ದಕ್ಷಿಣ ಕನ್ನಡ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬಳಿಗೆ ಅಪರಿಚಿತ ವ್ಯಕ್ತಿಯೊಬ್ಬರು ಲೈಂಗಿಕ ಕಿರುಕುಳ ನೀಡಿದ ಘಟನೆ ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯ ಪುತ್ತೂರು ತಾಲೂಕಿನ ಕಬಕದ ಮುರ ಗ್ರಾಮದ ಬಳಿ ಗುರುವಾರ(ಜೂ.22) ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 20 ವರ್ಷದ ಯುವತಿಯೊಬ್ಬಳು ಕೆಎ 17 ಎಫ್ 1293 ನೋಂದಣಿ ಸಂಖ್ಯೆಯ ಉಪ್ಪಳ-ಪುತ್ತೂರು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ತನ್ನ ತಾಯಿಯೊಂದಿಗೆ ಬೆಳಿಗ್ಗೆ 11 ಗಂಟೆ ಸುಮಾರಿಗೆ ಪುತ್ತೂರಿಗೆ ಪ್ರಯಾಣಿಸುತ್ತಿದ್ದಳು. ಈ ವೇಳೆ ಯುವತಿಯ ಹಿಂದೆ ಕುಳಿತಿದ್ದ ಅಪರಿಚಿತ ವ್ಯಕ್ತಿ ತನ್ನನ್ನು ಮುಟ್ಟಿದ್ದಾಗಿ ಎಂದು ಆರೋಪಿಸಿದ್ದರೆಂದು ಪೊಲೀಸರು ತಿಳಿಸಿದ್ದಾರೆ.
ಹೌದು ಬಸ್ಸಿನಲ್ಲಿ ಪ್ರಯಾಣಿಸುವಾಗ ಇಂತಹ ಘಟನೆ ನಡೆದಿದ್ದು, ಅಪರಿಚಿತ ವ್ಯಕ್ತಿ ಎರಡನೇ ಬಾರಿಗೆ ಅದೇ ರೀತಿಯಾಗಿ ಮಾಡಿದಾಗ, ಮಹಿಳೆ ತನ್ನ ಕಾಲು ಸರಿಸಿದ್ದಾಳೆ. ಈ ಸಮಯದಲ್ಲಿ, ಅಪರಿಚಿತ ವ್ಯಕ್ತಿ ತನ್ನ ಕೈಗಳನ್ನು ಸೀಟ್ಗಳ ನಡುವೆ ಇಟ್ಟು, ತನ್ನ ಸೊಂಟದ ಕೆಳಗೆ ಮುಟ್ಟಿದ್ದಾನೆ. ಬಳಿಕ ಆತ ಪುತ್ತೂರಿನ ಬೊಳ್ವಾರ ಬಳಿ ಬಸ್ನಿಂದ ಇಳಿದಿದ್ದಾನೆ. ನಂತರ ಗುರುವಾರ ಸಂಜೆ 5.30ರ ಸುಮಾರಿಗೆ ಮಹಿಳೆ ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದಾರೆ. ಈ ಕುರಿತು ದಕ್ಷಿಣ ಕನ್ನಡ ಪೊಲೀಸರು ಐಪಿಸಿ ಸೆಕ್ಷನ್ 354ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.
ಇದನ್ನೂ ಓದಿ:ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಯೂತ್ ಕಾಂಗ್ರೆಸ್ ಮುಖ್ಯಸ್ಥ ಬಿವಿ ಶ್ರೀನಿವಾಸ್‌ಗೆ ಸುಪ್ರೀಂಕೋರ್ಟ್ ಜಾಮೀನು
2 ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ-ಇಬ್ಬರು ಸವಾರರ ಸಾವು
ಬಾಗಲಕೋಟೆ: ಬಾದಾಮಿ ಹೊರವಲಯದಲ್ಲಿ ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಹಂಗರಗಿ ಗ್ರಾಮದ ನಿವಾಸಿ ಸುಭಾಷ್ ಗಾಣಿಗೇರ(28), ಮಂಗಳಗುಡ್ಡ ಗ್ರಾಮದ ಕೆಂಚಪ್ಪ ಮಾದರ(25) ಮೃತ ಸವಾರರು. ಮತ್ತೊರ್ವನ ಸ್ಥಿತಿ ಗಂಭೀರವಾಗಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಾದಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:27 pm, Fri, 23 June 23