ದಕ್ಷಿಣ ಕನ್ನಡ: ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಯುವತಿ ಆತ್ಮಹತ್ಯೆ

ತಾನು ಕೂತಿದ್ದ ಸೀಟ್​ನಲ್ಲಿ ಬ್ಯಾಗ್ ಬಿಟ್ಟು ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಿಗೇಶಿಯ ಪಡಸಾಲೆಹಟ್ಟಿ ನಿವಾಸಿ ಎಂ.ಜಿ.ನಯನಾ (27) ಮೃತ ದುರ್ದೈವಿ.

ದಕ್ಷಿಣ ಕನ್ನಡ: ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಯುವತಿ ಆತ್ಮಹತ್ಯೆ
ಆತ್ಮಹತ್ಯೆ ಮಾಡಿಕೊಂಡ ಯುವತಿ
Edited By: ವಿವೇಕ ಬಿರಾದಾರ

Updated on: Feb 15, 2024 | 11:01 AM

ಮಂಗಳೂರು, ಫೆಬ್ರವರಿ 15: ಚಲಿಸುತ್ತಿದ್ದ ರೈಲಿನಿಂದ (Train) ನೇತ್ರಾವತಿ ನದಿಗೆ (Netravati River) ಹಾರಿ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ (Dakshin Kannada) ಜಿಲ್ಲೆಯ ಬಂಟ್ವಾಳ (Bantwal) ತಾಲೂಕಿನಲ್ಲಿ ನಡೆದಿದೆ. ತುಮಕೂರು (Tumkur) ಜಿಲ್ಲೆ ಮಧುಗಿರಿ (Madhugiri) ತಾಲೂಕಿನ ಮಿಡಿಗೇಶಿಯ ಪಡಸಾಲೆಹಟ್ಟಿ ನಿವಾಸಿ ಎಂ.ಜಿ.ನಯನಾ (27) ಮೃತ ದುರ್ದೈವಿ. ರೈಲಿನಲ್ಲಿ ತಾನು ಕೂತಿದ್ದ ಸೀಟ್​ನಲ್ಲಿ ಬ್ಯಾಗ್ ಬಿಟ್ಟು ಯುವತಿ ನದಿಗೆ ಹಾರಿದ್ದಾರೆ. ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹುಚ್ಚುನಾಯಿ ಕಚ್ಚಿ ವ್ಯಕ್ತಿ ಸಾವು

ಮೈಸೂರು: ಹುಚ್ಚುನಾಯಿ ಕಚ್ಚಿ ವ್ಯಕ್ತಿ ಮೃತಪಟ್ಟಿದ್ದು, ಸೂಕ್ತ ಪರಿಹಾರಕ್ಕೆ ಕುಟುಂಬಸ್ಥರು ಒತ್ತಾಯಿಸಿದ್ದಾರೆ. ಹುಣಸೂರು ತಾಲ್ಲೂಕು ಹೆಗ್ಗಂದೂರು ಗ್ರಾಮದ ಸುರೇಶ (48) ಮೃತ ದುರ್ದೈವಿ. ಸುರೇಶ ಜಮೀನಿನಲ್ಲಿ ಕೆಲಸ ಮಾಡಿ ವಾಪಸ್ಸು ಬರುವಾಗ ಹುಚ್ಚುನಾಯಿ ಕಚ್ಚಿತ್ತು. ಇದರಿಂದ ತೀವ್ರವಾಗಿ ಗಾಯಗೊಂಡಿಂದ ಸುರೇಶ್ ಅವರನ್ನು ಹುಣಸೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸುರೇಶ್ ಮೃಪಟ್ಟಿದ್ದಾರೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಶಿಕ್ಷಕನಿಂದ ಮಾನಹಾನಿ ಮೆಸೇಜ್ ರವಾನೆ; ಎಸ್​ಡಿಎಂ ಶಾಲೆಯಲ್ಲೇ ವಿದ್ಯಾರ್ಥಿನಿ ಆತ್ಮಹತ್ಯೆ ಯತ್ನ, ಸಾವು

32 ಕುರಿಗಳ ನಿಗೂಢ ಸಾವು

ಇನ್ನು ನಂಜನಗೂಡು ತಾಲೂಕಿನ ಕೂಗಲೂರು ಗ್ರಾಮದಲ್ಲಿ 32 ಕುರಿಗಳು ನಿಗೂಢವಾಗಿ ಮೃತಪಟ್ಟಿವೆ. ತುಮಕೂರು ಜಿಲ್ಲೆ ಬಾಣಗೆರೆ ಗ್ರಾಮದ ಕುರಿಗಾಹಿಗಳಾದ ರಂಗಸ್ವಾಮಿ, ರಘು, ಜಯಣ್ಣ ಎಂಬುವರು 4 ತಿಂಗಳ ಹಿಂದೆ 400ಕ್ಕೂ ಹೆಚ್ಚು ಕುರಿಗಳ ಜೊತೆ ಕೂಗಲೂರು ಗ್ರಾಮಕ್ಕೆ ಬಂದಿದ್ದರು. ಇದೀಗ 32 ಕುರಿಗಳು ಮೃತಪಟ್ಟಿದ್ದು, ಕುರಿಗಾಹಿಗಳಿಗೆ ದಿಕ್ಕು ತೋಚದಂತಾಗಿದೆ. ಸ್ಥಳಕ್ಕೆ ಪಶು ವೈದ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us