾವಿನ ಹಿಂದೆ ಹನಿಟ್ರ್ಯಾಪ್ ಜಾಲ? ಡೆತ್ ನೋಟ್​​ನಿಂದ ಸ್ಪೋಟಕ ಅಂಶ ಬಯಲು

ಆದ್ರೆ, ಅಭಿಷೇಕ್ ಆತ್ಮಹತ್ಯೆಗೂ ಮುನ್ನ ಸುದೀರ್ಘ  ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ನಿರೀಕ್ಷಾ ಸೇರಿದಂತೆ ಕೆಲವರ ಹೆಸರು ಉಲ್ಲೇಖಿಸಿ ಹನಿಟ್ರ್ಯಾಪ್ ಆರೋಪ ಮಾಡಿದ್ದಾನೆ. ಜೊತೆಗೆ ನಿರೀಕ್ಷಾ ತನ್ನ ರೂಂಮೇಟ್‌ಗಳಾದ ಇಬ್ಬರು ಯುವತಿಯರ ವಿಡಿಯೋ ಚಿತ್ರೀಕರಿಸಿ ವೈರಲ್ ಮಾಡಿದ್ದಾಳೆ ಎಂದು ಉಲ್ಲೇಖಿಸಿದ್ದ.

ಸಾಯುವ ಮುನ್ನ ಅಭಿಷೇಕ್ ‘truth group’ ಎಂಬ ವಾಟ್ಸಾಪ್ ಗುಂಪು ರಚಿಸಿ, ಅದರಲ್ಲಿ ಈ ಯುವತಿಯರ ವಿಡಿಯೋ ಸೇರಿದಂತೆ ಕೆಲವು ವಿಡಿಯೋಗಳನ್ನು ಹರಿಬಿಟ್ಟಿದ್ದಾನೆ.ಈ ಘಟನೆಯಿಂದ ಆಘಾತಗೊಂಡ ಸಂತ್ರಸ್ತ ಯುವತಿಯರು ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಯುವತಿಯರ ದೂರು ದಾಖಲಿಸಿಕೊಂಡ ಕದ್ರಿ ಪೊಲೀಸರು ರಹಸ್ಯವಾಗಿ ವಿಡಿಯೋ ರೆಕಾರ್ಡ್ ಮಾಡಿದ್ದ ನಿರೀಕ್ಷಾಳನ್ನು ಬಂಧಿಸಿದ್ದಾರೆ.

ಸದ್ಯ ಆರೋಪಿ ವಿರುದ್ಧ ಬಿಎನ್‌ಎಸ್ 77, 78(2), 294(2)(a) ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ವಿಡಿಯೋವನ್ನು ಕಳೆದ ಒಂದು ವರ್ಷದ ಹಿಂದೆ ಚಿತ್ರೀಕರಿಸಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ. ಪ್ರಕರಣ ಸಂಬಂಧ ಉಡುಪಿ ಜಿಲ್ಲೆಯ ಕಾರ್ಕಳ ಪೊಲೀಸರು ಅಭಿಷೇಕ್‌ನ ಆತ್ಮಹತ್ಯೆಗೆ ಸಂಬಂಧಿಸಿದ ತನಿಖೆಯನ್ನು ನಡೆಸುತ್ತಿದ್ದಾರೆ. ಪ್ರಕರಣದ ಕುರಿತು ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

Published On - 6:28 pm, Sun, 19 October 25

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ